ಎಚ್ಚೆತ್ತುಕೊಳ್ಳದ ಜಿಲ್ಲೆಯ ಜನತೆ

ನಗರದಲ್ಲಿ ಸಾಮಾಜಿಕ ಅಂತರವೇ ಮಾಯ * ­ಬೆಳಗ್ಗೆ ಜನದಟ್ಟಣೆ.. ಮಧ್ಯಾಹ್ನ ಖಾಲಿ ಖಾಲಿ

Team Udayavani, May 24, 2021, 9:17 PM IST

23kpl-1

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಿ ಸುತ್ತಿದ್ದರೂ ಜನ ಮಾತ್ರ ಸುತ್ತಾಡುವುದನ್ನು ನಿಲ್ಲಿಸಿಲ್ಲ. ರವಿವಾರ ಬೆಳಗ್ಗೆ ನಗರದ ಮಾರುಕಟ್ಟೆಗೆ ಜನರು ಮತ್ತೆ ಲಗ್ಗೆಯಿಟ್ಟು ಸಾಮಗ್ರಿ ಖರೀದಿಯಲ್ಲಿ ತೊಡಗಿದ್ದರು. ಪೊಲೀಸರ ಭಯಕ್ಕೆ ಕೆಲವರು ಮಾಸ್ಕ್ಗಳನ್ನು ಧರಿಸುತ್ತಿದ್ದು ಕಂಡುಬಂತು.

ಬೆಳಗ್ಗೆ ಜನದಟ್ಟಣೆಯಿದ್ದರೆ, ಮಧ್ಯಾಹ್ನ ನಗರ ಸಂಪೂರ್ಣ ಬಂದ್‌ ಆಯಿತು. ಜಿಲ್ಲೆಯಲ್ಲಿ ಬೆಳಗ್ಗೆ 6ರಿಂದ 10 ಗಂಟೆವರೆಗೂ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಅವಕಾಶ ನೀಡಿದ್ದು, ಇದನ್ನೇ ಒಂದು ಅವಕಾಶವೆಂಬಂತೆ ಜನರು ಅಧಿಕ ಪ್ರಮಾಣದಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟು ಗುಂಪು ಗುಂಪಾಗಿ ನಿಂತು ಸಾಮಗ್ರಿ ಖರೀದಿಸುತ್ತಿದ್ದಾರೆ. ಎಲ್ಲಿಯೂ ಸಾಮಾಜಿಕ ಅಂತರ ಎನ್ನುವುದನೇ ಕಾಣುವುದಿಲ್ಲ. ಪೊಲೀಸರು ನೋಡಿಯೂ ಸುಮ್ಮನೆ ಕೈ ಕಟ್ಟಿ ನಿಲ್ಲುವಂತಹ ಪರಿಸ್ಥಿತಿ ಎದುರಾಗಿದೆ. ಏಷ್ಟೇ ಹೇಳಿದರೂ ಜನರು ಪೊಲೀಸರ ಮಾತು ಕೇಳದಂತಹ ಸ್ಥಿತಿ ನಿರ್ಮಾಣವಾಗಿದೆ.

ನಗರದ ಜವಾಹರ ರಸ್ತೆ, ಶಾರದಾ ಚಿತ್ರ ಮಂದಿರದ ರಸ್ತೆ ಹಾಗೂ ಕೋಟೆ ರಸ್ತೆಯು ಜನದಟ್ಟಣೆಯಿಂದ ಕೂಡಿದ್ದವು. ಬೆಳಗ್ಗೆ 6 ಗಂಟೆಯಿಂದಲೇ ಜನ ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಪೊಲೀಸರು ಬಹುಪಾಲು ರಸ್ತೆಗಳಲ್ಲಿ ಸಂಚಾರ ಬಂದ್‌ ಮಾಡಿದ್ದರೂ ಜನರು ಮತ್ತೂಂದು ರಸ್ತೆಯಲ್ಲಿ ತಮ್ಮ ವಾಹನ ನಿಲ್ಲಿಸಿ ಕಿರಾಣಿ ಅಂಗಡಿಗಳ ಮುಂದೆ ಗುಂಪಾಗಿ ನಿಂತು ಸಾಮಗ್ರಿ ಖರೀದಿಸುವುದು ಸಾಮಾನ್ಯವಾಗಿತ್ತು. ಬೆಳಗ್ಗೆ 10 ಗಂಟೆವರೆಗೂ ಜನದಟ್ಟಣೆಯಿಂದ ಕೂಡಿದ್ದ ಕೊಪ್ಪಳವೂ ಮಧ್ಯಾಹ್ನ 1 ಗಂಟೆ ವೇಳೆಗೆ ಎಲ್ಲವೂ ಬಂದ್‌ ಆಗಿದ್ದವು. ರಸ್ತೆಗಳೆಲ್ಲವೂ ಬಿಕೋ ಎನ್ನುವಂತಿದ್ದವು.

ಜಾಗೃತರಾಗಿ!: ಜಿಲ್ಲೆಯಲ್ಲಿ ಸೋಂಕಿನ ಆರ್ಭಟವು ಹೆಚ್ಚಾಗುತ್ತಿದೆ. ಈ ಮಧ್ಯೆ ಜನರ ಸಂಚಾರ ಹೆಚ್ಚಾಗಿದೆ. ಇಲ್ಲಿ ಜನರು ಎಚ್ಚರಗೊಳ್ಳದಿದ್ದರೆ ಸೋಂಕು ನಿಯಂತ್ರಣ ಮಾಡುವುದು ಕಷ್ಟಸಾಧ್ಯವಾಗಲಿದೆ ಎಂದು ಸರ್ಕಾರ ಜನರಿಗೆ ಮನವಿ ಮಾಡುತ್ತಿದೆ. ಇಷ್ಟಾದರೂ ಜನರು ಜಾಗೃತರಾಗುತ್ತಿಲ್ಲ. ಜನ ಸ್ವಯಂ ನಿಬಂìಧ ಹಾಕಿಕೊಂಡರೆ ಸೋಂಕು ನಿಯಂತ್ರಣಕ್ಕೆ ಬರಲಿದೆ. ದಯವಿಟ್ಟು ಮನೆಯಿಂದ ಹೊರಗೆ ಬರದಿರುವುದೇ ಉತ್ತಮ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಿಮ್ಮ ಕುಟುಂಬವನ್ನು ನೀವೇ ರಕ್ಷಣೆ ಮಾಡಿಕೊಳ್ಳುವ ಅವಶ್ಯಕತೆ ತುಂಬಾನೇ ಇದೆ. ಇನ್ನಾದರೂ ಜನರು ಎಚ್ಚರಗೊಳ್ಳಬೇಕಿದೆ.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.