ನೌಕರರ ಸಂಘಗಳಿಗೆ ಹೊಸ ಅಧ್ಯಕ್ಷರು

•ಯಲಬುರ್ಗಾ ಸಂಘಕ್ಕೆ ವೈ.ಜಿ. ಪಾಟೀಲ ಸಾರಥ್ಯ•ಚುನಾವಣೆಯಲ್ಲಿ ಗೆದ್ದು ಬೀಗಿದ ನೌಕರರು

Team Udayavani, Jun 28, 2019, 2:36 PM IST

kopala-tdy-4..

ಯಲಬುರ್ಗಾ: ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ವೈ.ಜಿ. ಪಾಟೀಲ ಆಯ್ಕೆಯಾದರು.

ಯಲಬುರ್ಗಾ: ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ವೈ.ಜಿ. ಪಾಟೀಲ ಆಯ್ಕೆಯಾದರು. ಗುರುವಾರ ಪಟ್ಟಣದ ಗುರುಭವನದಲ್ಲಿ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಶಿಕ್ಷಕ ವೈ.ಜಿ. ಪಾಟೀಲ, ಪಿಡಿಒ ರವಿಕುಮಾರ ಲಿಂಗಣ್ಣನವರ ಸ್ಪರ್ಧಿಸಿದ್ದರು. ಬೆಳಗ್ಗೆ 9ಕ್ಕೆ ಆರಂಭವಾದ ಮತದಾನ 4ಕ್ಕೆ ಮುಕ್ತಾಯವಾಗಿ. 5ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಯಿತು.

ಒಟ್ಟು 35 ಮತಗಳಲ್ಲಿ ವೈ.ಜಿ. ಪಾಟೀಲ 22 ಮತಗಳನ್ನು ಪಡೆದರೆ ರವಿಕುಮಾರ ಲಿಂಗಣ್ಣನವರ 12 ಮತಗಳನ್ನು ಪಡೆದರು. ಒಂದು ಮತ ತಿರಸ್ಕೃತಗೊಂಡಿತು. 22 ಮತಗಳನ್ನು ಪಡೆದ ವೈ.ಜಿ. ಪಾಟೀಲ ಅವರನ್ನು ಅಧ್ಯಕ್ಷರನ್ನಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದರು.

ಚುನಾವಣಾಧಿಕಾರಿಯಾಗಿ ಎಚ್. ಯಲ್ಲಪ್ಪ, ಸಹಾಯಕ ಚುನಾವಣಾಧಿಕಾರಿಯಾಗಿ ಬಸಪ್ಪ ಹುನಗುಂದ, ಕೆ.ಎಂ.ಗಾಣಿಗೇರ ಕಾರ್ಯ ನಿರ್ವಹಿಸಿದರು.

ವಿಜಯೋತ್ಸವ: ವೈ.ಜಿ. ಪಾಟೀಲ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗ ನೌಕರರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ನೂತನ ಅಧ್ಯಕ್ಷರನ್ನು ನೌಕರರ ಸಂಘದ ಪದಾಧಿಕಾರಿಗಳು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ನೂತನ ಅಧ್ಯಕ್ಷ ವೈ.ಜಿ. ಪಾಟೀಲ ಮಾತನಾಡಿ, ಈ ಹಿಂದೆ ನೌಕರರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದೆ. ನೌಕರರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಚುನಾವಣೆ ಮುಗಿದಿದೆ. ಎಲ್ಲ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೌಕರರ ಹಿತ ಕಾಪಾಡುವ ಕಾರ್ಯಕ್ಕೆ ಮುಂದಾಗುತ್ತೇನೆ. ಎರಡನೇ ಅವಧಿಗೆ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಪ್ರತಿಯೊಬ್ಬರಿಗೂ ಋಣಿಯಾಗಿದ್ದೇನೆ ಎಂದರು.

ತಾಪಂ ನರೇಗಾ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ, ಶಿಕ್ಷಕರಾದ ಗಾಳೆಪ್ಪ ಒಜನಹಳ್ಳಿ, ಬಸವರಾಜ ಮೆಣಸಗಿ, ಶೇಖರಗೌಡ ಪಾಟೀಲ, ದ್ಯಾಮಣ್ಣ ಮುಗಳಿ, ರಾಮಣ್ಣ ತಳವಾರ, ಬಾಲದಂಡಪ್ಪ ತಳವಾರ, ಜಗದೀಶ ಬಳಿಗಾರ, ಬಸವರಾಜ ಅಂಗಡಿ, ನೀಲಪ್ಪ ಮಾಟರಂಗಿ, ಬಸವರಾಜ ಬಿಲ್ಲರ್‌, ಡಿ.ಡಿ. ಲಮಾಣಿ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.