ಎಲ್ಲೆಡೆ ರಂಜಾನ್ ಸರಳ ಆಚರಣೆ
Team Udayavani, May 26, 2020, 7:08 AM IST
ಕೊಪ್ಪಳ: ಪ್ರತಿವರ್ಷ ಜಿಲ್ಲಾದ್ಯಂತ ಮುಸ್ಲಿಂ ಸಮಾಜದವರು ಪವಿತ್ರ ರಂಜಾನ್ ಹಬ್ಬವನ್ನು ಸರಳವಾಗಿ ಮನೆಯಲ್ಲೇ ಆಚರಣೆ ಮಾಡಿದರು.
ಹೀಗಾಗಿ ಈದ್ಗಾ ಮೈದಾನಗಳೆಲ್ಲವೂ ಭಣಗುಡುತ್ತಿದ್ದವು. ರಂಜಾನ್ ಮಾಸದಲ್ಲಿ ಉಪವಾಸ ವ್ರತ ಆಚರಣೆ ಮಾಡಿ ತಮ್ಮ ಕೈಲಾದಷ್ಟು ದಾನ-ಧರ್ಮ ಮಾಡಿ ಮನೆಯಲ್ಲಿ ಎಲ್ಲರೂ ಹೊಸಬಟ್ಟೆ ಧರಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರತಿವರ್ಷವೂ ಹಬ್ಬದ ಸಡಗರ ಜೋರಾಗಿರುತ್ತದೆ. ಆದರೆ ಈ ಬಾರಿ ಕೋವಿಡ್ ಮಹಾಮಾರಿ ಎಲ್ಲ ಕ್ಷೇತ್ರಗಳ ಮೇಲೂ ತನ್ನ ಕರಿನೆರಳು ಚಾಚಿದೆ.
ಹೀಗಾಗಿ ಸರ್ಕಾರವೇ ರಂಜಾನ್ ಹಬ್ಬವನ್ನು ಮನೆಯಲ್ಲಿಯೇ ಸರಳವಾಗಿ ಆಚರಣೆ ಮಾಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ರಂಜಾನ್ ಅತ್ಯಂತ ಸರಳವಾಗಿ ಆಚರಣೆ ಮಾಡಲಾಯಿತು. ಪ್ರತಿವರ್ಷವೂ ಈದ್ಗಾ ಮೈದಾನಗಳು ಹಬ್ಬದ ಪ್ರಾರ್ಥನೆ ವೇಳೆ ಗಿಜುಗುಡುತ್ತಿದ್ದವು. ಹಬ್ಬದ ಶುಭಾಶಯ ಕೋರುತ್ತಿದ್ದರು. ಈ ಬಾರಿ ಈದ್ಗಾ ಮೈದಾನಗಳನ್ನು ಬಂದ್ ಮಾಡಲಾಗಿತ್ತು. ಪೊಲೀಸರು ಯಾವುದೇ ಮೈದಾನದಲ್ಲಿ ಸಾಮೂಹಿಕ ಸೇರದಂತೆ ಬ್ಯಾನರ್ ಅಳವಡಿಸಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡುವಂತೆ ಮನವಿ ಮಾಡಿದ್ದರು. ಎಲ್ಲೆಡೆಯೂ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.