![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 12, 2020, 3:21 PM IST
ಗಂಗಾವತಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿ ಮುಖಂಡರು ಜಾಗೃತಿ ಮೂಡಿಸುತ್ತಿದ್ದ ವೇಳೆ ಕೆಲ ಯುವಕರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡ ಘಟನೆ ನಗರದ ಕಿಲ್ಲಾ ಪ್ರದೇಶದಲ್ಲಿ ಶನಿವಾರ ರಾತ್ರಿ ಜರುಗಿದೆ. ಕಿಲ್ಲಾ ಪ್ರದೇಶದಲ್ಲಿರುವ ಬಿಜೆಪಿ ಕಾರ್ಯಕರ್ತರ ನಿವಾಸದಲ್ಲಿ ಪೌರತ್ವ ಕಾಯ್ದೆ ಜನಜಾಗೃತಿ ನಡೆಸಲು ಬಿಜೆಪಿ ನಗರಸಭೆ ಸದಸ್ಯರು ಮತ್ತು ಮುಖಂಡರು ಆಗಮಿಸಿದ್ದ ವೇಳೆ ಮುಸ್ಲಿಂ ಯುವಕರು “ನೋ ಸಿಎಎ ಗೋ ಬ್ಯಾಕ್’ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಇದರಿಂದ ಬಿಜೆಪಿ ಮುಖಂಡರು ಮತ್ತು ಕಿಲ್ಲಾ ಪ್ರದೇಶದ ಯುವಕರ ಮಧ್ಯೆ ಮಾತಿನ ಚಕಮಕಿ ಜರುಗಿ ಪರಿಸ್ಥಿತಿ ವಿಕೋಪಗೊಂಡಿತ್ತು. ನಮ್ಮ ಏರಿಯಾದಲ್ಲಿ ಪೌರತ್ವ ಕಾಯ್ದೆ ಕುರಿತು ಯಾವುದೇ ಜಾಗೃತಿ ಬೇಡ, ಓಣಿ ಬಿಟ್ಟುಹೋಗುವಂತೆ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಒಪ್ಪದ ಬಿಜೆಪಿ ಮುಖಂಡರು ತಾವು ತಮ್ಮ ಕಾರ್ಯಕರ್ತರಿಗೆ ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನ ಕಾರ್ಯಕ್ರಮ ನಡೆಸುತ್ತಿದ್ದು, ಇದುದೇಶವ್ಯಾಪಿ ನಡೆಯುತ್ತಿದೆ. ಇದಕ್ಕೆ ಅಡ್ಡಿಪಡಿಸುವ ಮೂಲಕ ಸಂವಿಧಾನ ವಿರೋಧಿಸಲಾಗುತ್ತಿದೆ ಎಂದುಪೊಲೀಸರಿಗೆ ತಿಳಿಸಿದರು. ಪ್ರತಿಭಟನಾ ನಿರತರು ಕೇಂದ್ರ ಸರಕಾರ ಹಾಗೂ ಕೇಂದ್ರ ಪ್ರಧಾನಿ ಹಾಗೂ ಗೃಹ ಸಚಿವರ ವಿರುದ್ಧ ಘೋಷಣೆ ಕೂಗಿದರು. ಕಿಲ್ಲಾ ಏರಿಯಾದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಸ್ಥಳಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.