ಚುನಾವಣೆಗೆ ಸ್ಪರ್ಧಿಸಲ್ಲ: ಡಿ.ಎಚ್.ಶಂಕರಮೂರ್ತಿ
Team Udayavani, Jan 7, 2018, 6:50 AM IST
ಗಂಗಾವತಿ: ನಾನು ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಈ ಬಾರಿ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪಕ್ಷ ರಾಜ್ಯಪಾಲರ ಹುದ್ದೆ ನೀಡಿದರೆ ಅದನ್ನು ಸಂತೋಷದಿಂದ ನಿಭಾಯಿಸುತ್ತೇನೆಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನರ ಸಮಸ್ಯೆ ಸೇರಿ ರಾಜ್ಯದ ಪ್ರಗತಿಗಾಗಿ ವಿಧಾನ ಮಂಡಲದ ಅಧಿವೇಶನ ವರ್ಷದಲ್ಲಿ 60 ದಿನ ಕಡ್ಡಾಯವಾಗಿ ನಡೆಯುವಂತಾಗಬೇಕು. ಈ ಕುರಿತು ತಾವು ಮುಖ್ಯಮಂತ್ರಿಗಳನ್ನು ನಿರಂತರವಾಗಿ ಒತ್ತಾಯಿಸುತ್ತಿದ್ದು, ಸರ್ಕಾರ ಸ್ಪಂದಿಸಬೇಕು. ಮಹಾಜನ್ ವರದಿ ಹಿನ್ನೆಲೆಯಲ್ಲಿ ಕೇರಳದಲ್ಲಿರುವ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು. ಅಲ್ಲಿ ಕನ್ನಡಿಗರು ಬಹುಸಂಖ್ಯೆಯಲ್ಲಿದ್ದಾರೆ. ಭೌಗೋಳಿಕವಾಗಿ ಕಾಸರಗೋಡು ಕರ್ನಾಟಕದ ಅವಿಭಾಜ್ಯವಾಗಿದೆ. ಕೇಂದ್ರ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದರು.
ಇತ್ತೀಚೆಗೆ ಕರಾವಳಿಯಲ್ಲಿ ಹತ್ಯೆಯಂತಹ ಘಟನೆ ನಡೆಯುತ್ತಿದ್ದು, ಸರ್ಕಾರ ಕೂಡಲೇ ಆರೋಪಿಗಳನ್ನು ಬಂ ಧಿಸಬೇಕು. ಘಟನೆಗೆ ಕಾರಣರಾದವರು ಯಾವ ಕೋಮಿಗೆ ಸೇರಿದ್ದರೂ ಕಠಿಣ ಶಿಕ್ಷೆಯಾಗಬೇಕು. ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಕೂಡಲೇ ಮುಂದಾಗಬೇಕು. ಪರಸ್ಪರ ನಂಬಿಕೆ ಮೂಡಲು ಈ ಕಾರ್ಯ ಮಾಡಬೇಕಿದೆ ಎಂದರು.
– ಡಿ.ಎಚ್. ಶಂಕರಮೂರ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.