ಸಾಮೂಹಿಕ ಅತ್ಯಾಚಾರ ಖಂಡಿಸಿ ಪ್ರತಿಭಟನೆ
Team Udayavani, Jul 6, 2019, 12:01 PM IST
ಯಲಬುರ್ಗಾ: ಎಸ್‌ಎಫ್‌ಐ ತಾಲೂಕು ಸಮಿತಿ ಪದಾಧಿಕಾರಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಯಲಬುರ್ಗಾ: ಪುತ್ತೂರಿನ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಹಾಗೂ ಅಮಲು ಪದಾರ್ಥ ಸಾಗಾಟ ತಡೆಗಟ್ಟಲು ಆಗ್ರಹಿಸಿ ಎಸ್‌ಎಫ್‌ಐ ತಾಲೂಕು ಸಮಿತಿ ಪದಾಧಿಕಾರಿಗಳು ಹಾಗೂ ಸರಕಾರಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಸರ್ಕಾರಿ ಪಪೂ ಕಾಲೇಜು ಮೈದಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕಿತ್ತೂರ ರಾಣಿ ಚನ್ನಮ್ಮ ವೃತ್ತದ ಮೂಲಕ ವಿವಿಧ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್‌ಗೆ ತೆರಳಿ ಬಳಿಕ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ ಎಸ್‌ಎಫ್‌ಐ ತಾಲೂಕಾಧ್ಯಕ್ಷ ಎಂ. ಸಿದ್ದಪ್ಪ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವತಿಯನ್ನು ವಾಹನದಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿರುವ ಕೃತ್ಯ ಅಮಾನವೀಯ, ಅತ್ಯಾಚಾರಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕು. ಗಾಂಜಾ ಸೇವನೆಯಿಂದಾಗಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚೆಗೆ ದೇರಳಕಟ್ಟೆಯಲ್ಲಿ ನಡೆದ ಕೊಲೆ ಯತ್ನದಲ್ಲೂ ಅಪರಾಧಿ ಅಮಲು ಪದಾರ್ಥ ಸೇವನೆ ಮಾಡಿ ಪೈಶಾಚಿಕ ಕೃತ್ಯ ನಡೆಸಿದ್ದಾನೆ. ಇನ್ನೂ ಪುತ್ತೂರಿನಲ್ಲಿ ನಡೆದ ಘಟನೆಯಲ್ಲೂ ಅತ್ಯಾಚಾರಿಗಳು ಅಮಲು ಪದಾರ್ಥ ಸೇವನೆ ಮಾಡಿ ಸಮಾಜ ತಲೆತಗ್ಗಿಸುವಂತಹ ಕೃತ್ಯ ಎಸಗಿದ್ದಾರೆ. ಇತ್ತೀಚೆಗೆ ಬೆಳ್ತಂಗಡಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಾದರೆ ಕೂಡಲೇ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತ್ತಿವೆ ಎಂದು ಒತ್ತಾಯಿಸಿದರು.
ಪ್ರಶಾಂತ ಬಾಗಲಕೋಟಿ ಮಾತನಾಡಿ, ಯಾವುದೇ ಶಕ್ತಿಗಳ ಒತ್ತಡಕ್ಕೆ ಒಳಗಾಗದೇ ಅತ್ಯಾಚಾರವನ್ನು ಎಸಗಿದ ಆರೋಪಿಗಳಿಗೆ ಶೀಘ್ರ ಶಿಕ್ಷೆ ನೀಡಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಬೇಕು ಮತ್ತು ಅಮಲು ಪದಾರ್ಥಗಳ ಸಾಗಾಟವನ್ನು ತಡೆಗಟ್ಟಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ತಹಶೀಲ್ದಾರ್ ರಮೇಶ ಅಳವಂಡಿಕರ್ ಪ್ರತಿಭಟನಾ ನಿರತ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ವಿದ್ಯಾರ್ಥಿಗಳಾದ ಬಾಲರಾಜ, ಅಶೋಕ, ಮಲ್ಲಿಕಾರ್ಜುನ, ಶ್ರೀದೇವಿ, ಉಮಾದೇವಿ ಬಿಸಿರೊಟ್ಟಿ, ಕಸ್ತೂರಿ ಮಾಜಿಗೌಡ್ರ, ಭೀಮವ್ವ ಹಳ್ಳಿ, ಗವಿಸಿದ್ದಯ್ಯ, ಜಗದೀಶ, ಹನುಮೇಶ, ಹುಚ್ಚಿರಪ್ಪ, ಕರಿಬಸಪ್ಪ, ಕುಬೇರ, ಮರೇಗೌಡ್ರ, ಮುತ್ತಣ್ಣ, ನಾಗರಾಜ, ರಮೇಶ, ಪರಶುರಾಮ, ಯಲ್ಲಪ್ಪ, ಮಂಜುನಾಥ, ಸಂತೋಷ, ಮುತ್ತಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.