ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
ಸುಪ್ರೀಂ ಕೋರ್ಟ್‌ಗೆ ಮೀಸಲಾತಿ ಮುಂದುವರೆಸುವುದಾಗಿ ಅಫಿಡವಿಟ್ ಸಲ್ಲಿಸಿದೆ.
Team Udayavani, May 4, 2024, 6:00 PM IST
■ ಉದಯವಾಣಿ ಸಮಾಚಾರ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಬಿಜೆಪಿಯವರಿಗೆ ಕನಿಷ್ಠ ಜ್ಞಾನವಿಲ್ಲ. ಮುಸ್ಲಿಂರ ಮೀಸಲಾತಿ ವಿಚಾರದಲ್ಲಿ ಬಿಜೆಪಿಗರು ಹಸಿ ಸುಳ್ಳು ಹೇಳುತ್ತಿದ್ದು, ಆ ಪಕ್ಷ ಸುಳ್ಳು ಹೇಳುವ ಸಂಸ್ಥೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಗುಡುಗಿದರು.
ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕರೂರು ಮತ್ತು ಸಿರಿಗೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರ ಪರ ಮತ ಪ್ರಚಾರ ನಡೆಸಿ ಸಚಿವರು ಮಾತನಾಡಿದರು.
ಚಿನ್ನಪ್ಪರೆಡ್ಡಿ ಅವರ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಮರಿಗೆ 20 ವರ್ಷಗಳ ಹಿಂದೆ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಈ ಮೀಸಲಾತಿಯನ್ನು ತೆಗೆಯಲು ಬಸವರಾಜ ಬೊಮ್ಮಾಯಿ ಸರ್ಕಾರ ಪ್ರಯತ್ನಿಸಿತ್ತು. ಬಳಿಕ ಬಸವರಾಜ ಬೊಮ್ಮಾಯಿ ಅವರ ಸರ್ಕಾರವೇ ಸುಪ್ರೀಂ ಕೋರ್ಟ್‌ಗೆ ಮೀಸಲಾತಿ ಮುಂದುವರೆಸುವುದಾಗಿ ಅಫಿಡವಿಟ್ ಸಲ್ಲಿಸಿದೆ. ಈಗಲೂ ಹಿಂದಿನಂತೆ ಮೀಸಲಾತಿ ಮುಂದುವರೆದಿದೆ. ಈ ವಿಚಾರದಲ್ಲಿ ಬಿಜೆಪಿಗರು ಸುಳ್ಳು ಹೇಳುತ್ತಿದ್ದಾರೆ ಎಂದರು.
ಸುಳ್ಳು ಹೇಳುವುದರಲ್ಲಿ ಬಿಜೆಪಿಯಲ್ಲಿ ಸ್ಪರ್ಧೆ ಪ್ರಾರಂಭಗೊಂಡಿದೆ. ಜನತೆ ಮುಂದೆ ವಾಸ್ತವ ಸತ್ಯವನ್ನು ಹೇಳಿ ಮತ ಕೇಳಲಿ. ಅದನ್ನು ಬಿಟ್ಟು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಹಿಂದುಳಿದ ವರ್ಗದ ಮೀಸಲಾತಿಯನ್ನು ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದೆ ಎಂದು ಸುಳ್ಳು ಹೇಳುತ್ತಾರೆ.
ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಾಗಲಿ ಅಥವಾ ಇಲಾಖಾ
ಮಂತ್ರಿಯಾಗಿ ನಾನು ಮೀಸಲಾತಿ ಬಗ್ಗೆ ಹೇಳಿದ್ದೀನಾ ? ಪ್ರಧಾನ ಮಂತ್ರಿಗಳಿಗೂ ಈ ಬಗ್ಗೆ ತಿಳಿವಳಿಕೆ ಇಲ್ಲವೇ ? ಈ ಬಗ್ಗೆ ಪತ್ರಿಕೆಗಳಲ್ಲಿ ಸುಳ್ಳಿನ ಜಾಹೀರಾತು ನೀಡುತ್ತಿದ್ದಾರೆ. ಈ ದೇಶ ಕಂಡಂತಹ ಮಹಾನ್ ಸುಳ್ಳಿನ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಕಿಡಿಕಾರಿದರು. ಅತೀ ಹೆಚ್ಚು ಸುಳ್ಳು ಹೇಳುವವರು ಬಳ್ಳಾರಿಯಲ್ಲಿದ್ದು, ಅದರಲ್ಲಿ ಓರ್ವ ಮಹಾಶಯ ನಮ್ಮ ಜಿಲ್ಲೆಗೆ ಬಂದು ಶಾಸಕರಾಗಿದ್ದಾರೆ. ನಿತ್ಯ ಜನಕ್ಕೆ ಸುಳ್ಳು ಹೇಳುವುದನ್ನೇ ಪರಿಪಾಠ ಮಾಡಿಕೊಂಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ವಾಗ್ಧಾಳಿ ನಡೆಸಿದರು.
ದೇಶಕ್ಕೆ ಮೋದಿ ಕೊಡುಗೆ ಏನು?
ಬಿಜೆಪಿ ಕೇಂದ್ರದಲ್ಲಿ ಅ ಕಾರಕ್ಕೆ ಬರುವ ಮುನ್ನ ಪೆಟ್ರೋಲ್ 50 ರೂ.ಗೆ ಕೊಡುತ್ತೇವೆ ಎಂದಿದ್ದರು. ಹತ್ತು ವರ್ಷಗಳ ಹಿಂದೆ 45 ರೂ.ಇದ್ದ ಪೆಟ್ರೋಲ್ ದರ 100 ರೂ.ಗೆ, 450 ರೂ.ಇದ್ದ ಅಡುಗೆ ಅನಿಲ 1100 ರೂ.ಗೆ ತಂದು ನಿಲ್ಲಿಸಿದ್ದರು. ಬಿಜೆಪಿಯವರು ಅಂಬಾನಿ, ಅದಾನಿ ಅವರನ್ನು ಮಾತ್ರ ಇನ್ನಷ್ಟು ಶ್ರೀಮಂತರನ್ನಾಗಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಇಡೀ ದೇಶದ ಜನರನ್ನು ಶ್ರೀಮಂತರನ್ನಾಗಿಸಲು ಮುಂದಾಗಿದೆ. ಗಡ್ಡ ಬಿಟ್ಟರೆ ವಿಶ್ವಗುರು ಆಗಲ್ಲ.
ದೇಶದ ರೈತರ, ಬಡವರು, ಮಧ್ಯಮ ವರ್ಗ ಹಾಗೂ ಕಾರ್ಮಿಕರಿಗೆ ಕೊಡುಗೆ ನೀಡಬೇಕು. ನಿಜಕ್ಕೂ ಈ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರಲ್ಲದೇ, ಬಿಜೆಪಿ ಅಭ್ಯರ್ಥಿಗಳು ಮೋದಿ ನೋಡಿ ವೋಟ್ ಹಾಕಿ ಅಂತೀರಾಲ್ಲಪ್ಪ, ನಿಮ್ಮ ಹೆಸರಲ್ಲಿ ವೋಟ್ ಕೇಳಲು ಧಮ್ಮು ಇಲ್ವಾ ಎಂದು ಸವಾಲು ಹಾಕಿದರು. ಮಾಜಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಿ.ಎಂ.ನಾಗರಾಜ್, ಗಣೇಶ್ ಪ್ರಸಾದ್, ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ನಾಪುರ, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್, ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.