ಉದುರುತ್ತಿದೆ ಮೇಲ್ಛಾವಣಿ ಕಾಂಕ್ರೀಟ್: ಆತಂಕದಲ್ಲಿ ಮಕ್ಕಳು
Team Udayavani, Dec 9, 2019, 3:48 PM IST
ಕನಕಗಿರಿ: ಪಟ್ಟಣದ ಶಾಸಕರ ಮಾದರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮೂಲಭೂತ ಸೌಲಭ್ಯದಿಂದ ವಂಚಿತವಾಗಿದ್ದು, ಮೇಲ್ಛಾವಣಿ ಶಿಥಿಲಗೊಂಡು ಮಕ್ಕಳು ಭಯದ ವಾತವರಣದಲ್ಲೇ ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೂ ಒಟ್ಟು 492 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಒಟ್ಟು 21 ಕೊಠಡಿಗಳಲ್ಲಿ 7 ಕೊಠಡಿಗಳ ಮೇಲ್ಛಾವಣಿ ಕಾಂಕ್ರೀಟ್ ಉದುರಿ ಬೀಳುತ್ತಿದೆ. ಇನ್ನು 4 ಕೊಠಡಿಗಳಿಗೆ ತಗಡುಗಳನ್ನು
ಹಾಕಲಾಗಿದ್ದು, ಮಳೆಗಾಲದಲ್ಲಿ ಸೋರುತ್ತವೆ. ಕೆಲ ಕೊಠಡಿಗಳನ್ನು 1936ರಲ್ಲೇ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳ ಪಾಲಕರು ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ಕೊಠಡಿಗಳ ಸಮಸ್ಯೆಯ ಕುರಿತು ಶಿಕ್ಷಣ ಇಲಾಖೆಯ ಮೇಲಾ ಧಿಕಾರಿಗಳಿಗೆ ಮತ್ತು ಶಾಸಕ ಬಸವರಾಜ ದಢೇಸುಗೂರು ಅವರ ಗಮಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
ಆಟದ ಮೈದಾನ ಸರಿಯಿಲ್ಲ: ಕ್ರೀಡೆಯನ್ನು ಪೋತ್ಸಾಹಿಸಲು ಸರ್ಕಾರ ಸಾವಿರಾರು ಕೋಟಿ ವೆಚ್ಚ ಮಾಡುತ್ತಿದೆ. ಆದರೆ ಇಲ್ಲಿ ಆಟ ಆಡಿಸಲು ಸೂಕ್ತವಾದ ಮೈದಾನವಿಲ್ಲ. ಇರುವ ಶಾಲಾ ಮೈದಾನವೂ ತಗ್ಗು–ದಿನ್ನೆಗಳಿಂದ ಕೊಡಿದೆ. ಮಳೆಗಾಲದಲ್ಲಿ ಶಾಲಾ ಆವರಣದಲ್ಲಿ ನೀರು ನಿಲ್ಲುತ್ತದೆ. ಸೂಳ್ಳೆಗಳ ಕಾಟ ಹೆಚ್ಚಾಗಿದ್ದು,
ಮೈದಾನವನ್ನು ದುರಸ್ತಿಗೊಳಿಸುವಂತೆ ಪಪಂ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಶಿಕ್ಷಕರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ಅನುದಾನ ನೀಡುತ್ತಿವೆ. ಆದರೆ ಶಾಲೆಗಳ ಅಭಿವೃದ್ಧಿಯಾಗಿಲ್ಲ. ಸರಿಯಾದ ಶೌಚಾಲಯ, ಕುಡಿಯುವ ನೀರು, ಕಟ್ಟಡ, ಶಿಕ್ಷಕರನ್ನುನೀಡುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಇನ್ನಾದರೂ ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಳೆ ಕಟ್ಟಡಗಳ ಮೇಲ್ಛಾವಣಿಯನ್ನು ದುರಸ್ತಿಗೊಳಿಸಲು ಮುಂದಾಗಬೇಕಾಗಿದೆ.
-ಶರಣಪ್ಪ ಗೋಡಿನಾಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.