ಭತ್ತ ಖರೀದಿ ಕೇಂದ್ರಕ್ಕೆ ಅಂಟಿದ ಶಾಪ ತೊಲಗೀತೇ?

ಕಳೆದ ಬಾರಿ ಐವರಿಂದಲೇ ಖರೀದಿ, ಇತಿಹಾಸದಲ್ಲೇ ಮೊದಲು ­ಕೇಂದ್ರ ತೆರೆದರೂ ಬೆದರು ಗೊಂಬೆಯೆಂಬ ಪಟ್ಟವೇ ಕಾಯಂ

Team Udayavani, Apr 24, 2021, 6:35 PM IST

hfghfghf

ವರದಿ : ಯಮನಪ್ಪ ಪವಾರ

ಸಿಂಧನೂರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಹೇರಳವಾಗಿ ಭತ್ತ ಬೆಳೆಯಲಾಗುತ್ತಿದ್ದರೂ ಬೆಂಬಲ ಬೆಲೆಯಡಿ ಖರೀದಿಸುವಲ್ಲಿ ಯಶಸ್ಸನ್ನೇ ಕಂಡಿಲ್ಲ. ಖರೀದಿ ಕೇಂದ್ರಗಳು ತೆರೆದರೂ ಬೆದರಗೊಂಬೆಗಳೆಂಬ ಶಾಪಕ್ಕೆ ಗುರಿಯಾಗಿದ್ದು, ಈ ಬಾರಿಯಾದರೂ ಶಾಪ ವಿಮೋಚನೆಯಾದೀತೇ? ಎಂಬ ಪ್ರಶ್ನೆ ಎದ್ದಿದೆ.

ಎಂದಿನಂತೆ ಈ ಬಾರಿಯೂ ಸರಕಾರ 2021-22ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ತೆರೆಯಲು ಹಸಿರು ನಿಶಾನೆ ತೋರಿಸಲಾಗಿದೆ. ಸಹಜವಾಗಿಯೇ ರೈತರಲ್ಲಿ ಮತ್ತೆ ನಿರೀಕ್ಷೆ ಗರಿಗೆದರಿದೆ. ಕಳೆದ ಎರಡು ದಶಕಗಳಿಂದ ಹೋರಾಟದ ಬಳಿಕ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿತ್ತು. ಸರಕಾರ ವಿಧಿ ಸಿದ ಷರತ್ತುಗಳನ್ನು ಪೂರೈಸಲಾಗದ ಹಿನ್ನೆಲೆಯಲ್ಲಿ ರೈತರು ಖಾಸಗಿ ವರ್ತಕರ ಕಡೆಗೆ ಮುಖ ಮಾಡುತ್ತಿದ್ದರು. ಸರಕಾರ ತೆರೆದ ಅಂಗಡಿಗಳು ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗುತ್ತಿದ್ದವು. 3.50 ಲಕ್ಷ ಕ್ವಿಂಟಲ್‌ನಷ್ಟು ಜೋಳವನ್ನು ಖರೀದಿ ಮಾಡಿರುವುದರಿಂದ ಅದೇ ಹುಮ್ಮಸ್ಸಿನಲ್ಲಿ ಭತ್ತವನ್ನು ಕೂಡ ಖರೀದಿ ಮಾಡುತ್ತೇವೆ ಎಂಬ ಅಭಿಪ್ರಾಯಗಳು ಆಡಳಿತ ವರ್ಗದಿಂದ ಕೇಳಿಬಂದಿದ್ದು, ಚರ್ಚೆಗೆ ನಾಂದಿ ಹಾಡಿದೆ.

