![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 23, 2022, 2:29 PM IST
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.
ತಾಲೂಕಿನ ಹಿರೇಸಿಂದೋಗಿ ಜಿಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 8.50 ಕೋಟಿ ರೂ. ವೆಚ್ಚದ ಜೆಜೆಎಂನಡಿ ಪ್ರತಿ ಮನೆಗೂ ಕುಡಿಯುವ ನೀರಿನ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ಗ್ರಾಮಕ್ಕೂ ಪ್ರತಿ ಮನೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ನಮ್ಮ ಕೇತ್ರದಲ್ಲೂ ಕುಡಿಯುವ ನೀರಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಅವಶ್ಯವಿರುವ ಗ್ರಾಮಗಳಲ್ಲಿ ಏರ್‌ಟ್ಯಾಂಕ್, ಬೋರವೆಲ್ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ ಅನೇಕ ಚೆಕ್ ಡ್ಯಾಂಗಳ ನಿರ್ಮಾಣದ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲಾಗಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ವಿವಿಧ ಇಲಾಖೆಗಳ ಮೂಲಕ ಅನುದಾನ ಬಿಡುಗಡೆಗೊಳಿಸಿ ಪ್ರತಿ ಗ್ರಾಮಕ್ಕೂ ಶಾಲಾ ಕೊಠಡಿ, ಸಿಸಿ ರಸ್ತೆ ಮತ್ತು ಚರಂಡಿ, ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.
ಬಿಜೆಪಿ ಸರ್ಕಾರದಲ್ಲಿ ಗುತ್ತಿಗೆದಾರರಿಗೆ ಭಯದ ವಾತಾವರಣ ಇರುವುದರಿಂದ ಕೆಲಸ ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿವೆ. ಬಿಜೆಪಿ ಸರ್ಕಾರವು ರೈತರ ಜೀವನ ಮಟ್ಟ ಸುಧಾರಿಸುವ ಯಾವುದೇ ಯೋಜನೆಗಳನ್ನು ರೂಪಿಸುವಲ್ಲಿ ವಿಫಲವಾಗಿದ್ದು, ಅವರನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಕುಸಿಯುವಂತೆ ಮಾಡಿದೆ. ಎಲ್ಲಾ ಕೆಲಸಗಳಲ್ಲಿ ಶೇ.40 ಕಮಿಷನ್ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಧರ್ಮದ ಹೆಸರಿನಲ್ಲಿ ಆಡಳಿತ ನಡೆಸುತ್ತಿದೆ. ಬಿಜೆಪಿ ಸರ್ಕಾರದಿಂದ ದೇಶ ವಿದೇಶಗಳಲ್ಲಿ ಭಾರತದ ಹೆಸರಿಗೆ ಧಕ್ಕೆಯಾಗುತ್ತಿದೆ. ರಾಜ್ಯದಲ್ಲಿ ಗಲಭೆ, ದೊಂಬಿಗಳು ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎಲ್ಲಾ ಇಲಾಖೆಗಳಲ್ಲಿ ಹಗರಣಗಳು ನಡೆಯುತ್ತಿದ್ದು ಆಡಳಿತ ಕಣ್ಮುಚ್ಚಿ ಕುಳಿತಿದೆ. ಮುಂದಿನ ಚುನಾವಣೆಗಳಲ್ಲಿ ಜನರೇ ಇವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಕಾಂಗ್ರೆಸ್ ಮುಖಂಡರಾದ ಎಚ್.ಎಲ್. ಹಿರೇಗೌಡ್ರ, ಬಾಲಚಂದ್ರನ್, ವಿರುಪಾಕ್ಷಗೌಡ್ರ, ವೆಂಕನಗೌಡ್ರ ಹಿರೇಗೌಡ್ರ, ಕೃಷ್ಣರೆಡ್ಡಿ ಗಲಬಿ, ಯಲ್ಲನಗೌಡ್ರ ಮಾಲಿಪಾಟೀಲ್, ಕೇಶವರೆಡ್ಡಿ, ಶೇಖರಗೌಡ್ರ, ಸೋಮಣ್ಣ, ಶಿವಣ್ಣರೆಡ್ಡಿ ಬೂಮಕ್ಕನವರ, ಕೆ.ಎಂ. ಸೈಯದ್, ಸಲೀಂ ಅಳವಂಡಿ, ಪರಶುರಾಮ ಮೆಕ್ಕಿ, ಅಕ್ಬರ್ ಪಾಷಾ ಪಲ್ಟನ್ ಸೇರಿ ಇತರರು ಉಪಸ್ಥಿತರಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.