ಆರ್‌ಟಿಒ ಕಚೇರಿ ನಿವೇಶನ ಮಂಜೂರಿಗೆ ಮನವಿ
Team Udayavani, Sep 9, 2019, 11:20 AM IST
ಕೊಪ್ಪಳ: ಆರ್‌ಟಿಒ ಕಚೇರಿಗೆ ಸ್ವಂತ ನಿವೇಶನ, ಕಟ್ಟಡಕ್ಕೆ ಅನುದಾನ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಮುಖಂಡ ಅಮರೇಶ ಕರಡಿ ಅವರು ಡಿಸಿಎಂ ಲಕ್ಷ ್ಮಣ ಸವದಿ ಅವರಿಗೆ ಮನವಿ ಸಲ್ಲಿಸಿದರು.
ಕೊಪ್ಪಳ: ಕೊಪ್ಪಳ ಜಿಲ್ಲೆಯಾಗಿ 20 ವರ್ಷ ಕಳೆದರೂ ಆರ್‌ಟಿಒ ಕಚೇರಿಗೆ ಸ್ವಂತ ನಿವೇಶನ, ಕಟ್ಟಡವಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಡ್ರೈವಿಂಗ್ ಟ್ರ್ಯಾಕ್ ಹಾಗೂ ಆರ್‌ಟಿಒ ಕಚೇರಿ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಬೇಕೆಂದು ಒತ್ತಾಯಿಸಿ ವಿಧಾನಸಭಾ ಕ್ಷೇತ್ರದ ಬೂತ್ ಸಮಿತಿ ಸಂಚಾಲಕ ಅಮರೇಶ ಕರಡಿ ಅವರು ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಿದ ಅವರು, ಕೊಪ್ಪಳ ಜಿಲ್ಲೆಯಲ್ಲಿ ಆರ್‌ಟಿಒ ಕಚೇರಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಸ್ವಂತ ನಿವೇಶನ ನೀಡಿ ಕಟ್ಟಡ ನಿರ್ಮಾಣಕ್ಕೆ ಮುಂದಾಗದಿರುವುದು ಜಿಲ್ಲೆಯ ಜನತೆಯ ದೌರ್ಭಾಗ್ಯ. ಮೊದಲ 10 ವರ್ಷ ಎಪಿಎಂಸಿಯ ಹಳೆ ಕಟ್ಟಡದಲ್ಲಿ ಈ ಕಚೇರಿ ಕಾರ್ಯ ನಿರ್ವಹಿಸಿದರೆ ನಂತರದಲ್ಲಿ ನಗರದ ಹೊರ ವಲಯದ ಬಾಡಿಗೆ ಜಾಗೆಯಲ್ಲಿ ಕೆಲಸ ನಿರ್ವಹಿಸುತ್ತಿದೆ. ಇದರಿಂದಾಗಿ ಕೊಪ್ಪಳ ಜನತೆಗೆ ತೀವ್ರ ತೊಂದರೆಯಾಗುತ್ತಿದೆ. ಬಾಡಿಗೆ ಕಟ್ಟಡ ಇರುವ ಕಾರಣ ಸರ್ಕಾರದ ಹಣ ಸುಖಾ ಸುಮ್ಮನೆ ಪೋಲಾಗುತ್ತಿದೆ. ಅಲ್ಲದೇ ಇಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ. ತಗಡಿನ ಶೆಡ್‌ನಲ್ಲಿ ಕಚೇರಿ ನಡೆಯುತ್ತಿದೆ. ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೆ ಸಿಬ್ಬಂದಿ ಬಿಸಿಲಿನ ಪ್ರಖರಕ್ಕೆ ತೀವ್ರ ಬಳಲುತ್ತಾರೆ. ಇದನ್ನೆಲ್ಲ ಸರಿಪಡಿಸಲು ಕೂಡಲೇ ಆರ್‌ಟಿಒಗೆ ಸ್ವಂತ ನಿವೇಶನ ನೀಡಿ, ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಟೆಸ್ಟ್ ಡ್ರೈವಿಂಗ್‌ಗಾಗಿ ಇಲಾಖೆ ನಿಗದಿಪಡಿಸಿದ ಸೂಕ್ತ ಡ್ರೈವಿಂಗ್ ಟ್ರ್ಯಾಕ್ ಇವೆ. ಆದರೆ ಕೊಪ್ಪಳದಲ್ಲಿ ಮಾತ್ರ ಇದು ಸಾಧ್ಯವಾಗಿಲ್ಲ. ಹೊಸದಾಗಿ ಚಾಲನಾ ಪರವಾನಗಿ ಪಡೆಯುವವರು ಹೆದ್ದಾರಿ ಅಥವಾ ನಗರ ಪ್ರದೇಶದಲ್ಲಿ ಗಾಡಿ ಚಲಾಯಿಸಿ ಪರವಾನಗಿ ಪಡೆಯಬೇಕು. ಇದು ಹೆಚ್ಚು ಅಪಾಯಕಾರಿಯಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಡ್ರೈವಿಂಗ್ ಟ್ರ್ಯಾಕ್ ನಿರ್ಮಾಣಕ್ಕಾಗಿ ನಗರದ ಸುತ್ತಮುತ್ತ ಯಾವುದಾದರು ಒಂದು ಕಡೆ ಜಮೀನು ಖರೀದಿಸಿ ಡ್ರೈವಿಂಗ್ ಟ್ರ್ಯಾಕ್ ಹಾಗೂ ಆರ್‌ಟಿಒ ಕಚೇರಿ ನಿರ್ಮಾಣಕ್ಕೆ ಸುಮಾರು 10 ಎಕರೆ ಖರೀದಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು. ನವೀನಕುಮಾರ್ ಗುಳಗಣ್ಣವರ್, ಶರಣು ತಳ್ಳಿಕೇರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.