ಪರ ಪ್ರಾಂತ್ಯದ ಲಾರಿ ನಿರ್ಬಂಧಕ್ಕೆ ಸೂಚನೆ
Team Udayavani, Apr 21, 2020, 5:12 PM IST
ಬ್ಯಾಡಗಿ: ಕೋವಿಡ್ 19 ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಅಂತಾರಾಜ್ಯ ಓಡಾಡಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ಹೀಗಾಗಿ ಪರಪ್ರಾಂತದ ಲಾರಿಗಳ ಆಗಮನ ಹಾಗೂ ನಿರ್ಗಮನ ಕೂಡಲೇ ಸ್ಥಗಿತಗೊಳಿಸುವಂತೆ ತಹಶೀಲ್ದಾರ್ ಶರಣಮ್ಮ ಕಾರಿ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅದೃಷ್ಟವಶಾತ್ ತಾಲೂಕಿನಲ್ಲಿ ಯಾವುದೇ ಸೋಂಕಿನ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ರೆಡ್‌ಜೋನ್, ಹಾಟ್ ಸ್ಪಾಟ್ ಇನ್ನಿತರ ಹೈಅಲರ್ಟ್ ಏರಿಯಾಗಳಿಂದ ಚಾಲಕರು ಬರುತ್ತಿದ್ದಾರೆ. ಅವರಲ್ಲಿ ಯಾರಾದರೂ ಸೋಂಕಿತರಿದ್ದರೆ ಪತ್ತೆ ಹಚ್ಚುವುದು ಕಷ್ಟವಾಗುತ್ತದೆ. ಹೀಗಾಗಿ ಪರಪ್ರಾಂತದ ವಾಹನಗಳನ್ನು ಬ್ಯಾಡಗಿ ಪಟ್ಟಣದೊಳಗೆ ಬಿಡಲು ಸಾಧ್ಯವಾಗುವುದಿಲ್ಲ. ಸ್ಥಳೀಯ ಚಾಲಕರ ಗಾಡಿಗಳು ಸಹ ಬೇರೆ ರಾಜ್ಯಗಳಿಗೆ ಹೋಗಿಬಂದಲ್ಲಿ ಚಾಲಕರಿಗೆ ಕ್ವಾರಂಟೈನ್ ಕಡ್ಡಾಯವಾಗಲಿದ್ದು, ಸರಕು ಸಾಗಾಟ ನಿಲ್ಲಿಸುವಂತೆ ಸಭೆಯಲ್ಲಿ ಆದೇಶಿಸಿದರು.
ಲಾಕ್‌ಡೌನ್ ಬಿಗಿಗೊಳಿಸಿ: ಪಟ್ಟಣದಲ್ಲಿ ಸಾಮಾಜಿಕ ಅಂತರದೊಂದಿಗೆ ದಿನಸಿ ಅಂಗಡಿಗಳಷ್ಟೇ ತೆರೆಯಬೇಕು. ಆದರೆ, ಬೆಳಗ್ಗೆ ಸಮಯದಲ್ಲಿ ಸ್ಟೇಷನರಿ, ಹಾರ್ಡ್‌ವೇರ್ ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ ಅವರಿಗೆ ತಹಶೀಲ್ದಾರ್ ಸೂಚನೆ ನೀಡಿದರು.
ಸಿಪಿಐ ಭಾಗ್ಯವತಿ ಮಾತನಾಡಿ, ಪಟ್ಟಣದಲ್ಲಿ ದಿನದಿಂದ ದಿನಕ್ಕೆ ದ್ವಿಚಕ್ರ ವಾಹನಗಳ ಓಡಾಟ ಹೆಚ್ಚಾಗಿದೆ. ನಾಳೆಯಿಂದಲೇ ಅನಗತ್ಯವಾಗಿ ಓಡಾಡುವ ವಾಹನಗಳನ್ನು ಪೊಲೀಸ್ ಇಲಾಖೆ ವಶಕ್ಕೆ ಪಡೆದುಕೊಳ್ಳಲಿದೆ ಎಂದರು. ಅಲ್ಲದೇ ಪರಪ್ರಾಂತಗಳಿಂದ ಬರುವಂತಹ ವಾಹನಗಳ ಓಡಾಟವನ್ನು ನಿಲ್ಲಿಸುವಂತೆ ಲಾರಿಗಳ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಲಾರಿ ಏಜೆಂಟರ ಸಂಘಗಳಿಗೆ ನಿರ್ದೇಶನ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ವೈದ್ಯಾಧಿಕಾರಿ ಡಾ| ಪುಟ್ಟರಾಜು, ತಾಲೂಕಾ ಆರೋಗ್ಯಾ ಧಿಕಾರಿ ಡಾ| ಬಿ.ಆರ್. ಲಮಾಣಿ, ವಿಜಯ ಪತ್ತಾರ, ಗುಂಡಪ್ಪ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.