ಸಮ್ಮಿಶ್ರ ಸರ್ಕಾರದಿಂದ ನೀರಾವರಿ ಯೋಜನೆ ನಿರ್ಲಕ್ಷ್ಯ
Team Udayavani, Dec 9, 2018, 4:04 PM IST
ಯಲಬುರ್ಗಾ: ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಪ್ಪಳ ಏತ ನೀರಾವರಿ ಯೋಜನೆಗಳಿಗೆ ಹಣ ನೀಡಲಿಲ್ಲ. ಅಷ್ಟೇ ಅಲ್ಲದೇ ಪ್ರಸ್ತುತ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಕೂಡ ನೀರಾವರಿ ಯೋಜನೆಗಳಿಗೆ ಅನುದಾನ ನೀಡದೇ ಈ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಶಾಸಕ ಹಾಲಪ್ಪ ಆಚಾರ್ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೊಪ್ಪಳ ಏತ ನೀರಾವರಿ ಯೋಜನೆಗಳಿಗೆ ಅನುದಾನ ನೀಡುವಂತೆ ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗದಿಂದ ಮನವಿ ಮಾಡುವ ಮೂಲಕ ಒತ್ತಾಯಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಕೇವಲ 38 ಸ್ಥಾನಗಳನ್ನು ಪಡೆದು ಜೆಡಿಎಸ್ ವಾಮಮಾರ್ಗದಿಂದ ಅಧಿಕಾರ ಹಿಡಿದಿದೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದೆ ಎಂದರು.
ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ 1.16 ಕೋಟಿ, ಹಿರೇವಂಕಲಕುಂಟಾದಿಂದ ಮಾಟಲದಿನ್ನಿ 3 ಕಿ.ಮೀ. ವರೆಗೆ ರಸ್ತೆ ಡಾಂಬರೀಕರಣ 52 ಲಕ್ಷ ರೂ., ಹಿರೇವಂಕಲಕುಂಟಾ ಗ್ರಾಮದಲ್ಲಿ 32 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಪಿಯುಸಿ ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ 72 ಲಕ್ಷ ರೂ. ಮಂಜೂರುಗೊಳಿಸಲಾಗಿದೆ ಎಂದರು.
ಐತಿಹಾಸಿಕ ಚಿಕ್ಕವಂಕಲಕುಂಟಾ ಗ್ರಾಮದ ಕೆರೆಗೆ ಕಾಯಕಲ್ಪ ನೀಡುವ ಮಹಾದಾಸೆಯನ್ನು ಹೊಂದಿದ್ದೇನೆ. ಶೀಘ್ರದಲ್ಲಿ ಕೆರೆ ತುಂಬಿಸಿ ಅದೊಂದು ಪ್ರವಾಸಿ ತಾಣದ ಸ್ಥಳವನ್ನಾಗಿ ಮಾಡಲು ಪ್ರಯತ್ನಿಸಲಾಗುವುದು ಎಂದರು. ಈಗಾಗಲೇ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಅಭಿವೃದ್ಧಿಯ ಸಲುವಾಗಿ ಹಲವಾರು ಕಾಮಗಾರಿಗಳನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದೇನೆ. ಬೆಳಗಾವಿ ಅಧಿವೇಶನದ ಬಳಿಕ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಭೇಟಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು. ಗ್ರಾಮಗಳಲ್ಲಿ ನಡೆಯವ ಅಭಿವೃದ್ಧಿ ಕಾಮಗಾರಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ತಾಪಂ ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ ಮಾತನಾಡಿ, ಸರ್ಕಾರ ಶೈಕ್ಷಣಿಕ ಅಭಿವೃದ್ದಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಲೋಕಪಯೋಗಿ ಇಲಾಖೆ ಎಇಇ ಉಮಾಪತಿ ಶೆಟ್ಟರ್ ಪ್ರಾಸ್ತಾವಿಕ ಮಾತನಾಡಿ, ಹಿರೇವಂಕಲಕುಂಟಾ ಗ್ರಾಮದಲ್ಲಿ ಸರ್ಕಾರದ ಅನುದಾನದಲ್ಲಿ 2.35 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಹಾಲಪ್ಪ ಆಚಾರ್ ಅವರಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಶಾಸಕರ ನಿರ್ದೇಶನದಂತೆ ಗುಣಮಟ್ಟದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ತಾಪಂ ಅಧ್ಯಕ್ಷೆ ಲಕ್ಷ್ಮೀ ಗೌಡ್ರ, ಜಿಪಂ ಸದಸ್ಯೆ ಹೊಳಿಯಮ್ಮ ಪಾಟೀಲ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರಪ್ಪ ಮರಕಟ್, ಗ್ರಾಪಂ ಅಧ್ಯಕ್ಷ ಮಂಜುನಾಥ ಸಜ್ಜನ, ಶರಣಬಸವರಾಜ, ವಾಸುದೇವ, ಬಿಇಒ ಶರಣಪ್ಪ ವಟಗಲ್, ತಾಪಂ ಸದಸ್ಯರಾದ ಶರಣಪ್ಪ ಈಳಿಗೇರ, ರಾಮಣ್ಣ ಹೊಸಮನಿ, ಶಂಕರಗೌಡ, ಜಗನ್ನಾಥಗೌಡ, ಬಸವಲಿಂಗಪ್ಪ ಭೂತೆ, ಸಿ.ಎಚ್. ಪೊಲೀಸಪಾಟೀಲ, ಈರಪ್ಪ ಕುಡಗುಂಟಿ, ಈರಣ್ಣ ಹುಬ್ಬಳ್ಳಿ, ಶಿವನಗೌಡ ಬನ್ನಪ್ಪಗೌಡ್ರ, ರತನ ದೇಸಾಯಿ, ಕೊಟ್ರಪ್ಪ ತೋಟದ, ಅಡಿವೆಪ್ಪ ಭಾವಿಮನಿ, ಕೊಟ್ರಪ್ಪ ತೋಟದ, ಗಾಳೆಪ್ಪ ಒಜನಹಳ್ಳಿ, ಮಲ್ಲಣ್ಣ ಹರ್ಲಾಪೂರ, ಆನಂದ ಈಳಿಗೇರ, ರಸೂಲ್‌ಸಾಬ್ ದಮ್ಮೂರು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.