Gangavathiಅಕಾಲಿಕ ಮಳೆಗಾಳಿಗೆ 61 ಕೋ.ರೂ.ಮೌಲ್ಯದ ಭತ್ತದ ಬೆಳೆ ನಷ್ಟ ಶೀಘ್ರ ಪರಿಹಾರ: ತಂಗಡಗಿ
ಗಂಗಾವತಿ ತಾಲೂಕಿನಲ್ಲಿ 1200 ಹೆಕ್ಟೇರ್ ನಷ್ಟ
Team Udayavani, Nov 11, 2023, 7:11 PM IST
ಗಂಗಾವತಿ: ಇತ್ತೀಚೆಗೆ ಸುರಿದ ಅಕಾಲಿಕ ಮಳೆ ಗಾಳಿ ಪರಿಣಾಮ ತಾಲೂಕಿನ ವಿವಿಧ ಹೋಬಳಿಗಳಲ್ಲಿ ಅಂದಾಜು 61 ಕೋಟಿ.ರೂ.ಮೌಲ್ಯದ ಭತ್ತದ ಬೆಳೆ ನಷ್ಟವಾಗಿದ್ದು ಸರಕಾರ ಸರ್ವೇ ನಡೆಸಿ ವೈಜ್ಞಾನಿಕ ರೀತಿಯಲ್ಲಿ ಪರಿಹಾರದ ವಿತರಣೆ ಮಾಡಲಾಗುತ್ತದೆ.ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಕನ್ನಡ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ ಹೇಳಿದರು.
ಅವರು ತಾಲೂಕಿನ ಮರಳಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮಳೆಯಿಂದ ನೆಲಕ್ಕೆ ಬಿದ್ದಿರುವ ಭತ್ತದ ಬೆಳೆಯನ್ನು ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಒಂದೇ ಬಳೆಯ ಮಧ್ಯೆ ಪ್ರಕೃತಿ ವಿಕೋಪದ ಪರಿಣಾಮವಾಗಿ ಅಕಾಲಿಕ ಮಳೆಯಿಂದ ಸುಮಾರು 1200 ಹೆಕ್ಟೇರ್ ನಲ್ಲಿ ಬೆಳೆಯಲಾಗಿದ್ದ ಭತ್ತದ ಬೆಳೆ ನೆಲಕ್ಕೆ ಬಿದ್ದು ಸುಮಾರು 61 ಕೋಟಿಯಷ್ಟು ನಷ್ಟವಾಗಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ. ಈಗಾಗಲೇ ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಸರ್ವೇ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಒಂದೆರಡು ದಿನಗಳಲ್ಲಿ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪೂರ್ಣ ವರದಿ ಬಂದ ನಂತರ ಸಿಎಂ ಅವರನ್ನು ಭೇಟಿಯಾಗಿ ನಷ್ಟ ಪರಿಹಾರಕ್ಕೆ ಮನವಿ ಮಾಡಲಾಗುತ್ತದೆ. ಶ್ರೀರಾಮನಗರ, ಮರಳಿ, ಢಣಾಪೂರ, ಹೆಬ್ಬಾಳ, ಮುಸ್ಟೂರು, ಹೇರೂರು ಸುತ್ತಲಿನ ಗ್ರಾಮಗಳ ಹಣವಾಳು ಸೇರಿ ಹಲವು ಗ್ರಾಮಗಳಲ್ಲಿ ಭತ್ತದ ಗದ್ದೆ ನೆಲಕ್ಕೆ ಬಿದ್ದು ನಷ್ಟವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರೆಡ್ಡಿ ಶ್ರೀನಿವಾಸ, ಅಮರೇಶ ಗೋನಾಳ, ಬಿ.ಫಕೀರಯ್ಯ, ಶಿವರೆಡ್ಡಿ ನಾಯಕ, ಶರಣೇಗೌಡ, ಮಹಮದ್ ರಫಿ, ದ್ಯಾಮಣ್ಣ, ಸಿದ್ದನಗೌಡ, ಪ್ರಕಾಶ ಭಾವಿ, ಗವಿಸಿದ್ದಪ್ಪ, ಗಂಗಾವತಿ, ಕಾರಟಗಿ ತಹಸೀಲ್ದಾರ್‌ಗಳು, ಸಹಾಯಕ ಕೃಷಿ ನಿರ್ದೇಶಕರುಗಳು, ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.