ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ
Team Udayavani, Feb 3, 2020, 3:57 PM IST
ಯಲಬುರ್ಗಾ: ಪಟ್ಟಣದಿಂದ ನರೇಗಲ್‌ಗೆ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಂಘಟನೆ ಪದಾಧಿ ಕಾರಿಗಳು ಪಟ್ಟಣದ ಡಿಪೋದಲ್ಲಿ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಅವರಿಗೆ ಮನವಿ ಸಲ್ಲಿಸಿದರು.
ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಂಘಟನೆ ಉತ್ತರ ಕರ್ನಾಟಕ ಅಧ್ಯಕ್ಷ ಭಾವಾಖಾನ್ ಮಾತನಾಡಿ. ಮುಧೋಳ, ಕರಮುಡಿ, ಬಂಡಿಹಾಳ, ತೊಂಡಿಹಾಳ ಸೇರಿದಂತೆ ಇನ್ನಿತರ ಗ್ರಾಮಗಳ ವಿದ್ಯಾರ್ಥಿಗಳು, ಪ್ರಯಾಣಿಕರು ನರೇಗಲ್ ಪಟ್ಟಣಕ್ಕೆ ಹೋಗಲು ಬಸ್ ಸಂಚಾರವಿಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ. ವಿದ್ಯಾಭ್ಯಾಸ ಸೇರಿದಂತೆ ವ್ಯಾಪಾರ ವಹಿವಾಟಿಗೆ ಜನತೆ ಯಲಬುರ್ಗಾ ಹಾಗೂ ನರೇಗಲ್ ಪಟ್ಟಣವನ್ನು ಅವಲಂಬಿಸಿದ್ದಾರೆ. ಆದರಿಂದ ಬೆಳಗ್ಗೆ ಮತ್ತು ಸಂಜೆ 5ಕ್ಕೆ ಎರಡು ವೇಳೆಯಲ್ಲಿ ಬಸ್ ಸೌಕರ್ಯ ಕಲ್ಪಿಸಿಕೊಡಬೇಕು. ಶೀಘ್ರದಲ್ಲಿ ಬಸ್ ಸೌಕರ್ಯ ಕಲ್ಪಿಸಲು ಮುಂದಾಗಬೇಕು. ಇಲ್ಲದೇ ಇದ್ದರೆ ಬಸ್ ಡಿಪೋ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಹಿಂದೆ ಹಲವಾರು ಭಾರಿ ಮನವಿ ಮಾಡಿದರೂ ಪ್ರಯೋಜನೆ ಇಲ್ಲದಂತಾಗಿದೆ. ಬಸ್ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು. ನರೇಗಲ್ಲ-ಯಲಬುರ್ಗಾ ಮಾರ್ಗ ಮಧ್ಯ ಬರುವ ಗ್ರಾಮಗಳ ಪೈಕಿ ನಿತ್ಯ ಸಾವಿರಾರು ಜನತೆ ಪ್ರಯಾಣ ಮಾಡುತ್ತಿದ್ದಾರೆ. ಆದ್ದರಿಂದ ಶೀಘ್ರದಲ್ಲಿ ಬಸ್ ಸೌಕರ್ಯ ಕಲ್ಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಮನವಿ ಪತ್ರ ಸ್ವೀಕರಿಸಿ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಮಾತನಾಡಿ, ಶೀಘ್ರದಲ್ಲಿ ಪರಿಶೀಲನೆ ನಡೆಸಿ ಬಸ್ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಕೊಪ್ಪಳ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಕಟ್ಟಿಮನಿ, ಜಿಲ್ಲಾ ಕಾರ್ಯದರ್ಶಿ ಪ್ರೇಮಾ ನಾಯಕನೂರು, ಪರಸಪ್ಪ ಪಂಚಮ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.