ಇತಿಹಾಸದಲ್ಲೇ ಮೊದಲು, ಐದೇ ರೈತರು: ಮಾರುಕಟ್ಟೆಯಲ್ಲಿ ಬೆಲೆ ಚೇತರಿಕೆಗೆ ಪೂರಕವೆಂಬ ಕಾರಣಕ್ಕೆ ಬೆದುರುಗೊಂಬೆಯಂತೆ ಈ ಕೇಂದ್ರಗಳನ್ನು ಬಳಸಿಕೊಳ್ಳಲಾಗುತ್ತಿತ್ತು. ಈ ಬಾರಿ ಖರೀದಿ ಮಾಡೇ ತೀರುತ್ತೇವೆ ಎಂದು ಸ್ವತಃ ಅ ಧಿಕಾರಿಗಳು ಕಳೆದ ವರ್ಷ ರೈತರ ಜಮೀನುಗಳಿಗೆ ಹೋಗಿದ್ದರು. ಅಭಿಯಾನ ಮಾದರಿಯಲ್ಲಿ ಪ್ರತಿದಿನ ರೈತರ ಜಮೀನುಗಳಿಗೆ ಹೋಗಿ ಮನವೊಲಿಸಿ ಬಗ್ಗೆಯೂ ಹೇಳಿಕೊಂಡಿದ್ದರು. ಈ ಎಲ್ಲ ಕಸರತ್ತಿನ ಬಳಿಕ ಐವರು ರೈತರಿಂದ ಮಾತ್ರ ತಲಾ 75 ಕ್ವಿಂಟಲ್‌ನಂತೆ 375 ಕ್ವಿಂಟಲ್‌ ಖರೀದಿ ಮಾಡುವ ಮೂಲಕ ಒಂದೇ ಚೀಲ ಭತ್ತ ಖರೀದಿಸುವುದಿಲ್ಲವೆಂಬ ಅಪವಾದಿಂದ ಮುಕ್ತವಾಗಿದ್ದರು.

ಈ ಬಾರಿ ಮತ್ತೆ ನಿರೀಕ್ಷೆ: 2021-22ನೇ ಸಾಲಿಗೆ ಸಂಬಂಧಿ ಸಿ ಖರೀದಿ ಕೇಂದ್ರ ತೆರೆಯಲು ಸೂಚನೆ ನೀಡಲಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಲ್‌ಗೆ 1,868 ರೂ., ಎ.ಗ್ರೇಡ್‌ ಭತ್ತ ಕ್ವಿಂಟಲ್‌ಗೆ 1,888 ರೂ.ನಂತೆ ಖರೀದಿಸಬೇಕಿದೆ. ಕರ್ನಾಟಕ ಆಹಾರ ನಿಗಮದ 5 ಮಳಿಗೆಗಳು ಸೇರಿದಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಒಳಗೊಂಡು ಜಿಲ್ಲೆಯಲ್ಲಿ 35 ಕೇಂದ್ರಗಳನ್ನು ನೋಂದಣಿಗೆ ಗುರುತಿಸಲಾಗಿದೆ. ಏ.1ರಿಂದಲೇ ಅನ್ವಯಿಸುವಂತೆ ಕೃಷಿ ಇಲಾಖೆಯ  ಐಡಿಯ ಪ್ರಕಾರ ಹೆಸರುಗಳನ್ನು ರೈತರು ನಮೂದಿಸಬೇಕಿದೆ.

ಏ.1ರಿಂದ ಜೂನ್‌, 30, 2021ರ ತನಕ ಖರೀದಿ ನಡೆಯಲಿದೆ. ಮಾರುಕಟ್ಟೆಯಲ್ಲಿ ಆರ್‌ಎನ್‌ಆರ್‌ ದರ ಪ್ರತಿ ಕ್ವಿಂಟಲ್‌ಗೆ 1,650 ರೂ. ನಂತಿದ್ದರೆ, ಕಾವೇರಿ ಸೋನಾಕ್ಕೆ 1,700 ರೂ. ಸಿಗುತ್ತಿದೆ. ಬೆಂಬಲ ಬೆಲೆಗೂ ಮುಕ್ತ ಮಾರುಕಟ್ಟೆಯ ದರಕ್ಕೂ ವ್ಯತ್ಯಾಸ ಇರುವುದರಿಂದ ಖರೀದಿ ನಡೆದರೆ, ರೈತರಿಗೆ ಅನುಕೂಲವಾಗಲಿದೆ. ಕಳೆದ ಬಾರಿ ಸಮರೋಪಾದಿಯಲ್ಲಿ ಕೆಲಸ ಆರಂಭಿಸಿದಾಗಲೂ ವಿಫಲವಾಗಿದ್ದ ಆಡಳಿತ ವರ್ಗ, ಈ ಸಲವಾದರೂ ಭತ್ತ ಖರೀದಿಯ ಮೂಲಕ ರೈತರಲ್ಲಿ ನಿರೀಕ್ಷೆ ಮೂಡಿಸುವುದೇ? ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.