ಗಣಪತಿ ಹಬ್ಬ: ಶಾಂತಿ ಸೌಹಾರ್ದತೆ ಕಾಪಾಡಲು ಎಸ್ಪಿ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ
Team Udayavani, Aug 31, 2022, 12:04 PM IST
ಗಂಗಾವತಿ: ಗಣಪತಿ ಹಬ್ಬದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶ್ಯು ಗಿರಿ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥ ಸಂಚಲನೆ ಜರುಗಿತು.
ಈ ಹಿಂದೆ ಗಣಪತಿ ಹಬ್ಬದ ಸಂದರ್ಭದಲ್ಲಿ ಹಲವು ಅಹಿತಕರ ಘಟನೆಗಳಿಂದ ನಗರದಲ್ಲಿ ಅಶಾಂತಿ ಉಂಟಾಗಿತ್ತು ಆದ್ದರಿಂದ ಗಂಗಾವತಿ ನಗರದ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತದ ಸೂಚನೆ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಬೌಲಿಂಗ್ ಹೋಂಗಾರ್ಡ್ಸ್ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ವರ್ಗದವರು ನಗರ ಪೊಲೀಸ್ ಠಾಣೆಯಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಪೊಲೀಸ್ ಪಥ ಸಂಚಲನ ನಡೆಸಿದರು.
ಈಗಾಗಲೇ ಗಣಪತಿ ಹಬ್ಬದ ಸಂಬಂಧ ಜಿಲ್ಲಾಡಳಿತ ಮುಂಜಾಗರೂಕತೆಯಾಗಿ ಕಡ್ಡಾಯವಾಗಿ ಗಣಪತಿ ಅನುಷ್ಠಾನ ಮಾಡುವವರು ಪರವಾನಿಗೆ ಪಡೆಯಬೇಕು ಏಕ ಗವಾಕ್ಷಿ ಮೂಲಕ ಜೆಸ್ಕಾಂ ನಗರಸಭೆ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಒಂದೇ ಕಡೆ ಸೇರಿಸಿ ಗಣಪತಿ ಪ್ರತಿಷ್ಠಾಪನಾ ಮಂಡಳಿಯವರಿಗೆ ಪರವಾನಗಿ ನೀಡಲಾಗಿದೆ .ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶ್ಯು ಗಿರಿ ಗಂಗಾವತಿಯಲ್ಲಿ ಮೊಕ್ಕಾಂ ಹೂಡಿದ್ದು ಇಲಿಯ ಶಾಂತಿ ಸೌಹಾರ್ದತೆ ಮತ್ತು ಸಂಚಾರಿ ವ್ಯವಸ್ಥೆಯನ್ನು ಗಮನಿಸುತ್ತಿದ್ದಾರೆ .
ಪಥಸಂಚಲನದಲ್ಲಿ ಎಸ್ಪಿ ಅರುಣಾಂಶ್ಯು ಗಿರಿ ಡಿಎಸ್ ಪಿ ರುದ್ರೇಶ್ ಉಜ್ಜನಕೊಪ್ಪ , ಸಿಪಿಐ ವೆಂಕಟಸ್ವಾಮಿ, ಮಂಜುನಾಥ, ಶಾರದಮ್ಮ, ಕಾಮಣ್ಣ ಸೇರಿದಂತೆ ಜಿಲ್ಲೆಯ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.