ಆತ್ಮ ನಿರ್ಭರ್‌ದಲ್ಲಿ ಕೃಷಿಗೆ ಆದ್ಯತೆ
Team Udayavani, Jul 11, 2020, 5:31 PM IST
ಕೊಪ್ಪಳ: ಕೋವಿಡ್-19 ಸಂದರ್ಭದಲ್ಲಿ ದೇಶದ ಜನರ ಹಿತ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮ ನಿರ್ಭರ್ ಯೋಜನೆ ಘೋಷಿಸಿ, ಇದಕ್ಕಾಗಿ 20 ಲಕ್ಷ ಕೋಟಿ ಮೀಸಲಿಟ್ಟಿದ್ದಾರೆ. ಇದರಲ್ಲಿ ಕೃಷಿ, ರಕ್ಷಣೆ ಹಾಗೂ ಬಾಹ್ಯಾಕಾಶ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಶುಕ್ರವಾರ ಆತ್ಮ ನಿರ್ಭರ್ ಯೋಜನೆ ಹಾಗೂ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ಆತ್ಮನಿರ್ಭರ ಯೋಜನೆಯಡಿ 20 ಲಕ್ಷ ಕೋಟಿಯಲ್ಲಿ ಮೊದಲ ಕಂತಿನಲ್ಲಿ 5,94,550 ಕೋಟಿ ಎಂಎಸ್‌ಎಂಇ ಸೇರಿದಂತೆ ವಿವಿಧ ವ್ಯಾಪಾರಕ್ಕೆ ಮೀಸಲಿಟ್ಟಿದ್ದಾರೆ. ಉದ್ಯಮಗಳಿಗೆ ತುರ್ತು ಕಾರ್ಯ ನಿರ್ವಹಣೆ ಬಂಡವಾಳಕ್ಕೆ 3 ಲಕ್ಷ ಕೋಟಿ, ಒತ್ತಡದಲ್ಲಿ ಇರುವ ಎಂಎಸ್‌ಎಂಇಗಳ ಸಾಲ ಯೋಜನೆಗೆ 20 ಸಾವಿರ ಕೋಟಿ, ಕಾರ್ಮಿಕರಿಗೆ ಇಪಿಎಫ್ ಬೆಂಬಲಕ್ಕೆ 2,800 ಕೋಟಿ, ಎಂಜಿಐಸಿಗೆ ವಿಶೇಷ ನಗದು ಯೋಜನೆಗೆ 30,000 ಕೋಟಿ ರೂ. ಮೀಸಲು ಸೇರಿದಂತೆ ವಿವಿಧ ವಲಯಕ್ಕೆ ಮೊದಲ ಹಂತದ ಅನುದಾನ ಹಂಚಿಕೆ ಮಾಡಿದ್ದಾರೆ ಎಂದರು.
ಇನ್ನೂ 2ನೇ ಕಂತಿನಲ್ಲಿ 3,10,000 ಕೋಟಿ ಘೋಷಣೆ ಮಾಡಲಾಗಿದ್ದು, 3,10,000 ಕೋಟಿ ಎರಡು ತಿಂಗಳ ಕಾಲ ವಲಸಿಗ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯ ಪೂರೈಕೆಗೆ ಬಳಕೆ ಮಾಡಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಕೋವಿಡ್ ಮಹಾಮಾರಿ ನಿಯಂತ್ರಣದ ಜೊತೆಗೆ ದೇಶದ ಅಭಿವೃದ್ಧಿಗೆ ಒತ್ತು ನೀಡಲು 20 ಲಕ್ಷ ಕೋಟಿ ರೂ. ಘೋಷಣೆ ಮಾಡಿದ್ದಾರೆ ಎಂದರು.
ತಂಗಡಗಿ ಆಸ್ತಿ ಬಹಿರಂಗ ಪಡಿಸಲಿ: ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಗಂಗಾವತಿ ಅಮೃತ ಸಿಟಿ ಯೋಜನೆಯಡಿ ಭ್ರಷ್ಟಾಚಾರ ನಡೆದಿದೆ. ನಾನು ಶಾಮೀಲಾಗಿದ್ದೇನೆ ಎನ್ನುವ ರೀತಿ ಹೇಳಿಕೆ ನೀಡಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಈ ವರೆಗೂ ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲ. ಅವರಿಗೆ ಅನುಮಾನವಿದ್ದರೆ 1978ರಿಂದ ಹಿಡಿದು ಈ ವರೆಗಿನ ಆಸ್ತಿಯನ್ನು ನಾನು ಬಹಿರಂಗ ಪಡಿಸಲು ಸಿದ್ಧನಿದ್ದೇನೆ. ತಂಗಡಗಿ ಶಾಸಕರಾಗಿದ್ದಾಗ ಗಳಿಸಿದ ಆಸ್ತಿ ಏಷ್ಟು ಎನ್ನುವುದನ್ನು ಅವರು ಬಹಿರಂಗ ಪಡಿಸಲಿ ಎಂದು ಸವಾಲ್ ಎಸೆದರು.
ಗಂಗಾವತಿಯಲ್ಲಿ ಅಮೃತ್ ಸಿಟಿ ಯೋಜನೆ ಕಾಮಗಾರಿ ಕಳಪೆಯಾಗಿದೆ ಎಂದು ನಾನೇ ಈ ಹಿಂದೆ ಹೇಳಿದ್ದೆ. ಇನ್ನೂ ಪರಣ್ಣ ಮುನವಳ್ಳಿ ಕಾಮಗಾರಿ ಚೆನ್ನಾಗಿದೆ ಎಂದರೆ ಅದು ಅವರ ಅಭಿಪ್ರಾಯ ಎಂದು ಅವರು ತಂಗಡಗಿವಿರುದ್ಧ ಗುಡುಗಿದರು. ಕೋವಿಡ್ 19 ಬಗ್ಗೆ ಜನರು ಭೀತಿಗೊಳಗಾಗಬಾರದು. ಗಂಗಾವತಿ ತಾಲೂಕಿನ ಹಿರೇಜಂತಕಲ್, ಸಂಗಾಪುರದಲ್ಲಿ ಗುರುವಾರ ರಾತ್ರಿ ನಡೆದ ಘಟನೆ ತಲೆ ತಗ್ಗಿಸುವಂತಹದ್ದು ಎಂದರು.
ರಾಘವೇಂದ್ರ ಪಾನಘಂಟಿ, ನವೀನ್ ಗುಳಗಣ್ಣವರ್, ಬಸಯ್ಯ ಗದಗಿನಮಠ, ಜಿಪಂ ಸದಸ್ಯ ಕೆ. ಮಹೇಶ್, ಗಣೇಶ್ ಹೊರತಟ್ನಾಳ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.