ಮದ್ಯದ ಅಂಗಡಿ ಕಳ್ಳತನ ತಡೆಗೆ ಸೆಕ್ಯೂರಿಟಿ ಗಾರ್ಡ್ ನೇಮಕಕ್ಕೆ ಸೂಚನೆ
Team Udayavani, Apr 8, 2020, 5:42 PM IST
ಕೊಪ್ಪಳ: ಕೋವಿಡ್-19 ಹಿನ್ನಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಈ ವೇಳೆ ಮದ್ಯಪ್ರೀಯರು ಮದ್ಯಕ್ಕಾಗಿ ಪರಿತಪಿಸುವಂತಾಗಿವೆ. ರಾಜ್ಯದ ವಿವಿದೆಡೆಯೂ ಮದ್ಯದ ಅಂಗಡಿಗಳಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಮದ್ಯದ ಅಂಗಡಿಗಳ ಕಳ್ಳತನವನ್ನು ತಡೆಯಲು ಎಲ್ಲಾ ಮದ್ಯದ ಅಂಗಡಿಗೆ ಭದ್ರತೆ ಒದಗಿಸಿ ಸೆಕ್ಯೂರಿಟಿ ಗಾರ್ಡ್‌ಗಳನ್ನು ನೇಮಿಸಿಕೊಳ್ಳುವಂತೆ ಜಿಲ್ಲಾ ಅಬಕಾರಿ ಅಧಿಕಾರಿ ಸೂಚನೆ ನೀಡಿದ್ದಾರೆ.
ಜಿಲ್ಲೆಯು ಲಾಕ್‌ಡೌನ್ ಆಗಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮದ್ಯದ ಅಂಗಡಿಗಳಿಗೆ ಬೀಗಮುದ್ರೆ ಬಿದ್ದಿದೆ. ಇದರಿಂದ ಮದ್ಯಪ್ರೀಯರು ಚಡಪಡಿಸುವಂತಾಗುತ್ತಿದೆ. ಹಲವೆಡೆ ಬಾರ್‌ಗಳು ಹಾಗೂ ಮದ್ಯದ ಅಂಗಡಿಗಳಿಗೆ ಖದೀಮರು ರಾತ್ರೋ ರಾತ್ರಿ ನುಗ್ಗಿ ಮದ್ಯದ ಬಾಟಲಿಗಳನ್ನು ಹೊತ್ತೊಯ್ಯುತ್ತಿದ್ದಾರೆ. ಕೊಪ್ಪಳದ ಗವಿಮಠ ರಸ್ತೆಯ ಸಾಯಿ ಟ್ರೇಡರ್ಸ್ ಅಂಗಡಿಯಲ್ಲಿ ಇತ್ತೀಚೆಗೆ ಅಂಗಡಿ ಬಾಗಿಲು ಮುರಿದು 80 ಲೀಟರ್‌ನಷ್ಟು 40 ಸಾವಿರ ಮೌಲ್ಯದ ಮದ್ಯವನ್ನ ಕಳ್ಳತನ ಮಾಡಿದ್ದರು. ನಗರ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.
ಇದನ್ನು ಅರಿತ ಜಿಲ್ಲಾ ಅಬಕಾರಿ ಅಧಿಕಾರಿಯವರು ಎಲ್ಲ ಸನ್ನದುದಾರರು ತಮ್ಮ ಅಂಗಡಿಗಳಿಗೆ ಭದ್ರತೆ ಕಲ್ಪಿಸುವ ಜೊತೆಗೆ ಸೆಕ್ಯೂರಿಟಿ ಗಾರ್ಡ್ ನೇಮಕ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.