ಇದ್ದೂ ಇಲ್ಲದಂತಾದ ನೀರಿನ ಘಟಕ
Team Udayavani, Dec 24, 2019, 4:09 PM IST
ತಾವರಗೇರಾ: ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪ್ರತಿ ಬಾರಿಯೂ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಂಬಂಧಿಸಿ ಭಾರಿ ಚರ್ಚೆ ನಡೆಯುತ್ತದೆ. ಆದರೆ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಕೊರತೆ ಹಾಗೂ ನಿರ್ಮಾಣ ಹಂತದಲ್ಲಿರುವ ಘಟಕಗಳನ್ನು ಪೂರ್ಣಗೊಳಿಸದಿರುವ ಪರಿಣಾಮ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅಶುದ್ಧ ನೀರೇ ಗತಿಯಾಗಿದೆ.
ಹೊಬಳಿ ವ್ಯಾಪ್ತಿಯ ಕಿಲ್ಲಾರಹಟ್ಟಿ, ಕಿಲ್ಲಾರಹಟ್ಟಿ ತಾಂಡಾ, ಇದ್ಲಾಪೂರ, ಮಾದಪೂರ, ವಿಠಲಾಪೂರ, ಹಂಚಿನಾಳ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಅಸಮರ್ಪಕ ನಿರ್ವಹಣೆ ಹಾಗೂ ತಾಂತ್ರಿಕ ಸಮಸ್ಯೆಗಳಿಂದ ಇದ್ದು ಇಲ್ಲದಂತಾಗಿವೆ. ಕಿಲ್ಲಾರಹಟ್ಟಿ ಗ್ರಾಪಂ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 8-10 ತಿಂಗಳುಗಳಿಂದ ಸ್ಥಗಿತಗೊಂಡಿದೆ. ಗ್ರಾಮಸ್ಥರು ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿ ಅಶುದ್ಧ ನೀರು ಕುಡಿಯುವುದು ಅನಿವಾರ್ಯವಾಗಿದೆ.
ಕಿಲ್ಲಾರಹಟ್ಟಿ ತಾಂಡಾ: ಇಲ್ಲಿನ ಶುದ್ಧ ಕುಡಿಯುವ ನೀರಿನ ಘಟಕದ ಸುತ್ತಲು ಮುಳ್ಳುಕಂಟಿಗಳು ಬೆಳೆದು ನಿಂತಿದ್ದು, ಸುತ್ತಲು ದನ, ಕರು, ಕುರಿ, ಆಡುಗಳು ಮಲಗಿರುತ್ತವೆ. ಈ ಗ್ರಾಮದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಿದ್ದು, ಇಂದುವರೆಗೂ ಆ ಘಟಕ್ಕೆ ನೀರು ಶುದ್ಧೀಕರಣ ಯಂತ್ರ ಅಳವಡಿಸಿಲ್ಲ. ತಾಂತ್ರಿಕ ಸಮಸ್ಯೆಗಳಿಂದ ಘಟಕ ಪ್ರಾರಂಭವಾಗಿಲ್ಲ ಎಂದು ಗ್ರಾಮಸ್ಥರಾದ ಅಮರೇಗೌಡ ಪಾಟೀಲ, ದೊಡ್ಡಬಸಪ್ಪ, ದುರಗೇಶ ಆರೋಪಿಸುತ್ತಾರೆ.
ಹೋಬಳಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಿದ ಆರು ಘಟಕಗಳ ಕಾಮಗಾರಿ ಅಪೂರ್ಣವಾಗಿದೆ. ಇದುವರೆಗೂ ಇದುವರೆಗೂ ಯಾವುದೇ ಘಟಕದಿಂದ ಹನಿ ನೀರು ಲಭಿಸಿಲ್ಲ. ಶುದ್ಧ ನೀರಿನ ಘಟಕಗಳು ಸಂಪೂರ್ಣವಾಗಿ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಗ್ರಾಪಂ ಸುಪರ್ದಿಗೆ ತೆಗೆದುಕೊಂಡಿಲ್ಲ. ಯಂತ್ರ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಕೊರತೆಯಿಂದ ಶುದ್ಧ ಕುಡಿಯುವ ನೀರಿನ ಘಟಕವು ಬೆದರುಗೊಂಬೆಯಂತಾಗಿವೆ.
ಶುದ್ಧ ಕುಡಿಯುವ ನೀರಿನ ಘಟಕ ಸಂಪೂರ್ಣ ನಿರ್ಮಾಣವಾಗದ ಕಾರಣ ಅನಿವಾರ್ಯವಾಗಿ ಅಶುದ್ಧ ನೀರು ಕುಡಿಯಬೇಕಾಗಿದೆ. ಇಲ್ಲದಿದ್ದರೆ ದೂರದ ತಾವರಗೇರಾ ಪಟ್ಟಣಕ್ಕೆ ಹೋಗಿ ಶುದ್ಧ ನೀರು ತರಬೇಕಾದ ಪರಿಸ್ಥಿತಿ ಬಂದಿದೆ. –ದುರಗೇಶ ಬೋಗಾಪೂರ, ಇದ್ಲಾಪೂರ ಗ್ರಾಮಸ್ಥ
–ಎನ್. ಶಾಮೀದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.