ಕೋವಿಡ್ ನಿರ್ವಹಣೆಗೆ ವೈದ್ಯಕೀಯ ವಿದ್ಯಾರ್ಥಿಗಳ ಸೇವೆ

ಆರೋಗ್ಯ ಸೇವೆ ಉತ್ತಮಗೊಳಿಸಲು ಮಾನವ ಸಂಪನ್ಮೂಲ ಅಗತ್ಯ! ­ರೋಗಿಗೆ ಔಷಧಿ ಜತೆ ಮಾನಸಿಕ ಬೆಂಬಲ ಅವಶ್ಯ

Team Udayavani, May 8, 2021, 6:47 PM IST

uyttyt

ಕೊಪ್ಪಳ: ನಗರದ ಮೆಡಿಕಲ್‌ ಕಾಲೇಜಿನ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್‌-19 ನಿರ್ವಹಣೆ ಕಾರ್ಯಕ್ಕೆ ಅವರ ಸೇವೆ ಪಡೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಅವರು ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸದ್ಯಕ್ಕೆ ಆರೋಗ್ಯ ಸೇವೆ ಉತ್ತಮಗೊಳಿಸಲು ಮಾನವ ಸಂಪನ್ಮೂಲದ ಅಗತ್ಯವಿದೆ. ಆದ್ದರಿಂದ ವ್ಯವಸ್ಥಿತ ಕಾರ್ಯ ನಿರ್ವಹಣೆಗೆ ತರಬೇತಿ ಪಡೆದ ಮೆಡಿಕಲ್‌ ಕಾಲೇಜಿನ 142 ವಿದ್ಯಾರ್ಥಿಗಳನ್ನು ಕೋವಿಡ್‌ ನಿರ್ವಹಣೆ ಕಾರ್ಯದಲ್ಲಿ ತೊಡಗಿಸಲು ಕ್ರಮಕೈಗೊಳ್ಳಿ. ವೈದ್ಯಕೀಯ ತರಬೇತಿ ಪಡೆದಿರುವುದರಿಂದ ಕೋವಿಡ್‌ ರೋಗಿಗಳ ಚಿಕಿತ್ಸೆಯಲ್ಲಿಯೂ ಅವರು ಸಹಕಾರಿಯಾಗಲಿದ್ದಾರೆ ಎಂದರು.

ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕು ಕೋವಿಡ್‌ ಆಸ್ಪತ್ರೆಯಲ್ಲಿ ಪರಿಶೀಲನೆ ವೇಳೆ ಅಗತ್ಯ ಮಾನವ ಸಂಪನ್ಮೂಲದ ಕೊರತೆಯ ನಡುವೆಯೂ ಅತ್ಯಂತ ವ್ಯವಸ್ಥಿತವಾಗಿ ಅಲ್ಲಿನ ವೈದ್ಯರು ಕೋವಿಡ್‌ ಆಸ್ಪತ್ರೆ ನಿರ್ವಹಿಸುತ್ತಿದ್ದಾರೆ. ಅದರಂತೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿನ ವ್ಯವಸ್ಥೆ ಉತ್ತಮಗೊಳಿಸಿ. ರೋಗಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಕುಟುಂಬ ಸದಸ್ಯರೊಂದಿಗೆ ಸಂವಹನ ನಡೆಸಲು ವ್ಯವಸ್ಥೆ ಕಲ್ಪಿಸಿ. ರೋಗಿಗಳಿಗೆ ಔಷ ಧಿಗಳೊಂದಿಗೆ ಮಾನಸಿಕ ಬೆಂಬಲದ ಅಗತ್ಯವಿದೆ. ಆದ್ದರಿಂದ ಪ್ರತಿ ನಿತ್ಯ ಬೆಳಗ್ಗೆ ಹಾಗೂ ಸಂಜೆ ಕನಿಷ್ಠ 10 ನಿಮಿಷಗಳ ಕಾಲ ಅಧ್ಯಾತ್ಮಿಕ ವಿಷಯಗಳು, ಮೃದು ಸಂಗೀತ ಧ್ವನಿಮುದ್ರಿಕೆಗಳನ್ನು ಪ್ರಸಾರ ಮಾಡುವ ವ್ಯವಸ್ಥೆ ಮಾಡಿ ಎಂದರು.

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಒಂದು ಸಿ.ಟಿ ಸ್ಕ್ಯಾನ್‌ ಯಂತ್ರ ಆರಂಭವಾಗಿದೆ. ಡಿಎಂಎಫ್‌ ನಿಧಿಯಲ್ಲಿ ಇನ್ನೊಂದು ಸಿ.ಟಿ ಸ್ಕ್ಯಾನ್‌ ಯಂತ್ರ ಅಳವಡಿಸಲು ಕ್ರಮವಹಿಸಿ. ಗಿಣಿಗೇರಾ ಕೆರೆ ನಿರ್ಮಾಣ ಯೋಜನೆ, ಕೋಳೂರು ಬ್ರಿಡ್ಜ್ ದುರಸ್ಥಿ ಸೇರಿದಂತೆ ನೀರಾವರಿ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಎಂದು ಸಚಿವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಸದ ಸಂಗಣ್ಣ ಕರಡಿ ಮಾತನಾಡಿ, ಕೋವಿಡ್‌ ನಿಯಂತ್ರಣಕ್ಕಾಗಿ ನಗರದ ತರಕಾರಿ ಮಾರುಕಟ್ಟೆಯನ್ನು ನಗರದ ಹೊರವಲಯದಲ್ಲಿ ನಿರ್ಮಿಸಿದೆ. ಅಲ್ಲಿ ವ್ಯಾಪಾರಸ್ಥರಿಗೆ ಅಗತ್ಯ ಶುದ್ಧ ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ಉತ್ತಮ ರಸ್ತೆ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಿ ಎಂದರು.

ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿದರು. ಸಭೆಯಲ್ಲಿ ಡಿಸಿ ವಿಕಾಸ್‌ ಕಿಶೋರ್‌, ಜಿಪಂ ಸಿಇಒ ರಘುನಂದನ್‌ ಮೂರ್ತಿ, ಎಸ್ಪಿ ಟಿ.ಶ್ರೀಧರ, ಎಡಿಸಿ ಎಂ.ಪಿ.ಮಾರುತಿ, ಎಸಿ ನಾರಾಯಣರೆಡ್ಡಿ ಕನಕರೆಡ್ಡಿ, ಡಿಎಚ್‌ಒ ಡಾ| ಲಿಂಗರಾಜ ಟಿ., ಕಿಮ್ಸ್‌ ನಿರ್ದೇಶಕ ಡಾ| ವೈಜನಾಥ ಇಟಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.