ಆನೆಗೊಂದಿ ಉತ್ಸವ ವ್ಯವಸ್ಥಿತವಾಗಿ ನಿರ್ವಹಿಸಿ
Team Udayavani, Nov 23, 2019, 3:27 PM IST
ಕೊಪ್ಪಳ: ಜನವರಿ ತಿಂಗಳಲ್ಲಿ ನಡೆಯುವ ಆನೆಗೊಂದಿ ಉತ್ಸವಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ನೇಮಕ ಮಾಡಲಾಗಿದೆ. ಅದರಂತೆ ಎಲ್ಲ ಸಮಿತಿಗಳೂ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್ ಹೇಳಿದರು.
ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಆನೆಗೊಂದಿ ಉತ್ಸವ-2020ರ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆನೆಗೊಂದಿ ಉತ್ಸವಕ್ಕೆ ಸುಮಾರು 2 ಕೋಟಿ ವೆಚ್ಚದ ಅಂದಾಜು ಮಾಡಲಾಗಿದೆ. ಅದರಲ್ಲಿ ಸರ್ಕಾರ ರೂ. 1 ಕೋಟಿ ನೀಡುತ್ತದೆ. ರೂ. 50 ಲಕ್ಷದಿಂದ ರಿಂದ 1 ಕೋಟಿವರೆಗೂ ಸಿಎಸ್‌ಆರ್ ಮೂಲಕ ನೀಡಲಾಗುವುದು. ಉತ್ಸವದ ವ್ಯವಸ್ಥಿತ ನಿರ್ವಹಣೆಗೆ ಸ್ವಾಗತ ಸಮಿತಿ, ಸಾಂಸ್ಕೃತಿಕ ಸಮಿತಿ, ಆಹಾರ ಸಮಿತಿ, ಕ್ರೀಡಾ ಸಮಿತಿ, ವಸತಿ ಸಮಿತಿ, ಸಾರಿಗೆ ಸಮಿತಿ, ಮೆರವಣಿಗೆ ಸಮಿತಿ, ಆರೋಗ್ಯ ಸಮಿತಿ, ಭದ್ರತಾ ಸಮಿತಿ, ಮಾಹಿತಿ ಮತ್ತು ಸಹಾಯವಾಣಿ ಹಾಗೂ ದೂರು ನಿರ್ವಹಣಾ ಸಮಿತಿ, ಪ್ರಚಾರ ಮತ್ತು ಮಾಧ್ಯಮ ಸಮಿತಿ, ಮೂಲಭೂತ ಸೌಕರ್ಯಗಳ ಸಮಿತಿ, ವಸ್ತು ಪ್ರದರ್ಶನ ಸಮಿತಿ, ಸಂಘಟನಾ ಸಮಿತಿ, ವಿದ್ಯುತ್ ಸರಬರಾಜು, ಆಮಂತ್ರಣ ಪತ್ರಿಕೆ, ಹಣಕಾಸು ಸಮಿತಿ ಸೇರಿದಂತೆ ಅಗತ್ಯಕ್ಕೆ ಅನುಗುಣವಾಗಿ ವಿವಿಧ ಸಮಿತಿ ರಚಿಸಲಾಗಿದೆ. ಎಲ್ಲ ಸಮಿತಿಗಳಿಗೂ ಒಬ್ಬ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗುತ್ತದೆ ಎಂದರು.
ನಿರ್ದಿಷ್ಟ ಸಮಿತಿಗೆ ನೇಮಕ ಮಾಡುವ ಅಧಿಕಾರಿಗಳು ತಮ್ಮ ಸಮಿತಿಗೆ ಸಂಬಂಧಿಸಿದ ಎಲ್ಲ ಕಾರ್ಯಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಧಿಕಾರಿಗಳು ಪರಸ್ಪರ ಸಂಪರ್ಕದಲ್ಲಿದ್ದು, ಉತ್ಸವವನ್ನು ಯಶಸ್ವಿಗೊಳಿಸಬೇಕು. ಉತ್ಸವದ ಅಂಗವಾಗಿ ವಿವಿಧ ಸ್ಪರ್ಧೆ, ಕಾರ್ಯಕ್ರಮಗಳನ್ನು ಏರ್ಪಡಿಸುವ ಕುರಿತು ಸಂಬಂಧಿಸಿದ ಸಮಿತಿ ಸಾಧ್ಯತೆ ಹಾಗೂ ಪ್ರಸ್ತುತತೆ ಅನುಗುಣವಾಗಿ ರೂಪುರೇಷೆ ತಯಾರಿಸಬೇಕು. ಯಾವುದೇ ಸ್ಪರ್ಧೆಗಳು ಆನೆಗೊಂದಿಯ ಇತಿಹಾಸ, ಸಂಸ್ಕೃತಿಯನ್ನು ಬಿಂಬಿಸಬೇಕು. ಉತ್ಸವದ ಮುಖ್ಯಭಾಗವಾಗಿ ಲೋಗೋ ತಯಾರಿಸಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.
ಉತ್ಸವದ ಅಂಗವಾಗಿ ನಡೆಯುವ ಮೆರವಣಿಗೆಯಲ್ಲಿ ಇತರೆ ಜಿಲ್ಲೆಯ ಕಲಾತಂಡಗಳು ಭಾಗವಹಿಸುವುದರಿಂದ ಅವರ ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕುರಿತು ಹೆಚ್ಚಿನ ಗಮನ ನೀಡಿ. ಉತ್ಸವದಲ್ಲಿ ನಡೆಯುವ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಬೇಕು. ಉಳಿದಂತೆ ಸಮಿತಿಗಳ ಅಚ್ಚುಕಟ್ಟು ಕಾರ್ಯ ನಿರ್ವಹಣೆಗೆ ಎಲ್ಲರೂ ಕ್ರಮ ವಹಿಸಿ ಎಂದರು.
ಸಭೆಯಲ್ಲಿ ಜಿಪಂ ಸಿಇಒ ರಘುನಂದನ್ ಮೂರ್ತಿ, ಎಸ್‌ಪಿ ಜಿ. ಸಂಗೀತಾ, ಎಡಿಸಿ ಎಂ.ಪಿ. ಮಾರುತಿ,ಪ್ರೊಬೆಷನರಿ ಅ ಧಿಕಾರಿ ನೇಹಾ ಜೈನ್ ಸೇರಿದಂತೆವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.