ಕುಷ್ಟಗಿ: ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಮನವಿ

Team Udayavani, Oct 31, 2022, 3:32 PM IST

13

ಕುಷ್ಟಗಿ: ಸೀಮಿತ ಅವಧಿಯಲ್ಲಿ ಸೇವೆ ಮಾಡುವ ಶಾಸಕರಿಗೆ, ಸಂಸದರಿಗೆ ಪಿಂಚಣಿ ವ್ಯವಸ್ಥೆ ಇದೆ. ಆದರೆ ಸರ್ಕಾರದ ಭಾಗವಾಗಿ 30-40 ವರ್ಷಗಳ‌ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ನಿಶ್ಚಿತ ಪಿಂಚಣಿ ಯಾಕಿಲ್ಲ‌ ಎಂದು ಎನ್ ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಿವರಾಮು ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರ‌ ಸಂಘದ ‘ನಿಶ್ಚಿತ ಪಿಂಚಣಿ ನಮ್ಮ ಹಕ್ಕು’ ಘೋಷಣೆಯೊಂದಿಗೆ ವಿಜಯ ಸಂಕಲ್ಪ ಯಾತ್ರೆ ಕುಷ್ಟಗಿಗೆ ಆಗಮಿಸಿದ ಸಂದರ್ಭದಲ್ಲಿ ಎನ್ ಪಿಎಸ್ ನೌಕರರನ್ನು ಉದ್ದೇಶಿಸಿ ಸಭೆಯಲ್ಲಿ ಮಾತನಾಡಿದರು.

ಸೇವೆಯಲ್ಲಿರುವ ಎನ್ ಪಿಎಸ್ ನೌಕರರ ಜೀವನ ಸಂಧ್ಯಾ ಕಾಲದ ಬೇಡಿಕೆಯಾಗಿದ್ದು, ಜೀವನದ ಕೊನೆಯ ಘಟ್ಟದಲ್ಲಿ ಗೌರವಯುತವಾಗಿ ಬದುಕಲು ಸಹಾಯವಾಗಲಿದೆ. ಎನ್. ಪಿ.ಎಸ್. ಅನಾನುಕೂಲದ ಹಿನ್ನೆಲೆಯಲ್ಲಿ ರಾಜಸ್ಥಾನ, ಛತ್ತೀಸ್ ಘಡ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಎನ್‌ಪಿಎಸ್ ರದ್ದು ಪಡಿಸಿವೆ.

ಅದೇ ಮಾದರಿ ಕರ್ನಾಟಕದಲ್ಲಿಯೂ ಎನ್‌ಪಿಎಸ್ ಯಾಕೆ ರದ್ದುಗೊಳಿಸಿಲ್ಲ? ಎನ್ ಪಿಎಸ್ ನೌಕರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮು ಪ್ರಶ್ನಿಸಿದರು. ಇದು ಸರ್ಕಾರಕ್ಕೆ ಅಂತಿಮ ಗಡವು, ಮಾಡು ಇಲ್ಲವೇ ಮಡಿ ಹೋರಾಟವಾಗಿದೆ ಎಂದರು.

ಸರ್ಕಾರಿ ನೌಕರರ ನಿವೃತ್ತಿ ಜೀವನವನ್ನು ಅಭದ್ರತೆಗೆ ತಳ್ಳುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವಂತೆ ಸರ್ಕಾರಿ ನೌಕರರು ಬೀದಿಗೆ ಇಳಿದಿದ್ದೇವೆ. ಡಿಸೆಂಬರ್ 19 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅವಿರತ ಹೋರಾಟ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಶಾಂತರಾಮು ತಿಳಿಸಿದರು.

ಎನ್ ಪಿಎಸ್ ನೌಕರರ ಹೋರಾಟ ಬೆಂಬಲಿಸಿದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಮಾತನಾಡಿ, ಎನ್ ಪಿಎಸ್ ನೌಕರರ ಈ‌ ಬೇಡಿಕೆ ನ್ಯಾಯಯುತವಾಗಿದೆ. ಈ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು.

ಪ್ರಧಾನ ಕಾರ್ಯದರ್ಶಿ ನಾಗನಗೌಡ, ಕುಷ್ಟಗಿ ತಾಲೂಕು ನೌಕರ ಸಂಘದ ಅಧ್ಯಕ್ಷ ಬಾಲಜ್ಜ ಬಳಿಗಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ ಕುದರಿ, ಕುಷ್ಟಗಿ ತಾಲೂಕು ಅಧ್ಯಕ್ಷ ಶರಣಪ್ಪ ವಡ್ಡರ, ಉಪಾಧ್ಯಕ್ಷ ಬಸವರಾಜ ಸಂಕನಾಳ, ರುದ್ರೇಶ್ ಬೂದಿಹಾಳ ಶಿವಪ್ಪ ವಾಗ್ಮೋರೆ  ಶರಣಪ್ಪ,  ಭರಮಪ್ಪ ಪರಸಪೂರ್ ಶಂಕರ್ ಉಪ್ಪಾರ್ ಶರಣಗೌಡ ಸೇರಿದಂತೆ ಕಂದಾಯ, ಜೆಸ್ಕಾಂ, ಪಂಚಾಯತ್ ರಾಜ್ ನೌಕರರು ಹಾಜರಿದ್ದರು.

ಟಾಪ್ ನ್ಯೂಸ್

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.