ಪೊಲೀಸ್ ವೇಷದಲ್ಲಿ ಹಣ ವಸೂಲಿ; ಇಬ್ಬರ ಬಂಧನ
ಬಂಧಿತರಿಂದ ದ್ವಿಚಕ್ರ ವಾಹನ ವಶ| ಸವಾರರಿಂದ ಎಟಿಎಂ ಕಿತ್ತುಕೊಂಡು ಹಣ ಡ್ರಾ ಮಾಡಿದ್ದ ಕದೀಮರು
Team Udayavani, Oct 2, 2021, 5:43 PM IST
ಕೊಪ್ಪಳ: ಕೊಪ್ಪಳದ ಹೊರ ವಲಯದಲ್ಲಿ ಪೊಲೀಸ್ ವೇಷದಲ್ಲಿ ರಸ್ತೆಯಲ್ಲಿ ಸುತ್ತಾಡುವ ವಾಹನ ಸವಾರರನ್ನು ತಡೆದು ನಾವು ಪೊಲೀಸರು ದಾಖಲೆ ತೋರಿಸು, ಇಲ್ಲದಿದ್ದರೆ ದಂಡ ಕಟ್ಟು ಎಂದು ಒತ್ತಾಯಪೂರ್ವಕವಾಗಿ ಜನರಿಂದ ಹಣ ಕೀಳುತ್ತಿದ್ದ ಇಬ್ಬರನ್ನು ಕೊಪ್ಪಳ ಪೊಲೀಸರು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಗದಗ ಜಿಲ್ಲೆಯ ಸಂಜಯ ಕೊಪ್ಪದ ಹಾಗೂ ಸಂಜು ಚಲವಾದಿ ಎಂದು ಗುರುತಿಸಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭೀಮಪ್ಪ ಹುಗ್ಗಿ ಎಂಬಾತ ವ್ಯಕ್ತಿ ತನ್ನ ಸ್ನೇಹಿತರ ಜೊತೆಯಲ್ಲಿ ಮುನಿರಾಬಾದ್ ಡ್ಯಾಂ ನೋಡಲು ತೆರಳುತ್ತಿದ್ದ ವೇಳೆ ಕೊಪ್ಪಳ ಹೊರ ವಲಯದ ಆರ್‌ಟಿಒ ಕಚೇರಿ ಬಳಿ ಸಂಜಯ ಹಾಗೂ ಸಂಜು ಎಂಬಾತರು ವಾಹನ ತಡೆದು ನಿಮ್ಮ ವಾಹನಗಳ ದಾಖಲೆ ತೋರಿಸಿ ಎಂದು ಗದರಿಸಿದ್ದಾರೆ. ಇಲ್ಲದಿದ್ದರೆ ದಂಡ ಕಟ್ಟಿ ಎಂದಿದ್ದಾರೆ. ಅವರ ಬಳಿಯಿದ್ದ ಹಣ ಒತ್ತಾಯಪೂರ್ವಕವಾಗಿ ಕಿತ್ತುಕೊಂಡಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಗೆ ಎಳೆದೊಯ್ಯುವ ಕುರಿತು ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಅವರ ಬಳಿಯಿದ್ದ ಎಟಿಎಂ ಕಿತ್ತುಕೊಂಡು ಪಿನ್ ಪಡೆದು ಕೊಪ್ಪಳದಲ್ಲಿ ಎಟಿಎಂನಿಂದ ಹಣವನ್ನೂ ಡ್ರಾ ಮಾಡಿದ್ದಾರೆ. ಪರ್ಸ್‌ನಲ್ಲಿದ್ದ ಸಾವಿರ ರೂ. ಹಣ ಕಿತ್ತುಕೊಂಡಿದ್ದಾರೆ. ಇವರ ವರ್ತನೆಗೆ ಭೀಮಪ್ಪ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣ ದಾಖಲಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಎಸ್‌ಪಿ ಟಿ. ಶ್ರೀಧರ್ ಹಾಗೂ ಕೊಪ್ಪಳ ಡಿಎಸ್ಪಿ ಮಾರ್ಗದರ್ಶನದಲ್ಲಿ ಸಿಪಿಐ ವಿಶ್ವನಾಥ ಹಿರೇಗೌಡರ, ಪಿಎಸ್‌ಐ ಲಕ್ಕಪ್ಪ ಅಗ್ನಿ ಸಿಬ್ಬಂದಿಗಳ ತಂಡ ರಚಿಸಿ ಆರೋಪಿಗಳ ಪತ್ತೆಗೆ ಜಾಲ ಬೀಸಿ ನಗರದ ಹೊರ ವಲಯದಲ್ಲಿ ಸುತ್ತಾಡುವ ಯುವಕರ ಮೇಲೆ ಕಣ್ಣಿಟ್ಟು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಸಂಜಯ ಹಾಗೂ ಸಂಜು ಎನ್ನುವ ಖದೀಮರನ್ನು ವಶಕ್ಕೆ ಪಡೆದು ಬಂಧಿತರಿಂದ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಅಲ್ಲದೇ, ಇಬ್ಬರ ವಿರುದ್ದ ಗದಗ ನಗರ, ಗ್ರಾಮೀಣ, ಅಣ್ಣಿಗೇರಿ, ಹುಬ್ಬಳ್ಳಿ, ಕೇಶ್ವಾಪುರ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ. ಈ ಇಬ್ಬರು ವಸೂಲಿಗಾರರ ಪತ್ತೆ ಮಾಡುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಅಧಿ ಕಾರಿಗಳ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.