ರಸ್ತೆ-ಚರಂಡಿ ಪೂರ್ಣಗೊಳಿಸಲು ಆಗ್ರಹ
Team Udayavani, Jun 16, 2020, 3:13 PM IST
ಕುಷ್ಟಗಿ: ಸರ್ವೀಸ್ ರಸ್ತೆ ಅಭಿವೃದ್ಧಿ, ಚರಂಡಿ ಅವೈಜ್ಞಾನಿಕ ಜೋಡಣೆ ಇತ್ಯಾದಿ ಕೆಲಸವನ್ನು ಬಾಕಿ ಉಳಿಸಿಕೊಂಡು ತರಾತುರಿಯಲ್ಲಿ ಹೆದ್ದಾರಿ ಮೇಲ್ಸೇತುವೆ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಸ್ಥಳೀಯ ಮೇಲ್ಸೇತುವೆ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿ, ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಕಪ್ಪು ಪಟ್ಟಿ ಪ್ರದರ್ಶಿಸಿ ಸಾಂಕೇತಿಕ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿರುವುದು ಗೊಂದಲಕ್ಕೆ ಕಾರಣವಾಯಿತು.
ಈ ವಿಷಯ ತಿಳಿಯುತ್ತಿದ್ದಂತೆ ಸಂಸದ ಕರಡಿ ಸಂಗಣ್ಣ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು, ಹಳೆ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ಸಂಘಟನೆಯವರೊಂದಿಗೆ ಚರ್ಚಿಸಿ, ಅಹವಾಲು ಆಲಿಸಿದರು. ಈ ವೇಳೆ ಸಂಘಟನೆಯವರು, ಹೆದ್ದಾರಿ ಮೇಲ್ಸೇತುವೆ ಅಭಿವೃದ್ಧಿ ಜೊತೆಯಲ್ಲಿ ಸರ್ವಿಸ್ ರಸ್ತೆಯನ್ನು ಅಭಿವೃದ್ಧಿಪಡಿಸಬೇಕಿತ್ತು. ಲೋಕಾರ್ಪಣೆ ನಂತರ ಒಎಸ್‌ಇ ಕಂಪನಿಯವರು ಕೇಳುವುದಿಲ್ಲ. 7 ವರ್ಷಗಳ ಹಿಂದೆ ಕಡೇಕೊಪ್ಪ, ವಣಗೇರಾ ಕೆಳಸೇತುವೆ ಸರ್ವಿಸ್ ರಸ್ತೆ ಇನ್ನಷ್ಟು ಹದಗೆಟ್ಟಿದ್ದು, ಜನ ಸಂಚರಿಸದಂತಹ ಪರಿಸ್ಥಿತಿ ಇದೆ. ಹೆದ್ದಾರಿ ಕಡೆ ಗಮನ ಹರಿಸುತ್ತಾರೆಯೇ ವಿನಃ ಸರ್ವೀಸ್ ರಸ್ತೆಯ ಬಗ್ಗೆ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಸಂಸದರು, ಒಎಸ್‌ಇ ಕಂಪನಿ ಯೋಜನಾ ವ್ಯವಸ್ಥಾಪಕ ರಾಮಪ್ಪ ಅವರನ್ನು ತರಾಟೆಗೆ ತೆಗೆದುಕೊಂಡು, ಎರಡು ತಿಂಗಳ ಗಡವು ನಿಡುತ್ತಿದ್ದು, ಬಾಕಿ ಇರುವ ಕೆಲಸ ಪೂರ್ಣಗೊಳಿಸಬೇಕೆಂದು ಸೂಚಿಸಿದರು. ಇದೇ ವೇಳೆ ಮಾಜಿ ಶಾಸಕ ಕೆ. ಶರಣಪ್ಪ, ಸಿಪಿಐ ಚಂದ್ರಶೇಖರ ಜಿ., ಹನುಮಸಾಗರ ಪಿಎಸ್‌ಐ ಅಮರೇಶ ಹುಬ್ಬಳ್ಳಿ ಇದ್ದರು.
“ಪುಂಡಲೀಕಪ್ಪ ಜ್ಞಾನಮೋಠೆ‘ ಹೆಸರು: ಜೂ.16ರಂದು ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಂದ ಲೋಕಾರ್ಪಣೆಗೊಳ್ಳಲಿರುವ ಮೇಲ್ಸೇತುವೆಗೆ ಇಲ್ಲಿನ ಸ್ವಾತಂತ್ರ್ಯ ಸೇನಾನಿ, ಮಾಜಿ ಶಾಸಕ ಪುಂಡಲೀಕಪ್ಪ ಜ್ಞಾನಮೋಠೆ ಅವರ ಹೆಸರನ್ನಿಡಲು ಸಮ್ಮತಿ ವ್ಯಕ್ತವಾಯಿತು. ಹಳೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಮಾಜಿ ಶಾಸಕ ಕೆ.ಶರಣಪ್ಪ ಅವರ ಸಮಕ್ಷಮದಲ್ಲಿ ವಿಷಯ ಪ್ರಸ್ತಾಪಿಸಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು, ಸ್ವಾತಂತ್ರ್ಯ ಹೋರಾಟ ಹಾಗೂ ಹೈದ್ರಾಬಾದ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಸಕ್ರಿಯರಾಗಿದ್ದ ಪುಂಡಲೀಕಪ್ಪ ಜ್ಞಾನಮೋಠೆ ಅವರು, ತಾಲೂಕಿನ ಹೆಮ್ಮೆ ಆಗಿದ್ದಾರೆ. ಎರಡು ಬಾರಿ ಶಾಸಕರಾಗಿ, ಜನಾನುರಾಗಿಯಾಗಿರುವ ಅವರ ಸೇವೆ ಸ್ಮರಣಿನೀಯವಾಗಿ ಉಳಿಯಬೇಕಿದೆ. ಈ ನಿಟ್ಟಿನಲ್ಲಿ ಮೇಲ್ಸೇತುವೆಗೆ ಅವರ ಹೆಸರನ್ನಿಡಬೇಕಿದೆ ಎಂದು ಪ್ರಸ್ತಾಪಿಸಿ, ಅಲ್ಲಿದ್ದ ಸಂಘನೆಕಾರರ ಅಭಿಪ್ರಾಯ ಕೇಳಿದರು. ಆಗ ಕೂಡಲೇ ಸಮ್ಮತಿ ವ್ಯಕ್ತವಾಗಿ ಚಪ್ಪಾಳೆ ಮೂಲಕ ಸ್ವಾಗತಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.