ನೂರಕ್ಕೂ ಅಧಿಕ ಟಿಪ್ಪರ್ ಮರಳು ಸಂಗ್ರಹ
Team Udayavani, Nov 28, 2019, 3:58 PM IST
ಕುಷ್ಟಗಿ: ಕುಷ್ಟಗಿ-ಕಂದಕೂರು ಮಧ್ಯೆ ಎರೆಹಳ್ಳದ ಅಕ್ಕ-ಪಕ್ಕದ ಜಮೀನುಗಳಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದ ನೂರಕ್ಕೂ ಅಧಿ ಕ ಟಿಪ್ಪರ್ ಮರಳನ್ನು ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.
ತಹಶೀಲ್ದಾರ್ ಎಂ.ಸಿದ್ದೇಶ್ ಅವರು ಖಚಿತ ಮಾಹಿತಿ ಮೇರೆಗೆ ಎರೆಹಳ್ಳದ ನಿರ್ಜನ ಪ್ರದೇಶಕ್ಕೆ ಭೇಟಿ ನೀಡಿದರು. ಹಳ್ಳದ ಅಕ್ಕ-ಪಕ್ಕದ ಜಮೀನುಗಳಲ್ಲಿ ಅಲ್ಲಲ್ಲಿ ಮರಳು ಸಂಗ್ರಹಿಸಿಟ್ಟಿರುವುದಲ್ಲದೇ ಹಳ್ಳದಲ್ಲಿಯೂ ಮರಳು ರಾಶಿ ಸಂಗ್ರಹಿಸಿರುವುದು ಕಂಡು ಬಂತು. ಸಂಗ್ರಹಿಸಿದ ಮರಳು ರಾಶಿಯನ್ನು ವಶಕ್ಕೆ ತೆಗೆದುಕೊಳ್ಳಲು ಕಂದಕೂರು ಹಾಗೂ ಕುಷ್ಟಗಿ ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಿದರು.
ಹಳ್ಳದ ಜಮೀನುಗಳಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಲು ಅವಕಾಶ ಕಲ್ಪಿಸಿದ ಜಮೀನುಗಳು ಯಾರ ಹೆಸರಲ್ಲಿವೆ ಎನ್ನುವುದು ಖಚಿತ ಪಡಿಸಿಕೊಂಡು, ಸದರಿ ಜಮೀನು ಮಾಲೀಕರ ವಿರುದ್ಧವೂ ಕ್ರಮಕ್ಕೆ ಸೂಚಿಸಿದ ಅವರು, ಮರಳು ಅಗತ್ಯವಾಗಿದ್ದರೆ ಕಟ್ಟಡ ಕೆಲಸಕ್ಕೆ ನೇರವಾಗಿ ಬಳಸಿಕೊಳ್ಳಲಾಗುತ್ತಿತ್ತು. ಆದರೆ ಈ ಪ್ರಕರಣದಲ್ಲಿ ಹಳ್ಳದ ಪ್ರದೇಶದಲ್ಲಿ ಎತ್ತುವಳಿ ಮಾಡಿ, ಅಕ್ರಮವಾಗಿ ಬೇರೆಡೆ ಸಂಗ್ರಹಿಸಲಾಗಿದೆ.
ಕಂದಾಯ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪಂಚನಾಮೆ ನಡೆಸಿ, ಸಂಗ್ರಹಿಸಿದ ಅಕ್ರಮ ಮರಳನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿಕೊಂಡು ಸರ್ಕಾರದ ನಿಗದಿತ ದರದನ್ವಯ ಕ್ಯೂಬಿಕ್ ಮೀಟರ್ ಗೆ ಸಾರ್ವಜನಿಕರಿಗೆ, ಸರ್ಕಾರದ ಕೆಲಸಗಳಿಗೆ ಮಾರಾಟ ಮಾಡುವುದು, ಲೋಕೋಪಯೋಗಿ ಇಲಾಖೆಯ ವಿವೇಚನೆಗೆ ಬಿಟ್ಟಿದ್ದು ಎಂದರು. ಈ ವೇಳೆ ಗ್ರಾಮ ಲೆಕ್ಕಾ ಧಿಕಾರಿಗಳಾದ ರಮೇಶ ತಾಳಕೇರಿ, ಸಂಗಮೇಶ ಸಿಂಗಾಡಿ, ಚೂರಿ, ಎಎಸ್ ಐ ಶಿವಶಂಕರಪ್ಪ ಕುರಿ, ಪೇದೆಗಳಾದ ಅಮರೇಶ ಹುಬ್ಬಳ್ಳಿ, ಸಂಗಮೇಶ ಮತ್ತೀತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.