ಜಿಪಂ ಅಧ್ಯಕ್ಷ -ಉಪಾಧ್ಯಕ್ಪರ ರಾಜೀನಾಮೆ?
Team Udayavani, Oct 25, 2018, 5:01 PM IST
ಕೊಪ್ಪಳ: ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ರಾಜೀನಾಮೆ ಪ್ರಹಸನದ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಒಳ ಒಪ್ಪಂದದ ಲೆಕ್ಕಾಚಾರದಂತೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುತ್ತಾರೆ ಎನ್ನಲಾಗುತ್ತಿದ್ದರೂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಮಾತ್ರ ಇದೆಲ್ಲ ಸುಳ್ಳು ಎನ್ನುವ ಮಾತನ್ನಾಡಿದ್ದಾರೆ.
ಹೌದು.. 2016ರಲ್ಲಿ ನಡೆದ ಜಿಪಂ ಪಂಚಾಯಿತಿ ಚುನಾವಣೆ ನಡೆದಿದೆ. ಕಾಂಗ್ರೆಸ್‌ಗೆ ಸ್ಪಷ್ಟ ಬಹುತವಿದೆ. ಆರಂಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಎಸ್.ಬಿ. ನಾಗರಳ್ಳಿ ಅವರು ಒಂದು ವರ್ಷದ ಅವಧಿಗೆ ಅಧ್ಯಕ್ಷ ಸ್ಥಾನದ ದರ್ಬಾರ್ ನಡೆಸಿ ಏಕಾಏಕಿ ಬೆಂಗಳೂರಿಗೆ ತೆರಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದಾದ ಬೆನ್ನಲ್ಲೇ ರಾಜಶೇಖರ ಹಿಟ್ನಾಳ ಅವರನ್ನು ಅಧ್ಯಕ್ಷ ಸ್ಥಾನದ ಪಟ್ಟಕ್ಕೇರಿಸಲಾಗಿತ್ತು. ಆದರೆ ಉಪಾಧ್ಯಕ್ಷರಾಗಿದ್ದ ಲಕ್ಷ್ಮವ್ವ ನೀರಲೂಟಿ ಅವರು ತಮ್ಮ ಸ್ಥಾನದಲ್ಲೇ ಮುಂದುವರಿದಿದ್ದರು. ತಲಾ 30 ತಿಂಗಳು ಸ್ಥಾನ ಹಂಚಿಕೆಯ ಒಳ ಒಪ್ಪಂದ ನಡೆದಿತ್ತು ಎನ್ನಲಾಗಿದೆ.
ಒಳ ಒಪ್ಪಂದವೇನು?: ಜಿಪಂನಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದೆ. ಹೀಗಾಗಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳೆರಡನ್ನೂ ಐದು ವರ್ಷದಲ್ಲಿ ತಲಾ ಎರಡೂವರೆ ವರ್ಷ ಕೊಪ್ಪಳ ಹಾಗೂ ಗಂಗಾವತಿ ತಾಲೂಕಿನ ಜಿಪಂ ಕ್ಷೇತ್ರದ ಸದಸ್ಯರಿಗೆ ಅವಕಾಶ ಮಾಡಿಕೊಡಬೇಕೆಂದು ಒಳ ಒಪ್ಪಂದ ನಡೆದಿತ್ತು ಎನ್ನಲಾಗಿದೆ. ಈ ಹಿಂದೆ ಸಚಿವರಾಗಿದ್ದ ಶಿವರಾಜ ತಂಗಡಗಿ, ಶಾಸಕರಾಗಿದ್ದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರಡ್ಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ ಹಾಗೂ ಅಮರೇಗೌಡ ಬಯ್ನಾಪೂರ ಅವರ ನೇತೃತ್ವದಲ್ಲೇ ಎರಡೂವರೆ ವರ್ಷ ಕೊಪ್ಪಳಕ್ಕೆ ಅಧ್ಯಕ್ಷ ಸ್ಥಾನ, ಗಂಗಾವತಿಗೆ ಉಪಾಧ್ಯಕ್ಷ ಸ್ಥಾನ ಹಂಚಿಕೆ ಮಾಡುವ ಮಾತಾಗಿತ್ತಂತೆ. ಹಾಗಾಗಿ ಜಿಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಗಂಗಾವತಿ ಜಿಪಂ ಸದಸ್ಯರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಬೇಕು ಎನ್ನುವ ಕೂಗು ಕೇಳಿ ಬಂದಿದೆ.
