ಸಿಎಂಗೆ ಭತ್ತದ ಬೆಳೆ ನಷ್ಟದ ವರದಿ ಸಲ್ಲಿಕೆ: ಶೀಘ್ರದಲ್ಲೇ ರೈತರ ಖಾತೆಗೆ ಪರಿಹಾರದ ಹಣ ಜಮಾ
Team Udayavani, Apr 13, 2020, 11:48 AM IST
ಗಂಗಾವತಿ: ಭತ್ತದ ಬೆಳೆ ಕಳೆದುಕೊಂಡು ನಷ್ಟದಲ್ಲಿರುವ ರೈತರಿಗೆ ಶೀಘ್ರವೇ ಪರಿಹಾರ ಕೊಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಭೇಟಿಯಾದ ಕೊಪ್ಪಳ ಜಿಲ್ಲಾದ ನಿಯೋಗಕ್ಕೆ ಭರವಸೆ ನೀಡಿ ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ ನಂತರ ಬಿಎಸ್ ವೈ ಹೇಳಿದರು.
ಕಳೆದ ಮಂಗಳವಾರ ಅಕಾಲಿಕ ಆಲಿಕಲ್ಲು ಮಳೆ ಗಾಳಿಗೆ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕಿನಲ್ಲಿ ಬೆಳೆದು ಕಟಾವಿಗೆ ಬಂದಿದ್ದ ಸುಮಾರು 75 ಸಾವಿರ ಎಕರೆ ಪ್ರದೇಶದಲ್ಲಿದ್ದ ಭತ್ತ ಬೆಳೆ ನಷ್ಟವಾಗಿದ್ದು ಕಂದಾಯ ಮತ್ತು ಕೃಷಿ ಇಲಾಖೆಯಿಂದ ಸರ್ವೆ ನಡೆಸಿ ಸಿದ್ದಪಡಿಸಿದ ವರದಿಯನ್ನು ಸೋಮವಾರ ಬೆಳ್ಳಿಗ್ಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಕೃಷಿ ಸಚಿವ ಬಿ ಸಿ ಪಾಟೀಲ್ ನೇತೃತ್ವದಲ್ಲಿ ನಿಯೋಗವು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಮನವಿಯನ್ನು ಸಲ್ಲಿಸಲಾಯಿತು.
ನಿಯೋಗದಲ್ಲಿ ಸಂಸದ ಕರಡಿ ಸಂಗಣ್ಣ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೇಸೂಗೂರು,ಹಾಲಪ್ಪ ಆಚಾರ್ ಮಾಜಿ ಶಾಸಕ ಜಿ.ವೀರಪ್ಪ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹಣಮನಗೌಡ ಬೆಳಗುರ್ಕಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.