ಒತ್ತುವರಿ ತೆರವಿಗೆ ಆಗ್ರಹ
Team Udayavani, Dec 12, 2019, 3:34 PM IST
ಗಂಗಾವತಿ: ನಗರದ ಮಹಾತ್ಮ ಗಾಂಧಿ ವೃತ್ತ ಸೇರಿ ಪ್ರಮುಖ ವೃತ್ತಗಳಲ್ಲಿ ನಗರಸಭೆಯ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಕರವೇ (ಪ್ರವೀಣ ಶೆಟ್ಟಿ) ಬಣದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಮೃತ್ ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ ಫುಟ್‌ಪಾತ್ ಜಾಗೆ ಒತ್ತುವರಿ ಮಾಡಿ ಅಂಗಡಿ ಸಾಮಾನು ಇರಿಸಲಾಗುತ್ತಿದೆ. ಕೇಂದ್ರ ಬಸ್ ನಿಲ್ದಾಣದ ಎದುರಿಗಿದ್ದ ಬಡ ಮತ್ತು ಸಣ್ಣ ವ್ಯಾಪಾರಿಗಳನ್ನು ಒಕ್ಕಲೆಬಿಸಲಾಗುತ್ತಿದೆ. ಆಟೋಚಾಲಕರಿಗೆ ಆಟೋ ನಿಲ್ಲಿಸಲು ಜಾಗ ಕೊಡುತ್ತಿಲ್ಲ. ನಗರದಲ್ಲಿ ಅಮೃತ ಸಿಟಿ ಯೋಜನೆಯಲ್ಲಿ ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದ್ದು ಕಾಮಗಾರಿ ಕಳಪೆಯಾಗಿವೆ.
ಜಿಲ್ಲಾಡಳಿತದ ನೆಪ ಹೇಳಿ ನಗರಸಭೆ ಫುಟ್‌ಪಾತ್ ವ್ಯಾಪಾರಿಗಳಿಗೆ ಜಾಗೆ ಖಾಲಿ ಮಾಡಿಸಿ ತೊಂದರೆ ನೀಡಲಾಗುತ್ತಿದೆ. ಸಿಬಿಎಸ್ ವೃತ್ತದಿಂದ ಗಾಂಧಿ ಸರ್ಕಲ್‌ವರೆಗೆ ಫುಟ್‌ಪಾತ್ ನಿರ್ಮಾಣಗೊಂಡಿದ್ದು, ಈ ಫುಟ್ ಪಾತ್ ಯಾವುದೇ ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ನಿರ್ಮಿಸಿಲ್ಲ. ಶ್ರೀಮಂತರ ಮಳಿಗೆಗಳ ಮೆಟ್ಟಿಲುಗಳಿಗಾಗಿ ನಿರ್ಮಾಣವಾಗಿದೆ. ರಸ್ತೆ ಅಗಲೀಕರಣ ವಿಷಯದಲ್ಲಿ ನಗರಸಭೆ ತಾರತಮ್ಯ ನೀತಿ ಅನುಸರಿಸಿರುವುದು ಕಂಡುಬಂದಿದೆ. ಕಳಪೆ ಕಾಮಗಾರಿ ಕೂಡಲೇ ನಿಲ್ಲಿಸಬೇಕು. ಆಟೋದವರಿಗೆ ನಿಲ್ದಾಣದ ವ್ಯವಸ್ಥೆ ಮಾಡಬೇಕು. ಗೂಡಂಗಡಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಪಂಪಣ್ಣ ನಾಯಕ, ಹುಸೇನಸಾಬ್, ಮಹೇಂದ್ರ, ಶಂಕರ ಪೂಜಾರಿ, ಹುಲುಗಪ್ಪ ಹಸೇನಸಾಬ್, ಸಿದ್ದು ನಾಯಕ, ಅಫ್ಜಲ್, ಕೃಷ್ಣ, ಪರಶುರಾಮ, ಅಂಜಿ ಪೂಜಾರಿ ಸೇರಿ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.