2 ವಾರಗಳಲ್ಲಿ ಬಾಕಿ ಕೆಲಸ ಮುಗಿಸಿ
Team Udayavani, Sep 18, 2020, 6:51 PM IST
ಕೊಪ್ಪಳ: ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಬಾಕಿ ಉಳಿದ ಕೆಲಸಗಳು ಇನ್ನೆರಡು ವಾರಗಳೊಳಗೆಪೂರ್ಣಗೊಳ್ಳಬೇಕೆಂದು ಕಂದಾಯ ಸಚಿವ ಆರ್.ಅಶೋಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಸ್ಮಶಾನ ಜಾಗ ಇರಲೇಬೇಕು. ಸ್ಮಶಾನಜಾಗ ಇಲ್ಲದ ಗ್ರಾಮಗಳಲ್ಲಿ ಸರ್ಕಾರಿ ಜಾಗ ಗುರುತಿಸಬೇಕು. ಈ ಜಾಗವು ಗ್ರಾಮಕ್ಕೆ ಹತ್ತಿರವಾಗಿದ್ದು, ಜನ ಬಳಕೆಗೆ ಯೋಗ್ಯವಾಗಿರಬೇಕು. ಸರ್ಕಾರಿ ಜಾಗ ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಬೇಕು ಎಂದರು.
ಜಿಲ್ಲೆಯಲ್ಲಿ ನಕಲಿ ಪ್ರಮಾಣ ಪತ್ರ ನೀಡಿ ಪಿಂಚಣಿ ಪಡೆಯುತ್ತಿರುವವರನ್ನುಪತ್ತೆ ಹಚ್ಚಲು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಕೆಲವು ತಾಲ್ಲಕುಗಳು ಪ್ರಗತಿ ಸಾಧಿಸಿಲ್ಲ. 15 ದಿನಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಿ ನಕಲಿ ಪಿಂಚಣಿದಾರರನ್ನು ಪತ್ತೆ ಹಚ್ಚಬೇಕು. ಇಲ್ಲದಿದ್ದರೆ ಸಂಬಂ ಧಿಸಿದ ಅಧಿ ಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಕೋವಿಡ್-19 ಗೆ ಸಂಬಂಧಿಸಿದಂತೆ ಅಗತ್ಯ ಚಿಕಿತ್ಸೆ, ಉಪಕರಣಗಳ ಖರೀದಿಗೆ ಸರ್ಕಾರದಿಂದ ಇದುವರೆಗೆ 9 ಕೋಟಿ ಹಣ ಬಿಡುಗಡೆ ಮಾಡಿದೆ. ಇದರಲ್ಲಿ ವೆಂಟಿಲೇಟರ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಕೊಪ್ಪಳದಲ್ಲಿ ಮಾತ್ರ ಸೋಂಕು ಹೆಚ್ಚುತ್ತಿದೆ. ಇದಕ್ಕೆ ಕಾರಣಗಳೇನು ಎಂದು ಪ್ರಶ್ನಿಸಿದರು. ಶೀಘ್ರ ವೆಂಟಿಲೇಟರ್ ಅಳವಡಿಸಬೇಕು. ಅದರ ನಿರ್ವಹಣೆಗೆ ಸಿಬ್ಬಂದಿ ನಿಯೋಜಿಸಬೇಕು. ಅನಸ್ತೇಶಿಯಾ ತಜ್ಞರ ಕೊರತೆ ನೀಗಿಸಲು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಅನುದಾನ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಸಂತೆ, ಜನಸಂದಣಿ ಇರುವ ಪ್ರದೇಶಗಳಲ್ಲಿ ಅಧಿಕಾರಿಗಳನ್ನು ನೇಮಿಸಿ. ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡದವರಿಗೆ ದಂಡ ವಿ ಧಿಸಿ.ಲಸಿಕೆ ಬರುವವರೆಗೂ ಎಲ್ಲ ರೀತಿಯ ಎಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ಅಧಿಕಾರಿಗಳು ಪ್ರತಿ ಸಭೆಯಲ್ಲೂ ಕೆಲಸ ಪೂರ್ಣಗೊಳಿಸಲು ಒಂದು ವಾರ, ಹದಿನೈದು ದಿನಗಳ ಕಾಲವಕಾಶ ಕೇಳುತ್ತೀರಿ. ಆದರೆ ನೀವು ಕೇಳಿದ ಸಮಯದಲ್ಲಿ ಪೂರ್ಣವಾಗುವ ಕೆಲಸ ಅದಕ್ಕೂ ಮೊದಲು ಏಕೆ ಪೂರ್ಣಗೊಳ್ಳುವುದಿಲ್ಲ ಎಂದು ಪ್ರಶ್ನಿಸಿದರು.
ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು ಮಾತನಾಡಿ, ಭತ್ತ ಬೆಳೆಯುವ ಪ್ರದೇಶ ಹಾಗೂ ಇತರೆ ಪ್ರದೇಶಗಳಲ್ಲಿ ಅಗತ್ಯದ ಆಧಾರದಲ್ಲಿ ರಸಗೊಬ್ಬರಗಳ ಹಂಚಿಕೆ ಮಾಡಿ. ಜಿಲ್ಲೆಯ ಯಾವುದೇ ಭಾಗದ ರೈತರಿಗೂ ರಸಗೊಬ್ಬರದ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.
ಶಾಸಕ ಹಾಲಪ್ಪ ಆಚಾರ್ ಮಾತನಾಡಿ, ಯಲಬುರ್ಗಾ ತಾಲೂಕಿನಲ್ಲಿ ವೆಂಟಿಲೇಟರ್ ಕೊರತೆಯಿಂದ ರೋಗಿಗಳು ಸಾಯುತ್ತಿದ್ದಾರೆ. ವೆಂಟಿಲೇಟರ್ ಕಾರ್ಯ ಚಟುವಟಿಕೆ ಹಾಗೂ ನಿರ್ವಹಣೆಗೆ ಅಗತ್ಯ ಕ್ರಮ
ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಕುರಿತು ಒಂದು ವಾರದೊಳಗೆ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಡಿಸಿ ವಿಕಾಸ್ ಕಿಶೋರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಎಸ್ಪಿ ಜಿ.ಸಂಗೀತಾ, ಎಡಿಸಿ ಎಂ.ಪಿ. ಮಾರುತಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.