8ರಂದು ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ
Team Udayavani, Jan 2, 2020, 3:44 PM IST
ತಾವರಗೇರಾ: ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಂವಿಧಾನ ಉಳಿಸಿ ದೇಶ ರಕ್ಷಿಸಿ ಎಂಬ ಘೋಷಣೆಯೊಂದಿಗೆ ಕುಷ್ಟಗಿಯಲ್ಲಿ ಜ. 8ರಂದು ಬೆಳಗ್ಗೆ 11 ಗಂಟೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಕಾರ್ಯಕ್ರಮ ಜರುಗಲಿದ್ದು, ಆದ್ದರಿಂದ ಹೋಬಳಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈ„ತ ಸಂಘದ ಜಿಲ್ಲಾಧ್ಯಕ್ಷ ನಜೀರ್‌ಸಾಬ್ ಮೂಲಿಮನಿ ಹೇಳಿದರು.
ಪಟ್ಟಣದ ಶ್ರೀಶ್ಯಾಮೀದ್ ಅಲಿ ದರ್ಗಾದ ಶಾದಿಮಹಲ್‌ನಲ್ಲಿ ಬುಧವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ವಿದ್ಯಾರ್ಥಿಗಳು, ಯುವ ಜನ ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಕಾಯ್ದೆ 14, 15 ಮತ್ತು 21ರಲ್ಲಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಇದ್ದರೂ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ. ಸಾಮಾನ್ಯ ಪೌರತ್ವ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಆರ್.ಕೆ. ದೇಸಾಯಿ, ದಲಿತ ಮುಖಂಡ ಆನಂದ ಭಂಡಾರಿ, ರಾಜಾ ನಾಯಕ್, ಹೇಮರಾಜ ವಿರಾಪೂರ, ಬಸವರಾಜ ಬುನ್ನಟ್ಟಿ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.