ಗಂಗಾವತಿ: ‘ಜೇಮ್ಸ್’ ಸ್ವಾಗತಕ್ಕೆ ಅಭಿಮಾನಿಗಳಿಂದ ಭರ್ಜರಿ ಸಿದ್ಧತೆ
Team Udayavani, Mar 15, 2022, 2:33 PM IST
ಗಂಗಾವತಿ: ಭತ್ತದ ಕಣಜ ಗಂಗಾವತಿ ಇದೀಗ ಪವರ್ ಸ್ಟಾರ್ ಪುನೀತ್ ಮಯವಾಗಿದೆ. ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ಅವರ ಜನ್ಮದಿನ. ಅಂದು ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ನಗರದ ತ್ರಿವೇಣಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ .
ಪುನೀತ್ ಅವರ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಪುನೀತ್ ಅವರ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲು ಅಭಿಮಾನಿಗಳು ವಾರದಿಂದ ಪೂರ್ವ ಸಿದ್ಧತೆ ನಡೆಸಿದ್ದಾರೆ.
ಜೇಮ್ಸ್ ಚಿತ್ರ ಬಿಡುಗಡೆಯಾಗುವ ಏಕಛತ್ರ ಮಂದಿರ ಸೇರಿದಂತೆ ನಗರದ ವಿವಿಧ ವೃತ್ತಗಳಲ್ಲಿ ಪುನೀತ್ ರಾಜ್ ಕುಮಾರ್ ಒಳಗೊಂಡ ಅಭಿಮಾನಿಗಳ ಬ್ಯಾನರ್ ಬಂಟಿಂಗ್ಸ್ ಗಳನ್ನು ಹಾಕಿ ಸಂಭ್ರಮಿಸಿದ್ದಾರೆ 50 ಅಡಿ ಎತ್ತರದ ಹಸನ್ಮುಖಿ ಪುನೀತ್ ರಾಜ್ ಕುಮಾರ್ ಭಾವಚಿತ್ರವಿರುವ ಬ್ಯಾನರ್ ಗಳು ನಗರದ ವಿವಿಧೆಡೆ ಕಣ್ಮನ ಸೆಳೆಯುತ್ತಿವೆ.
ಜನ್ಮದಿನದಂದು ನೀಲಕಂಠೇಶ್ವರ ಕ್ಯಾಂಪ್ ಸೇರಿದಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ರಕ್ತದಾನ ಅನ್ನದಾನ ವೃದ್ಧಾಶ್ರಮಗಳಲ್ಲಿ ಹಣ್ಣುಹಂಪಲು ಬಟ್ಟೆಗಳ ವಿತರಣೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನೂ ಅಭಿಮಾನಿಗಳು ಏರ್ಪಡಿಸಿದ್ದಾರೆ . ಜೇಮ್ಸ್ ಚಿತ್ರ ಬಿಡುಗಡೆಯಾಗುವ ಮಾ.17 ರಂದು ಶಿವೆ ಟಾಕೀಸ್ ಸುತ್ತಮುತ್ತಲಿನಲ್ಲಿರುವ ಬ್ಯಾನರ್ ಗಳ ಮೇಲೆ ಹೆಲಿಕಾಪ್ಟರ್ ಮುಖಾಂತರ ಅಭಿಮಾನಿಗಳು ಪುಷ್ಪಾರ್ಚನೆ ಮಾಡುವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ .
ಏನ್ ಜೇಮ್ಸ್ ಚಿತ್ರನಾಯಕ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತಾಲ್ಲೂಕಿನ ಅಂಜನಾದ್ರಿ ಟೆಲಿಕಾಂ ಕ್ಷೇತ್ರವನ್ನು ಬಹಳಷ್ಟು ಇಷ್ಟಪಡುತ್ತಿದ್ದರು ಅದರಂತೆ ರಣವಿಕ್ರಮ ಸೇರಿದಂತೆ ಬಹಳಷ್ಟು ಸಿನಿಮಾ ಚಿತ್ರೀಕರಣ ಸಹ ಆನೆಗೊಂದಿ ಕಿಷ್ಕಿಂದೆ ಭಾಗದಲ್ಲಿ ಹಂಪಿ ಪ್ರದೇಶದಲ್ಲಿ ಸ್ಪಿಟಿ ಪ್ರದೇಶದಲ್ಲಿ ಮತ್ತು ಜಿಂದಾಲ್ ಕೈಗಾರಿಕಾ ಆವರಣದಲ್ಲಿ ನಡೆಸಿದ್ದರಿಂದ ಆನೆಗೊಂದಿ ಕಿಷ್ಕಿಂದಾ ಅಂಜನಾದ್ರಿ ಪುನೀತ್ ರಾಜ್ ಕುಮಾರ್ ಅವರಿಗೆ ಇಷ್ಟವಾದ ಪ್ರದೇಶವಾಗಿದೆ.
ಮನೆ ಮಗನಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ನೆಚ್ಚಿನ ನಟನಿಗೆ ಶುಭ ಕೋರಿ ಸ್ಮರಿಸುತ್ತಿರುವುದು ವಿಶೇಷವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.