ಅಕಾಲಿಕ ಮಳೆಗೆ ಭತ್ತ ಬೆಳೆ ನಾಶ
Team Udayavani, May 3, 2020, 12:30 PM IST
ಗಂಗಾವತಿ: ಅಕಾಲಿಕ ಮಳೆಯಿಂದಾಗಿ ನೆಲಕ್ಕುರುಳಿರುವ ಭತ್ತದ ಬೆಳೆ.
ಬೆಂಗಳೂರು/ಗಂಗಾವತಿ/ಹೊಳೆನರಸೀಪುರ: ಶನಿವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಒಳನಾಡಿನ ಹೆಚ್ಚಿನ ಕಡೆ ಮತ್ತು ಕರಾವಳಿಯ ಒಂದೆರಡು ಕಡೆ ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಬಿದ್ದ 4 ಸೆಂ.ಮೀ. ಮಳೆ ರಾಜ್ಯದಲ್ಲಿಯೇ ಅತ್ಯಧಿಕವಾಗಿತ್ತು.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಸುರಿದ ಅಕಾಲಿಕ ಮಳೆಗೆ ಭತ್ತ ಬೆಳೆ ನೆಲಕ್ಕುರುಳಿದ್ದು, ಅಪಾರ ಪ್ರಮಾಣದಲ್ಲಿ
ನಷ್ಟವುಂಟಾಗಿದೆ. ಕುಂಟೋಜಿ ಬರಗೂರು, ಮುಸ್ಟೂರು, ಅಂಜೂರಿಕ್ಯಾಂಪ್ ಕೊಕ್ಲೃಕಲ್ ಸೇರಿ ಸುತ್ತಲಿನ ಗ್ರಾಮಗಳಲ್ಲಿ ಸುಮಾರು 300 ಎಕರೆ ಪ್ರದೇಶಲ್ಲಿ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಸಂಪೂರ್ಣ ನೆಲಕ್ಕುರುಳಿದೆ. ಈ ಪ್ರದೇಶಕ್ಕೆ ಕಾರಟಗಿ ತಹಶೀಲ್ದಾರ್ ಕವಿತಾ ಭೇಟಿ ನೀಡಿ, ಸರ್ವೇ ಕಾರ್ಯ ಮಾಡುವಂತೆ ಸೂಚನೆ ನೀಡಿದ್ದಾರೆ.
20ಕ್ಕೂ ಮನೆಗಳಿಗೆ ಹಾನಿ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿಗೆ ಸೇರಿದ ಗಂಜಿಗನಹಳ್ಳಿಯಲ್ಲಿ ಶುಕ್ರವಾರ ಬಿದ್ದ ಮಳೆಯಿಂದ 20ಕ್ಕೂ ಮನೆಗಳಿಗೆ ಹಾನಿಯಾಗಿದ್ದು, ಅಡಿಕೆ ಮರ ತೆಂಗಿನ ಮರ ಹಾಗೂ ಬಾಳೆ ಸಂಪೂರ್ಣವಾಗಿ ನೆಲಕಚ್ಚಿದೆ. ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಸುರಿದ ಮಳೆ ಪ್ರಮಾಣ ಹೀಗಿದೆ. (ಸೆಂ.ಮೀ.ಗಳಲ್ಲಿ) ಹೊಸದುರ್ಗ, ಕುಕನೂರು, ಯಲಬುರ್ಗಾ, ಮುನಿರಾಬಾದ್ ತಲಾ 3, ಚಿಕ್ಕಮಗಳೂರು, ಪಿರಿಯಾಪಟ್ಟಣ, ಆಲೂರು, ಕುಷ್ಟಗಿ, ಸುಬ್ರಹ್ಮಣ್ಯ ತಲಾ 2, ನಾಯಕನಹಟ್ಟಿ, ತೊಂಡೆಭಾವಿ,
ಕೃಷ್ಣರಾಜಸಾಗರ, ಬುಕ್ಕಪಟ್ಣ, ಚಿತ್ರದುರ್ಗ, ದೇವದುರ್ಗ, ಸುಳ್ಯ, ಧರ್ಮಸ್ಥಳ, ಮಾಗಡಿ ತಲಾ 1. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 41.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕರಾವಳಿಯ ಪಣಂಬೂರಿನಲ್ಲಿ 37 ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ 35 ಡಿ.ಸೆ. ತಾಪಮಾನ ದಾಖಲಾಗಿತ್ತು. ಸೋಮವಾರ ಬೆಳಗ್ಗಿನವರೆಗಿನ ಮುನ್ಸೂಚನೆಯಂತೆ ಕರಾವಳಿಯ ಕೆಲವು ಕಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.