![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 18, 2019, 2:32 PM IST
ತಾವರಗೇರಾ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿಯು ಅಘೋಷಿತ ತುರ್ತು ಪರಿಸ್ಥಿತಿಯಾಗಿದೆ ಎಂದು ವೇಲ್ಫೆರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸಂಚಾಲಕ ರಾಜಾ ನಾಯಕ ಹೇಳಿದರು.
ಪಟ್ಟಣದ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಕರ್ನಾಟಕ ಪ್ರಾಂತ್ಯ ರೈತ ಸಂಘ ಹಾಗೂ ವೇಲ್ಫೆರ್ ಪಾರ್ಟಿ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೌರತ್ವ ವಿರೋಧಿಸಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶವನ್ನು ಬ್ರಿಟಿಷರಿಂದ
ವಿಮೋಚನೆಗೊಳಿಸಲು ಧರ್ಮದ ಚೌಕಟ್ಟು ಮೀರಿ ವಿವಿಧ ಹೋರಾಟಗಳು ಜರುಗಿದ್ದವು. ಈ ಹಿನ್ನೆಲೆಯಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಧರ್ಮ ನಿರಪೇಕ್ಷತೆಯ ಮೌಲ್ಯಗಳನ್ನು ಸಂವಿಧಾನದ ಆತ್ಮದ ಸ್ಥಾನದಲ್ಲಿ ಸೇರಿಲಾಗಿತ್ತು. ಆದರೆ ಈ ದೇಶ ಪಾಲಿಸಿಕೊಂಡು ಬಂದಿರುವ ಧರ್ಮ ನಿರಪೇಕ್ಷತೆ ಮತ್ತು ಸಮಾನತೆಯ ಬೇರುಗಳನ್ನು ಎಸ್‌ಆರ್‌ಸಿ ಮತ್ತು ಸಿಎಬಿ ನಾಶಪಡಿಸುತ್ತಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ 371 ರದ್ದು ಮಾಡಿ ಕಾಶ್ಮೀರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಹೇಳಿದರು. ನಾಡ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ರಾಜ್ಯ ರೈತ ಪ್ರಾಂತ್ಯ ಸಂಘ ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ ಬುನ್ನಟ್ಟಿ, ಗೌಸೀಯಾ ಬೇಗಂ, ಶ್ಯಾಮೀದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.