ಸಂತೋಷ ಕುಟುಂಬಕ್ಕೆ ನ್ಯಾಯ ಒದಗಿಸಿ

ಸಚಿವ ಈಶ್ವರಪ್ಪ  ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Team Udayavani, Apr 15, 2022, 2:40 PM IST

13

ಯಲಬುರ್ಗಾ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಶ್ವರಪ್ಪ ಅವರ ಬಂಧನ ಹಾಗೂ ಸಂತೋಷ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಯಿತು.

ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಸಚಿವ ಬಸವರಾಜ ರಾಯರಡ್ಡಿ ಮಾತನಾಡಿ, ಶೇ. 40 ಕಮೀಷನ್‌ ದಂಧೆಯಿಂದ ನೊಂದು ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆರೋಪಿ ಸಚಿವರನ್ನು ಸರ್ಕಾರ ರಕ್ಷಿಸುತ್ತಿದೆ. ಸಂತೋಷ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಕಾಂಗ್ರೆಸ್‌ ಹೋರಾಟ ನಿಲ್ಲದು. ಆತ್ಮಹತ್ಯೆಗೆ ಸಚಿವ ಕೆ.ಎಸ್‌. ಈಶ್ವರಪ್ಪ ಕಾರಣರಾಗಿದ್ದು, ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಈ ಹಿಂದೆ ರಾಜ್ಯದ ಗುತ್ತಿಗೆದಾರರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಅದಕ್ಕೆ ಪ್ರಧಾನಿ ಸ್ಪಂದಿಸಲಿಲ್ಲ, ಈ ಕುರಿತು ಮುಖ್ಯಮಂತ್ರಿ ಮೌನ ವಹಿಸಿರುವುದು ದುರಂತವೇ ಸರಿಯಾಗಿದೆ. ಬಿಜೆಪಿ ಸರಕಾರ ಸಂವಿಧಾನಕ್ಕೆ ಅಪಚಾರ ಮಾಡುವ ಕಾರ್ಯ ಮಾಡುತ್ತಿದೆ. ಅನೈತಿಕ ರಾಜಕಾರಣ ಮಾಡಲು ಮುಂದಾಗಿದೆ. ಹಿಂದು-ಮುಸ್ಲಿಂರ ಮಧ್ಯೆ ಜಗಳ ಹಚ್ಚಿ ಕೋಮುಭಾವನೆ ಸೃಷ್ಟಿಗೆ ಮುಂದಾಗಿದೆ. ಜನತೆ ಸರಕಾರದ ವಿರುದ್ಧ ಧ್ವನಿ ಎತ್ತಬೇಕು. ಗುತ್ತಿಗೆದಾರ ಸಂತೋಷ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡಬೇಕು, ಬಾಕಿ ಬಿಲ್‌ ಪಾವತಿಸಲು ಮುಂದಾಗಬೇಕು. ಬಿಜೆಪಿ ಸರಕಾರ ಉದ್ಯಮಿಗಳ ಸರಕಾರವಾಗಿದೆ. ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಹೊಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಹಶೀಲ್ದಾರ್‌ ಶ್ರೀಶೈಲ ತಳವಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಹನುಮಂತಗೌಡ ಚೆಂಡೂರು, ಮುಖಂಡರಾದ ರಾಮಣ್ಣ ಸಾಲಭಾವಿ, ಮಂಜುನಾಥ ಕಡೇಮನಿ, ರೇವಣೆಪ್ಪ ಸಂಗಟಿ, ಎಂ.ಎಫ್‌. ನದಾಫ್‌, ರೇವಣೆಪ್ಪ ಹಿರೇಕುರಬರ, ಶರಣಪ್ಪ ಉಪ್ಪಾರ, ಈರಣ್ಣ ಹಳ್ಳಿಕೇರಿ, ಡಾ| ಶಿವನಗೌಡ ದಾನರಡ್ಡಿ, ಈಶ್ವರ ಅಟಮಾಳಗಿ, ಹನುಮಂತಪ್ಪ ಹನುಮಾಪುರ, ಹಂಪಯ್ಯಸ್ವಾಮಿ, ಶಂಕರಗೌಡ ಪಾಟೀಲ, ಬಾಳಪ್ಪ ಬಂಡ್ಲಿ, ಆನಂದ ಉಳ್ಳಾಗಡ್ಡಿ, ಹುಲಗಪ್ಪ ಬಂಡಿವಡ್ಡರ, ಮಹೇಶ ಗಾವರಾಳ, ರಾಜು ಹಡಪದ, ಸಾವಿತ್ರಿ ಗೊಲ್ಲರ, ಗಿರಿಜಾ ಸಂಗಟಿ, ಡಾ| ನಂದಿತಾ ದಾನರಡ್ಡಿ, ಪುನೀತ ಕೊಪ್ಪಳ ಇದ್ದರು

ಟಾಪ್ ನ್ಯೂಸ್

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

BUS driver

Mangaluru; ಸದ್ಯ ಖಾಸಗಿ ಬಸ್‌ ಟಿಕೆಟ್‌ ದರ ಏರಿಕೆ ಇಲ್ಲ

court

Kasaragod:ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ

UTK

Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.