ಒಳ ಒಪ್ಪಂದದ ಪ್ರಕಾರ, ಎರಡೂವರೆ ವರ್ಷದಲ್ಲಿ ಒಂದು ವರ್ಷ ಸದಸ್ಯ ಎಸ್.ಬಿ. ನಾಗರಳ್ಳಿ ಅಧ್ಯಕ್ಷ ಸ್ಥಾನದ ಅಧಿಕಾರ ನಿರ್ವಹಿಸಿದ್ದರು. ಅವರು ರಾಜೀನಾಮೆ ನೀಡಿದ ತರುವಾಯ ರಾಜಶೇಖರ ಹಿಟ್ನಾಳ ಸತತ 15 ತಿಂಗಳು ಅಧ್ಯಕ್ಷರಾಗಿದ್ದಾರೆ. ಉಳಿದ ಅವಧಿಯಲ್ಲಿ ಗಂಗಾವತಿ ಜಿಪಂ ಸದಸ್ಯರಿಗೆ ಅಧ್ಯಕ್ಷ ಸ್ಥಾನದ ಅವಧಿ ಬಿಟ್ಟು ಕೊಡಬೇಕು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಆದರೆ ಅಧ್ಯಕ್ಷ ರಾಜಶೇಖರ ಹಿಟ್ನಾಳ ಇದನ್ನು ಸಂಪೂರ್ಣ ಅಲ್ಲಗಳೆದಿದ್ದಾರೆ. ಒಂದು ವೇಳೆ ರಾಜಕೀಯ ಏರಿಳಿತದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ರಾಜೀನಾಮೆ ಕೊಟ್ಟಿದ್ದೇ ಆದರೆ ಗಂಗಾವತಿ ತಾಲೂಕಿನ ಜಿಪಂ ಸದಸ್ಯ ವಿಶ್ವನಾಥರಡ್ಡಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಉಪಾಧ್ಯಕ್ಷ ಸ್ಥಾನ ಕೊಪ್ಪಳದ ಪಾಲಾಗಲಿದೆ ಎನ್ನವು ಚರ್ಚೆ ಮತ್ತೊಂದು ಕಡೆ ನಡೆದಿದೆ. ಈ ರಾಜೀನಾಮೆ ಪ್ರಹಸನ ಕಳೆದ ಹಲವು ದಿನಗಳಿಂದ ಕೇಳಿ ಬಂದು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ನಾನು ರಾಜೀನಾಮೆ ಕೊಡುತ್ತೇನೆ ಎನ್ನುವುದು ಸುಳ್ಳು. ಸದ್ಯಕ್ಕೆ ನಾನಂತೂ ರಾಜೀನಾಮೆ ಕೊಡುತ್ತಿಲ್ಲ. ಉಪಾಧ್ಯಕ್ಷರು ರಾಜೀನಾಮೆ ಕೊಡುತ್ತಾರೆ ಎನ್ನುವ ಮಾಹಿತಿಯಿತ್ತು. ಅವರು ಈ ವರೆಗೂ ರಾಜೀನಾಮೆ ಕೊಟ್ಟಿಲ್ಲ. ಮುಂದೆ ಲೋಕಸಭೆ ಚುನಾವಣೆಯಿದೆ. ಹಾಗಾಗಿ ಚುನಾವಣೆ ನಡೆದ ಬಳಿಕ ಇವೆಲ್ಲ ನಡೆಯಬಹುದು.
ರಾಜಶೇಖರ ಹಿಟ್ನಾಳ,
ಜಿಪಂ ಅಧ್ಯಕ್ಷ
ದತ್ತು ಕಮ್ಮಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.