ಕೊಪ್ಪಳ ನಾಳೆಯಿಂದ ಪ್ರತಿ ದಿನ ಮಧ್ಯಾಹ್ನ 2ರಿಂದ ಸ್ವಯಂ ಬಂದ್ ಗೆ ನಿರ್ಧಾರ
Team Udayavani, Jul 7, 2020, 3:05 PM IST
ಕೊಪ್ಪಳ: ಜಿಲೆಯಲ್ಲಿ ದಿನದಿಂದ ಕೋವಿಡ್-19 ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ನಗರಸಭೆಯು ನಾಳೆಯಿಂದ 15 ದಿನಗಳ ಕಾಲ ಮಧ್ಯಾಹ್ನ 2 ಗಂಟೆಯಿಂದ ಸ್ವಯಂ ಬಂದ್ ಮಾಡಲು ನಿರ್ಧಾರ ಮಾಡಿದೆ.
ಸೋಂಕನ್ನು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ಈಗಾಗಲೆ ಹಲವು ಕ್ರಮಗಳನ್ನ ಕೈಗೊಂಡಿದೆ. ಆದರೂ ಜಿಲ್ಲೆಯಲ್ಲಿ 139 ಜನರಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ನಗರ ಸಭೆಯು ನಗರದ ಎಲ್ಲ ವರ್ತಕರ, ವ್ಯಾಪಾರಸ್ಥರ ಸಭೆ ಕರೆದು ಚರ್ಚೆ ನಡೆಸಿದ್ದು ವ್ಯಾಪಾರಸ್ಥರೂ ಸಹಿತ ಪ್ರತಿ ದಿನ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆ ವರೆಗೂ ವ್ಯಾಪಾರ ವಹಿವಾಟು ನಡೆಸಲಿದ್ದೇವೆ. ಬಳಿಕ 2 ರಿಂದ ಅಂಗಡಿ ಮುಂಗಟ್ಟು ಬಂದ್ ಮಾಡಲಿದ್ದೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ರಾಜ್ಯ ಸರ್ಕಾರದ ನಿಯಮಾವಳಿ ಜೊತೆ ಜೊತೆಯಲ್ಲಿ ಕೊಪ್ಪಳ ನಗರ ಸಭೆ ವ್ಯಾಪ್ತಿಯ ಎಲ್ಲ ಅಂಗಡಿ ಮುಂಗಟ್ಟು ಬಂದ್ ಆಗಲಿವೆ. ಜೊತೆಗೆ ಎಪಿಎಂಸಿ, ಅಬಕಾರಿ ವ್ಯಾಪ್ತಿಯ ಮದ್ಯದ ಅಂಗಡಿಗಳನ್ನ ಬಂದ್ ಮಾಡಲು ಡಿಸಿ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.