ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಕೊಪ್ಪಳ ರಾಯಚೂರು ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ
Team Udayavani, May 4, 2022, 7:08 PM IST
ಗಂಗಾವತಿ: ಈ ಬಾರಿ ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಭತ್ತವನ್ನು ಖರೀದಿ ಮಾಡಲಾಗುತ್ತಿದ್ದು ಕೊಪ್ಪಳ ರಾಯಚೂರು ಬಳ್ಳಾರಿ ವಿಜಯನಗರ ಜಿಲ್ಲೆಗಳಲ್ಲಿ ಬೆಳೆದ ಭತ್ತದ ಬೆಳೆಗೆ ಸೂಕ್ತ ವೈಜ್ಞಾನಿಕ ಬೆಲೆ ಇಲ್ಲವಾಗಿದೆ ಆದ್ದರಿಂದ ರಾಜ್ಯ ಸರ್ಕಾರದ ವತಿಯಿಂದ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಕೊಪ್ಪಳ ರಾಯಚೂರು ಬಳ್ಳಾರಿ ಹೊಸಪೇಟೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತು .
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಭೇಟಿಯಾದ ನಿಯೋಗ ದ ಕುರಿತು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಉದಯವಾಣಿ ಜತೆ ಮಾತನಾಡಿ ,ಈ ಬಾರಿ ಭತ್ತದ ಬೆಳೆ ಉತ್ತಮ ಇಳುವರಿ ಬಂದಿದ್ದು ಜೊತೆಗೆ ಅನ್ಯ ರಾಜ್ಯಗಳಿಂದ ಭತ್ತ ಕರ್ನಾಟಕ ರಾಜ್ಯಕ್ಕೆ ಆಮದಾಗುತ್ತಿರುವುದರಿಂದ ಇಲ್ಲಿ ಭತ್ತಕ್ಕೆ ಸೂಕ್ತ ಬೆಲೆ ಸಿಗುತ್ತಿಲ್ಲ ಆದ್ದರಿಂದ ರಾಜ್ಯ ಸರ್ಕಾರ ಪಡಿತರ ವ್ಯವಸ್ಥೆ ವಿತರಣೆಗಾಗಿ ರೈತರ ಭತ್ತವನ್ನು ವೈಜ್ಞಾನಿಕ ಬೆಲೆಯಲ್ಲಿ ಖರೀದಿ ಮಾಡಲು ಕೂಡಲೇ ಹೋಬಳಿವಾರು ಭತ್ತ ಖರೀದಿ ಕೇಂದ್ರವನ್ನು ಆರಂಭಿಸುವಂತೆ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿಯವರು ನಿಯೋಗಕ್ಕೆ ಸೂಕ್ತವಾಗಿ ಸ್ಪಂದನೆ ನೀಡಿದ್ದು ಕೂಡಲೇ ಸಂಬಂಧಪಟ್ಟ ಕೃಷಿ,ಆಹಾರ ಮತ್ತು ನಾಗರಿಕ ಸರಬರಾಜು ,ಕೃಷಿ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳ ಜತೆ ಮಾತನಾಡಿ ಕೂಡಲೇ ಭತ್ತ ಖರೀದಿ ಕೇಂದ್ರವನ್ನು ಆರಂಭ ಮಾಡಬೇಕು ವೈಜ್ಞಾನಿಕ ರೀತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರೋತ್ಸಾಹ ಬೆಲೆ ಸೇರಿದಂತೆ ಭತ್ತಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಸೂಚನೆ ನೀಡಿದ್ದು ಶೀಘ್ರವೇ ಸರ್ಕಾರ ರೈತರ ಭತ್ತವನ್ನು ಖರೀದಿ ಮಾಡಲಿದೆ ಎಂದರು.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಚಿವ ಹಾಲಪ್ಪ ಆಚಾರಿ, ಸಂಸದ ಸಂಗಣ್ಣ ಕರಡಿ, ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ , ಶಾಸಕರಾದ ಪರಣ್ಣ ಮುನವಳ್ಳಿ ,ವೆಂಕಟರಾವ್ ನಾಡಗೌಡ ,ಬಸವರಾಜ ದಡೆಸೂಗುರು ,ಕೃಷಿ ಬೆಲೆ ನಿಗದಿ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.