ಗ್ರಾಪಂನಿಂದ ಶಾಲೆ ಅಭಿವೃದ್ಧಿ
Team Udayavani, Feb 1, 2020, 3:01 PM IST
ಯಲಬುರ್ಗಾ: ತಾಲೂಕಿನ ಗ್ರಾಪಂಗಳಿಂದ ಗ್ರಾಪಂ ವ್ಯಾಪ್ತಿಯ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಮುಂದಾಗಲಿವೆ. ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದ್ದೇನೆ ಎಂದು ತಾಪಂ ಇಒ ಡಾ| ಜಯರಾಂ ಚವಾಣ ಹೇಳಿದರು.
ತಾಲೂಕಿನ ಸಂಗನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಗ್ರಾಪಂ ಹಾಗೂ ಶಿಕ್ಷಣ ಇಲಾಖೆ ವತಿಯಿಂದ
ನಡೆದ ಗ್ರಾಪಂ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಗಳಿಗೆ ಅವಶ್ಯಕವಾಗಿ ಬೇಕಾಗಿರುವ ಕಾಂಪೌಂಡ್, ಶಾಲಾ ಮೈದಾನ ನಿರ್ಮಾಣ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವ ಕಾರ್ಯವನ್ನು ಗ್ರಾಪಂಗಳು ಕಡ್ಡಾಯವಾಗಿ ಮಾಡಲಿವೆ. ಪ್ರತಿಯೊಂದು ಶಾಲೆಯ ಮುಖ್ಯಶಿಕ್ಷಕರು ಹಾಗೂ ಎಸ್ ಡಿಎಂಸಿ ಸಮಿತಿ ಸದಸ್ಯರು ಗ್ರಾಪಂಗೆ ಸೌಲಭ್ಯಗಳ ಕುರಿತು ಅರ್ಜಿ ಸಲ್ಲಿಸಬೇಕು ಎಂದರು.
ಮಕ್ಕಳಿಗೆ ಕಬ್ಬಿಣದ ಕಡಲೆಯಾಗಿರುವ ಗಣಿತ ವಿಷಯದ ಬಗೆಗಿನ ಭಯ ಹೋಗಲಾಡಿಸಿ ಆತ್ಮಸ್ಥೈರ್ಯ ನೀಡಲು ಗಣಿತ ಸ್ಪರ್ಧೆ ಪೂರಕವಾಗಿದೆ ಎಂದು ತಿಳಿಸಿದರು. ಪಿಡಿಒ ರಾಮಣ್ಣ ದೊಡ್ಡಮನಿ ಮಾತನಾಡಿ, ಪರಿಕರಗಳ ಸಹಾಯದಿಂದ ಬೋಧಿ ಸುವುದರಿಂದ ಗಣಿತವನ್ನು ಸರಳವಾಗಿ ಅರ್ಥಮಾಡಿಸಬಹುದಾಗಿದೆ. ಇದರ ಜತೆಗೆ ಸರಳ ಸೂತ್ರ ಅನುಸರಿಸಿದರೆ ಗಣಿತದಷ್ಟುಸುಲಭ ವಿಷಯ ಯಾವುದೂ ಇಲ್ಲ. ಕಷ್ಟ ಎನಿಸುವ ವಿಷಯಗಳ ಕಡೆ ಹೆಚ್ಚಿನ ಗಮನ ಹರಿಸಿದರೆ ಎಲ್ಲವೂ ಸಲೀಸಾಗುತ್ತದೆ ಎಂದು ಸಲಹೆ ನೀಡಿದರು. ಮಕ್ಕಳಿಗೆ ಕ್ಲಿಷ್ಟವೆನಿಸುವಂತಹ ವಿಷಯಗಳನ್ನು ಸರಳ ವಿಧಾನಗಳ ಮೂಲಕ ಕಲಿಸುವ ಪ್ರಯತ್ನ ಶಿಕ್ಷಕರು ಮಾಡಬೇಕು. ವಿವಿಧ ಚಟುವಟಿಕೆ ಆಧಾರಿತ ಕಲಿಕೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಶಾಲೆಯ ಶಿಕ್ಷಕರು ಸರಿಯಾಗಿ ಮಕ್ಕಳ ವಿದ್ಯಾಭ್ಯಾಸದ ಅಭಿವೃದ್ಧಿ ಕಡೆ ವಿಶೇಷ ಗಮನ ಹರಿಸಬೇಕು. ಎಲ್ಲ ವಿಷಯಗಳಿಗಿಂತ ಮಕ್ಕಳಿಗೆ ಗಣಿತ ವಿಷಯ ಹೆಚ್ಚು ಅವಶ್ಯಕವಿದೆ. ಆದರಿಂದ ಮಕ್ಕಳಿಗೆ ಗಣಿತದ ಕುರಿತು ಸರಳ ವಿಧಾನ ಅನುಸರಿಸಿ ಪಾಠ ಬೋಧನೆ ಮಾಡಬೇಕು. ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಗುರುಗಳು ಹೇಳಿದ ಪಾಠವನ್ನು ಸರಿಯಾಗಿ ತಿಳಿದುಕೊಂಡು ಅಭ್ಯಾಸ ಮಾಡಬೇಕು ಎಂದರು.
ಬಸವರಾಜ ಹಳ್ಳಿ, ಲಕ್ಷ್ಮಣ್ಣ ಕೆರಳ್ಳಿ, ಎಸ್ ಡಿಎಂಸಿ ಪದಾಧಿಕಾರಿಗಳು, ಮುಖ್ಯಶಿಕ್ಷಕರು, ಗ್ರಾಪಂ ಸದಸ್ಯರು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.