ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Aug 5, 2019, 10:32 AM IST
ಕುಷ್ಟಗಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರಾಂತ ರೈತ ಸಂಘದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಕುಷ್ಟಗಿ: ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚ ಶೇ. 50ರಷ್ಟು ಲಾಭವನ್ನು ಸೇರಿಸಿ ಕನಿಷ್ಟ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸುವ ಕಾನೂನು ಜಾರಿಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಗ್ರೇಡ್-2 ತಹಶೀಲ್ದಾರ್ ವಿಜಯಾ ಅವರಿಗೆ ಮನವಿ ಸಲ್ಲಿಸಲಾಯಿತು.
ಇಲ್ಲಿನ ಕಾರ್ಗಿಲ್ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಜಮಾಯಿಸಿ ಕೇಂದ್ರ ಸರ್ಕಾರ ರೈತರ ನೆರವಿಗೆ ಮುಂದಾಗಬೇಕೆಂದು ಮನವಿ ಸಲ್ಲಿಸಿತು.
ಈ ವೇಳೆ ಜಿಲ್ಲಾ ಸಮಿತಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ ಬಿಜಕಲ್ ಮಾತನಾಡಿ, ಎಲ್ಲ ರೈತರು, ಕೃಷಿ ಕೂಲಿಕಾರರಿಗೆ ಅಗತ್ಯವಿರುವ ಸಾಲ ನೀಡಿಕೆ, ಸಾಲ ಮನ್ನಾ ಇತ್ಯಾದಿ ಅಂಶಗಳಿಗೆ ಸಂಬಂಧಿಸಿದಂತೆ ಋಣಮುಕ್ತ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ತಾಲೂಕು ಸಮಿತಿ ಅಧ್ಯಕ್ಷ ಗವಿಸಿದ್ದಪ್ಪ ಗಡಾದ್ ಮಾತನಾಡಿ, ರೈತರು ಹಾಗೂ ಕಾರ್ಮಿಕರು 2019ರವರೆಗೆ ಪಡೆದ ಸಾಲವನ್ನು ಮನ್ನಾ ಮಾಡಬೇಕೆಂದು ಒತ್ತಾಯಿಸಿದರು. ರಾಮಣ್ಣ ಕಂದಕೂರು, ಬಸವರಾಜ ಬೆಳಗಲ್ಲ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.