Koppal “ಆಪರೇಷನ್’ ಕಾಂಗ್ರೆಸ್‌ನ ನಾಟಕ : ಶ್ರೀರಾಮುಲು
Team Udayavani, Nov 15, 2023, 6:09 PM IST
ಕೊಪ್ಪಳ: ಬಿಜೆಪಿಯಿಂದ ಹಲವು ಶಾಸಕರು ಬರುತ್ತಾರೆಂದು ಶಾಸಕ ರವಿ ಗಣಿಗರಂಥವರಿಂದ ಕಾಂಗ್ರೆಸ್‌ನ ಮುಖಂಡರು ಹೇಳಿಸಿ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ತಮ್ಮ ಪಕ್ಷದವರಿಂದಲೇ ಈ ರೀತಿ ಹೇಳಿಸುತ್ತಿದ್ದಾರೆ. ಅವರಿಗೆ ಬೇರೆ ವಿಷಯ ಕೇಳಬಾರದು ಎಂಬ ಕಾರಣಕ್ಕೆ ಈ ರೀತಿ ನಾಟಕ ಶುರು ಮಾಡಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪಕ್ಷ ಹೊಸ ಅವಕಾಶ ಮಾಡಿಕೊಟ್ಟಿದೆ. ಅವರ ಆಯ್ಕೆ ಎಲ್ಲ ಕಾರ್ಯಕರ್ತರಲ್ಲೂ ಖುಷಿ ತರಿಸಿದೆ. ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ನಾನು ಸಹ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ಮಾಡಿದ್ದೆ. ಆದರೆ, ಪಕ್ಷಕ್ಕೆ ಯಡಿಯೂರಪ್ಪ ಕೊಡುಗೆ ದೊಡ್ಡದಿದೆ. ನನಗೆ ಸ್ಥಾನ ಸಿಕ್ಕಿಲ್ಲ ಎನ್ನುವ ಅಸಮಾಧಾನವಿಲ್ಲ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧರಾಗಿದ್ದೇವೆ.
ಮಾಧ್ಯಮದಲ್ಲಿ ಹೇಳಿದ ತಕ್ಷಣ ಅಸಮಾಧಾನವಿದೆ ಎಂಬ ಭಾವನೆಯಲ್ಲ. ಪಕ್ಷದಲ್ಲಿ ಕುಳಿತು ಈ ಬಗ್ಗೆ ಚರ್ಚಿಸುತ್ತೇವೆ. ವಿರೋಧ ಪಕ್ಷದ ನಾಯಕರ ಆಯ್ಕೆ ಬೇಗ ಆಯ್ಕೆ ಆಗುತ್ತೆ ಎಂದರು.
ಸರಕಾರದ ಗ್ಯಾರಂಟಿ ಫೇಲ್ ಆಗಿದೆ. ಎಲ್ಲ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ. ಈಗ ಗ್ಯಾರಂಟಿಗಳ ಬಗ್ಗೆ ಜನರಿಗೆ ನಂಬಿಕೆ ಇಲ್ಲ ಎಂದರಲ್ಲದೇ, ನಾನು ಬಳ್ಳಾರಿ ಲೋಕಸಭೆಯಿಂದ ಅಭ್ಯರ್ಥಿ ಆಗಲ್ಲ. ನಮ್ಮಲ್ಲಿ ನಮ್ಮ ಪಕ್ಷದ ಹಾಲಿ ಸಂಸದರಿದ್ದಾರೆ ಎಂದರು.
ಬರ ಪರಿಹಾರ ವಿಚಾರ, ಸರ್ಕಾರ ಯಾವುದೇ ಇರಬಹುದು, ಮೊದಲು ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಬೇಕು. ಈಗ ರಾಜ್ಯ ಸರಕಾರ 300 ಕೋಟಿ ರೂಪಾಯಿ ನೀಡಿದ್ದು ಸಾಕಾಗಲ್ಲ. ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.