ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
Team Udayavani, Aug 11, 2019, 1:17 PM IST
ಕೊಪ್ಪಳ: ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸುತ್ತಿದ್ದು, ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರಿ ಹೆಚ್ಚಳವಾಗಿದೆ. ಶನಿವಾರ ಮಧ್ಯಾಹ್ನ 25000 ಕ್ಯೂಸೆಕ್‌ನಷ್ಟು ನೀರನ್ನು ನದಿ ಪಾತ್ರಗಳಿಗೆ ಹರಿ ಬಿಡಲಾಗಿದೆ. ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದಲ್ಲದೇ, ಸಮಸ್ಯೆಯಾದರೆ ತಕ್ಷಣ ಸಹಾಯವಾಣಿಗೆ ಕರೆ ಮಾಡುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ ಭಾಗದ ಹಲವು ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಎಡಬಿಡದೇ ಸುರಿಯುತ್ತಿದೆ. ಮಳೆಯ ಅಬ್ಬರಕ್ಕೆ ಇಡೀ ಜನಜೀವನ ತತ್ತರಿಸಿದೆ. ಕಳೆದ ತಿಂಗಳು ನೀರು ಸಂಗ್ರಹವಾಗದೆ ಖಾಲಿ ಖಾಲಿಯಾಗಿದ್ದ ತುಂಗಭದ್ರಾ ಜಲಾಶಯ ತುಂಬಿಕೊಂಡು ಕಳೆಗಟ್ಟಿದೆ. ಶಿವಮೊಗ್ಗ, ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿದ್ದರಿಂದ ತುಂಗಾ ಮತ್ತು ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹರಿ ಬಿಡಲಾಗಿದೆ. ಹೀಗಾಗಿ ತುಂಗಭದ್ರಾ ಜಲಾಶಯಕ್ಕೆ ಇಳ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ.
ಇದರಿಂದ ಅಚ್ಚುಕಟ್ಟು ಪ್ರದೇಶದ ರೈತ ಸಮೂಹದ ಸಂತಸಗೊಂಡಿದೆ. ಕೆಲ ಜಿಲ್ಲೆಗಳಲ್ಲಿ ನೆರೆ ಹಾವಳಿಯಾಗಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಬರ ಆವರಿಸಿದೆ. ಜಲಾಶಯ ಭರ್ತಿಯಾದರೆ ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೂ ನೀರು ಹರಿಯಲಿದ್ದು, ಡ್ಯಾಂ ನೀರನ್ನೇ ನೆಚ್ಚಿಕೊಂಡ ಲಕ್ಷಾಂತರ ಕುಟುಂಬಗಳು ಜೀವನ ಕಂಡುಕೊಳ್ಳಲಿವೆ. ನೀರಿನ ಒಳ ಹರಿವು ಪ್ರಮಾಣ ಹೀಗೆ ಮುಂದುವರಿದರೆ ಕೆಲವೇ ದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.