ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ಹಿಟ್ನಾಳ
Team Udayavani, Jun 20, 2020, 2:50 PM IST
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಹಿರೇಸಿಂದೋಗಿ ಜಿಪಂ ವ್ಯಾಪ್ತಿಯ ಗ್ರಾಮಗಳಾದ ಕಾತರಕಿ-ಗೂಡ್ಲಾನೂರ, ಬಿಸರಳ್ಳಿ, ಬಿಕನಳ್ಳಿ, ಡಂಬ್ರಳ್ಳಿ, ಬೂದಿಹಾಳ, ಬೇಳೂರು ಹಾಗೂ ಮೈನಳ್ಳಿ ಗ್ರಾಮಗಳಲ್ಲಿ 2 ಕೋಟಿ ರೂ. ವೆಚ್ಚದಡಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೇರವೇರಿಸಿ, ಜನಸಂಪರ್ಕ ಸಭೆ ನಡೆಸಿ ಅವರು ಮಾತನಾಡಿದರು.
ಈ ಏಳು ವರ್ಷದ ಅವಧಿಯಲ್ಲಿ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ 3000 ಕೋಟಿಗಿಂತ ಹೆಚ್ಚು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ಕೊಪ್ಪಳ ನಗರಕ್ಕೆ ಜೆ.ಪಿ. ಮಾರ್ಕೆಟ್ ನಿರ್ಮಾಣ, ಸುಸಜ್ಜಿತ ತಾಲೂಕು ಕ್ರೀಡಾಂಗಣ, ಮಹಿಳಾ ಪದವಿ ಕಾಲೇಜ್ ಕಟ್ಟಡ, ಪಿ.ಜಿ. ಸೆಂಟರ್ ಕಟ್ಟಡ ಹಾಗೂ ಕೊಪ್ಪಳ ನಗರಕ್ಕೆ ಒಂದು ಹೈಟೆಕ್ ಮಲ್ಟಿಸ್ಪೇಷಲ್ ಆಸ್ಪತ್ರೆ ಸೇರಿ ಹಲವು ಅಭಿವೃದ್ಧಿ ಕಾರ್ಯ ನಡೆದಿವೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ತಾಪಂ ಅಧ್ಯಕ್ಷ ಬಾಲಚಂದ್ರನ್, ಎಪಿಎಂಸಿ ಅಧ್ಯಕ್ಷ ನಾಗರಾಜ ಚಳ್ಳೂಳ್ಳಿ, ಕೆಎಂಎಫ್ ಮಾಜಿ ಅಧ್ಯಕ್ಷ ವೆಂಕನಗೌಡ್ರ ಹಿರೇಗೌಡ್ರ, ತಾಪಂ ಸದಸ್ಯ ವೀರುಪಾಕ್ಷಪ್ಪ ಬಿಸರಳ್ಳಿ, ನಗರಸಭಾ ಸದಸ್ಯ ಅಕ್ಬರ ಪಾಷ ಪಲ್ಟನ್ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.