ತಂಬಾಕು ದುಷ್ಪರಿಣಾಮ ಜಾಗೃತಿ ಮೂಡಿಸಿ
Team Udayavani, Nov 2, 2019, 12:14 PM IST
ಕೊಪ್ಪಳ: ತಂಬಾಕಿನಿಂದಾಗುವ ದುಷ್ಪರಿಣಾಮಗಳ ಕುರಿತು ಅಧಿಕಾರಿಗಳು ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಎಡಿಸಿ ಎಂ.ಪಿ. ಮಾರುತಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ಮಾತನಾಡಿದರು. ಶಾಲಾ, ಕಾಲೇಜುಗಳ ಆವರಣ, ಆಸ್ಪತ್ರೆ, ರೈಲು ನಿಲ್ದಾಣ, ಬಸ್ ನಿಲ್ದಾಣ, ಜಿಲ್ಲಾಡಳಿತ ಭವನ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡುವುದು ಅಪರಾಧ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ಉತ್ಪನ್ನಗಳಿಂದ ದೂರ ಇರುವುದರಿಂದ ತಮ್ಮ ಆರೋಗ್ಯವನ್ನು ಸ್ವಸ್ಥವಾಗಿ ಇಟ್ಟುಕೊಳ್ಳಬಹುದು. ತಂಬಾಕು ತ್ಯಜಿಸುವುದರಿಂದ ತಂಬಾಕು ಸೇವನೆಯಿಂದಾಗುವ ರೋಗಗಳನ್ನು ಸುಲಭವಾಗಿ ತಡೆಗಟ್ಟಬಹುದು ಎಂದರು.
ತಂಬಾಕು ಸೇವನೆಯಿಂದ ಪ್ರತಿದಿನ 2500 ಭಾರತೀಯರು ಸಾವಿಗೀಡಾಗುತ್ತಿದ್ದು, ವಿಶ್ವದಲ್ಲಿ ಹತ್ತರಲ್ಲಿ ಒಂದು ಸಾವು ತಂಬಾಕು ಸೇವನೆಯಿಂದಲೇ ಉಂಟಾಗುತ್ತಿದೆ. ತಂಬಾಕು ಸೇವನೆ ಮಾಡುವುದರಿಂದ ಪುರುಷರಲ್ಲಿ ಲೈಂಗಿಕ ಅಶಕ್ತತೆ ಕಂಡುಬರುತ್ತದೆ. ಮಹಿಳೆಯರಲ್ಲಿ ಗರ್ಭಪಾತ, ಕಡಿಮೆ ತೂಕದ ಮಕ್ಕಳ ಜನನ, ಮಗುವಿನಲ್ಲಿ ಮಾನಸಿಕ ವೈಫಲ್ಯಗಳು, ಕಿವಿಯ ಸೋಂಕು, ಕೆಮ್ಮು ಮತ್ತು ಉಬ್ಬಸ ಸಮಸ್ಯೆಗಳಿಂದ ಬಳಲುವ ಸಾಧ್ಯತೆಗಳಿರುತ್ತವೆ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿ ಸಲಾಗಿದ್ದು, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನೂರು ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ವಹಿಸಬೇಕು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಕೂಡ ಶಿಕ್ಷಾರ್ಹ ಅಪರಾಧ ಎಂದರು. ಡಾ| ಜಂಬಯ್ಯ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಶಿಕ್ಷಣ ಇಲಾಖೆ ಸಿಬ್ಬಂದಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.