ಆಲಮಟ್ಟಿ-ಚಿತ್ರದುರ್ಗ ಹೊಸ ರೈಲ್ವೆ ಮಾರ್ಗದ ಸರ್ವೆ ವರದಿ ಶೀಘ್ರ ಸಲ್ಲಿಕೆ : ಸಂಗಣ್ಣ ಕರಡಿ
Team Udayavani, Jul 13, 2022, 6:14 PM IST
ಕುಷ್ಟಗಿ : ಬಹುಜನರ ಬೇಡಿಕೆಯಾಗಿರುವ ಆಲಮಟ್ಟಿ-ಚಿತ್ರದುರ್ಗ ನೇರ ರೈಲ್ವೆ ಮಾರ್ಗದ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಒಂದೆರಡು ವಾರದಲ್ಲಿ ರೈಲ್ವೆ ಇಲಾಖೆಗೆ ವರದಿ ಸಲ್ಲಿಕೆಯಾಗಲಿದೆ. ಈ ನೂತನ ರೈಲ್ವೆ ಮಾರ್ಗಕ್ಕೆ ಕೊಪ್ಪಳವನ್ನೂ ಸಹ ಸೇರ್ಪಡೆಗೊಳಿಸಲಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಿಳಿಸಿದ್ದಾರೆ.
ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ಕಚೇರಿಯಲ್ಲಿ ಬುಧವಾರ ರೈಲ್ವೆ ಇಲಾಖೆ ಪ್ರಮುಖ ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಬಳಿಕ, ಸಂಸದರು ಈ ವಿಷಯ ತಿಳಿಸಿದ್ದು, ಆಲಮಟ್ಟಿ- ಚಿತ್ರದುರ್ಗ ರೈಲ್ವೆ ಮಾರ್ಗಕ್ಕೆ ಈ ಹಿಂದೆಯೇ ಸರ್ವೆ ಕಾರ್ಯ ಜರುಗಿದೆ, ಆದರೆ ಈ ಸರ್ವೆಯಲ್ಲಿ ಕೊಪ್ಪಳವನ್ನು ಸೇರ್ಪಡೆಗೊಳಿಸಿರಲಿಲ್ಲ. ಇದೀಗ ನಮ್ಮ ಮನವಿಯಂತೆ ಈ ನೂತನ ಮಾರ್ಗಕ್ಕೆ ಕೊಪ್ಪಳವನ್ನು ಸಹ ಸೇರ್ಪಡೆಗೊಳಿಸಿ, ಸರ್ವೆ ಕಾರ್ಯ ಪೂರ್ಣಗೊಳಿಸಲಾಗಿದೆ. ಒಂದೆರಡು ವಾರದಲ್ಲಿ ಸರ್ವೆ ವರದಿ ಸಲ್ಲಿಕೆಯಾಗಲಿದೆ.
ದರೋಜಿ-ಗಂಗಾವತಿ ನೂತನ ರೈಲ್ವೆ ಮಾರ್ಗದ ಸರ್ವೆ ಕಾರ್ಯಕ್ಕೆ ರೈಲ್ವೆ ಇಲಾಖೆ ಈಗಾಗಲೆ ಮಂಜೂರಾತಿ ನೀಡಿದ್ದು, ಐತಿಹಾಸಿಕ ತಾಣಗಳ ಸಂಪರ್ಕ ಹಾಗೂ ಉದ್ಯಮಕ್ಕೆ ಅನುಕೂಲವಾಗುವಂತೆ ಈ ಯೋಜನೆಯನ್ನು ಮಾರ್ಪಡಿಸಿ, ದರೋಜಿ-ಗಂಗಾವತಿ ರೈಲ್ವೆ ಮಾರ್ಗವನ್ನು ಬಾಗಲಕೋಟೆಯವರೆಗೂ ವಿಸ್ತರಿಸುವಂತೆ ಮನವಿ ಮಾಡಲಾಯಿತು, ಇದಕ್ಕೆ ರೈಲ್ವೆ ಇಲಾಖೆ ಮಹಾಪ್ರಬಂಧಕರು ತಾತ್ವಿಕವಾಗಿ ಸಮ್ಮತಿ ಸೂಚಿಸಿದ್ದಾರೆ. ಶೀಘ್ರದಲ್ಲಿಯೇ ಈ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ.
ಗದಗ-ವಾಡಿ ರೈಲ್ವೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ಬರುವ ಜನವರಿ ವೇಳೆಗೆ ತಳಕಲ್‌ನಿಂದ ಲಿಂಗಲಬಂಡಿವರೆಗೆ ರೈಲು ಸಂಚರಿಸಲು ಮಾರ್ಗ ಸಿದ್ಧವಾಗಲಿದೆ ಎಂಬುದಾಗಿ ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಆದರೆ, ತಳಕಲ್‌ನಿಂದ ಕೇವಲ ಲಿಂಗಲಬಂಡಿವರೆಗೆ ರೈಲು ಸಂಚರಿಸುವ ರೀತಿ ಆಗುವ ಬದಲು ಬರುವ ಫೆಬ್ರವರಿ ವೇಳೆಗೆ ಕನಿಷ್ಟ ತಳಕಲ್‌ನಿಂದ ಕುಷ್ಟಗಿ ವರೆಗಾದರೂ ರೈಲು ಸಂಚರಿಸುವಂತೆ ಯೋಜನೆ ಕಾರ್ಯಗತಗೊಳಿಸಬೇಕು ಎಂದು ಸಂಸದರು ಸೂಚನೆ ನೀಡಿದರು. ಇದಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳು ಫೆಬ್ರವರಿ ವೇಳೆಗೆ ಕುಷ್ಟಗಿ ವರೆಗೂ ಮಾರ್ಗಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ : ಮನೆ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ನೀಡಿ, ಇಲ್ಲದಿದ್ದಲ್ಲಿ ಪ್ರತಿಭಟನೆ ಎದುರಿಸಿ : ಕಾಗೋಡು
ಮುನಿರಾಬಾದ್-ಮೆಹಬೂಬ್‌ನಗರ ರೈಲ್ವೆ ಮಾರ್ಗದಲ್ಲಿ ರೈಲು ಇದೀಗ ಗಂಗಾವತಿ ಮಾರ್ಗವಾಗಿ ಕಾರಟಗಿವರೆಗೆ ಸಂಚರಿಸಲು ಅನುವಾಗಿದ್ದು, ಬರುವ ಫೆಬ್ರವರಿ ವೇಳೆಗೆ ಸಿಂದನೂರು ವರೆಗೂ ರೈಲು ಸಂಚರಿಸುವ ರೀತಿ ಕಾಮಗಾರಿ ಪೂರ್ಣಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಗಂಗಾವತಿ-ಹುಬ್ಬಳ್ಳಿ ಎಕ್ಸ್ ಪ್ರೆಸ್ ರೈಲಿಗೆ ಬನ್ನಿಕೊಪ್ಪ ದಲ್ಲಿ ನಿಲುಗಡೆ ನೀಡುವಂತೆ ಮಾಡಿದ ಮನವಿಗೆ ರೈಲ್ವೆ ಅಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಿಳಿಸಿದ್ದಾರೆ.
ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಲಯದ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ವಲಯದ ರೈಲ್ವೆ ಮಹಾಪ್ರಬಂಧಕ ಸಂಜೀವ್ ಕಿಶೋರ್ ಸೇರಿದಂತೆ ರೈಲ್ವೆ ಇಲಾಖೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.