ಜಿಲ್ಲೆಯಲ್ಲಿ ಆಕ್ಸಿಜನ್ ಬಸ್ ಸೇವೆ ಆರಂಭ
ಅಭಿನವ ಗವಿಶ್ರೀ, ಡಿಸಿಎಂ ಸವದಿ ಚಾಲನೆ, ಪ್ರಥಮ ಚಿಕಿತ್ಸೆ ಗಾಗಿ ಆಕ್ಸಿಜನ್ ಬಸ್ ಬಳಕೆ
Team Udayavani, May 25, 2021, 9:03 PM IST
ಕೊಪ್ಪಳ: ಎನ್‌ಇಕೆಎಸ್‌ಆರ್‌ಟಿಸಿ ಮೂಲಕ ನೂತನವಾಗಿ ನಿರ್ಮಿಸಿದ ಆಕ್ಸಿಜನ್ ಬಸ್ ಅನ್ನು ಡಿಸಿಎಂ ಲಕ್ಷ ¾ಣ ಸವದಿ ಅವರು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.
ಈ ವೇಳೆ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಬಳಿಕ ಡಿಸಿಎಂ ಲಕ್ಷ¾ಣ ಸವದಿ ಮಾತನಾಡಿ, ಬೆಂಗಳೂರು ಮಾದರಿಯಲ್ಲಿ ಗುಜರಿಗೆ ಹಾಕುವ ಬಸ್‌ಗಳನ್ನೇ ಸೋಂಕಿತರ ಜೀವ ಉಳಿಸಲು ತುರ್ತು ಆಕ್ಸಿಜನ್ ಬಸ್‌ಗಳನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಜಿಲ್ಲೆಯಲ್ಲಿ ತಾಲೂಕಿಗೆ ಒಂದರಂತೆ ಶಾಸಕರ ನಿಧಿ ಬಳಕೆ ಮಾಡಿ ಆಕ್ಸಿಜನ್ ಯುಕ್ತ ಬಸ್ ಸೇವೆಗೆ ಒದಗಿಸಿ ಎಂದು ಕೆಎಸ್‌ಆರ್ ಟಿಸಿ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ. ಮುಲ್ಲಾ ಅವರಿಗೆ ಸೂಚಿಸಿದರು.
ರಾಜ್ಯದಲ್ಲಿ 10 ಲಕ್ಷ ಕಿ.ಮೀ.ಗೂ ಹೆಚ್ಚು ಓಡಿದ ಬಸ್‌ಗಳನ್ನು ಗುಜರಿಗೆ ಹಾಕಬೇಕು. ಆದರೆ ಅಂತಹ ಬಸ್‌ಗಳನ್ನು ಆಧುನೀಕರಿಸಿ, ಆಕ್ಸಿಜನ್‌ಯುಕ್ತ ಬಸ್‌ಗಳನ್ನಾಗಿ ಪರಿವರ್ತಿಸಿದ್ದೇವೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು ಭರ್ತಿಯಾದ ವೇಳೆ ಈ ಬಸ್‌ಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ರೋಗಿಗಳಿಗೆ ಅನುಕೂಲ ಆಗುತ್ತದೆ. ರಾಜ್ಯದಲ್ಲಿ 100 ಆಮ್ಲಜನಕಯುಕ್ತ ಬಸ್‌ಗಳನ್ನು ತಯಾರಿಸಲು ಯೋಚಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೆ ಹಾಗೂ ದೊಡ್ಡ ದೊಡ್ಡ ತಾಲೂಕುಗಳಿಗೂ ಆಮ್ಲಜನಕಯುಕ್ತ ಬಸ್ ಒದಗಿಸಲಾಗುತ್ತದೆ. ಈ ಬಸ್ 5 ಆಕ್ಸಿಜನ್ ಬೆಡ್ ಹಾಗೂ 1 ವೆಂಟಿಲೇಟರ್ ಬೆಡ್ ಹೊಂದಿದೆ. ಫ್ಯಾನ್ ಕೂಡ ಅಳವಡಿಸಲಾಗಿದೆ. ಇದರಲ್ಲಿ ಒಬ್ಬ ವೈದ್ಯರು, ನರ್ಸ್, ಸಿಬ್ಬಂದಿ ಇರುತ್ತಾರೆ.
ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಸಾರಿಗೆ ಇಲಾಖೆ ಅಡಿ ಬರುವ ಎಲ್ಲ ನಿಗಮಗಳ ಬಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದೊಂದು ಉತ್ತಮ ಯೋಜನೆಯಾಗಿದ್ದು, ಬೇರೆ ಬೇರೆ ರಾಜ್ಯದವರು ಇದರ ಮಾಹಿತಿ ಪಡೆದು, ತಮ್ಮ ರಾಜ್ಯದಲ್ಲೂ ಇಂತಹ ಆಮ್ಲಜನಕಯುಕ್ತ ಬಸ್ ತಯಾರಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಸದ ಸಂಗಣ್ಣ ಕರಡಿ, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಹಾಗೂ ಬಸವರಾಜ ದಢೇಸುಗೂರು, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಎಸ್ಪಿ ಟಿ. ಶ್ರೀಧರ, ಡಿಎಚ್‌ಒ ಡಾ| ಟಿ. ಲಿಂಗರಾಜು, ಸಿ.ವಿ. ಚಂದ್ರಶೇಖರ, ಎಂ.ಎ. ಮುಲ್ಲಾ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.