ಹೊಸ ಶಿಕ್ಷಣ ನೀತಿ ಹಿಂಪಡೆಯಿರಿ
Team Udayavani, Aug 10, 2020, 12:16 PM IST
ಸಾಂದರ್ಭಿಕ ಚಿತ್ರ
ಕೊಪ್ಪಳ: ರಾಷ್ಟ್ರೀಯ ಶಿಕ್ಷಣ ನೀತಿ-2020 ಕಾರ್ಪೊರೇಟ್ ಪರವಾಗಿದೆ. ಬಡವರ ವಿರೋಧಿ ಹಾಗೂ ತಾರತಮ್ಯ ಧೋರಣೆಯನ್ನು ಹೊಂದಿದೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಎಐಎಸ್‌ಇಸಿ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಒತ್ತಾಯಿಸಿದರು.
ಈ ಕುರಿತು ಪ್ರಕಟಣೆ ನೀಡಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಫ್ಯಾಸೀಸ್‌ವಾದಿ ಕೇಂದ್ರೀಕರಣದ ಗುರಿ ಹೊಂದಿದ್ದು, ದೇಶದ ಪ್ರಜಾತಾಂತ್ರಿಕ, ವೈಜ್ಞಾನಿಕ, ಮತ್ತು ಧರ್ಮ ನಿರಪೇಕ್ಷ ಶಿಕ್ಷಣ ಪದ್ಧತಿಯ ಮೇಲಿನ ದಾಳಿಯಾಗಿದೆ. ನಮ್ಮ ದೇಶದ ಶಿಕ್ಷಣ ತಜ್ಞರ, ವಿಜ್ಞಾನಿಗಳ, ಬುದ್ಧಿಜೀವಿಗಳ, ಶಿಕ್ಷಕರ, ಪೋಷಕರ ಮತ್ತು ವಿದ್ಯಾರ್ಥಿಗಳ ವಿರೋಧ ಹಾಗೂ ಮೌಲ್ಯಯುತ ಅಭಿಪ್ರಾಯಗಳನ್ನು ಕಡೆಗಣಿಸಿ, ಕೇಂದ್ರ ಸರಕಾರವು ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಜಾರಿಗೊಳಿಸಿದೆ. ಇಡೀ ದೇಶವೇ ಕೋವಿಡ್ ಮಹಾಮಾರಿಯ ವಿರುದ್ಧ ಹೋರಾಡುತ್ತಿರಬೇಕಾದರೆ ಸರಕಾರವು ಇದನ್ನು ದುರುಪಯೋಗ ಮಾಡಿಕೊಂಡು ನಾಡಿನ ಜನರೊಂದಿಗೆ ಹಾಗೂ ಸಂಸತ್ತಿನಲ್ಲಿ ಚರ್ಚಿಸದೆ, ಶಿಕ್ಷಣ ವಿರೋಧಿ ನೀತಿ ಜಾರಿಗೊಳಿಸಿರುವುದು ಖಂಡನಾರ್ಹ ಎಂದರು.
ಅತೀವ ಖಾಸಗೀಕರಣ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಶಿಕ್ಷಣದ ವ್ಯಾಪಾರೀಕರಣ. ಬಜೆಟ್‌ನಲ್ಲಿ ಶಿಕ್ಷಣಕ್ಕೆ ಮೀಸಲಿಡುತ್ತಿರುವ ಹಣಕಾಸಿನಲ್ಲಿ ಕುಸಿತ, ಮೂಲ ಸೌಕರ್ಯ ಮತ್ತು ಶಿಕ್ಷಕರ ಕೊರತೆ, ಸರ್ಕಾರಿ ಸಂಸ್ಥೆಗಳಲ್ಲಿ ಹೆಚ್ಚುತ್ತಿರುವ ಶಿಕ್ಷಣದ ವೆಚ್ಚ. ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿ ಸರ್ಕಾರದ ಹಸ್ತಕ್ಷೇಪ, ಅಧಿಕಾರದಲ್ಲಿರುವ ಪಕ್ಷದ ಸಿದ್ಧಾಂತಕ್ಕೆ ಅನುಗುಣವಾಗಿ ಪಠ್ಯಕ್ರಮದಲ್ಲಿ, ಪಠ್ಯಪುಸ್ತಕಗಳಲ್ಲಿ ಮಾರ್ಪಾಡುಗಳು. ಎನ್‌ಇಪಿ ಇದ್ಯಾವುದೇ ಸಮಸ್ಯೆಗಳಿಗೆ ಪರಿಹಾರ ಸೂಚಿಸಿಲ್ಲ. ಬದಲಿಗೆ ಈ ನೀತಿ ಜಾರಿಯಾದರೆ ಎಲ್ಲ ಸಮಸ್ಯೆಗಳು ಮತ್ತಷ್ಟು ಉಲ್ಬಣಗಳ್ಳಲಿವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.