ಬಿಜೆಪಿಯವರು ಕೋತಿ ಜಾತಿಗೆ ಸೇರಿದವರು : ತಂಗಡಗಿ

ಬಿಜೆಪಿಯಲ್ಲೇ ಬಿಎಸ್‌ವೈ ಟಾರ್ಗೆಟ್ ನಡೆದಿದೆ; 25 ಎಂಪಿಗಳು ಬಳೆ ತೊಟ್ಟು ಹಿಂದೆ ಸರಿಯಲಿ

Team Udayavani, Sep 30, 2019, 6:52 PM IST

Shivaraj-S.-Tangadagi

ಕೊಪ್ಪಳ: ಅನರ್ಹ ಶಾಸಕರ ಸ್ಥಿತಿ ನೋಡಿದರೆ ಅಯ್ಯೋ ಎಂದೆನಿಸುತ್ತೆ. ಬಿಜೆಪಿಯವರು ಉಂಡು ಮನೆಗೆ ಜಂತಿ ಎಣೆಸೋರು. ತಮಗೆ ಬೇಕಾದಂತೆ ಬಳಕೆ ಮಾಡಿಕೊಂಡು ನಡು ನೀರಿನಲ್ಲಿ ಕೈ ಬಿಡುತ್ತಾರೆ. ತಾವು ಬದುಕಲು ಏನು ಬೇಕಾದ್ರೂ ಮಾಡಬಲ್ಲರು.ಒಂದು ರೀತಿ ಬಿಜೆಪಿಯವರು ಕೋತಿಯ ಜಾತಿಗೆ ಸೇರಿದವರು ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಟೀಕೆ ಮಾಡಿದರು.

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ನಾನೂ ಈ ಹಿಂದೆ ಬಿಜೆಪಿಯಿಂದ ಅನರ್ಹನಾಗಿ ಕೋರ್ಟ್‌ನಲ್ಲಿ ಹೋರಾಟ ಮಾಡಿದ್ದೆ. ಬಿಜೆಪಿ ಆಗ ನಮ್ಮನ್ನೂ ಬಳಕೆ ಮಾಡಿ ಕೈ ಬಿಟ್ಟಿತು. ಈಗ 17 ಅನರ್ಹ ಶಾಸಕರಿಗೂ ಅದೇ ಸ್ಥಿತಿ ಬಂದೊದಗಿದೆ. ಕೋತಿ ನದಿಯಲ್ಲಿ ಮುಳುಗುವ ಹಂತಕ್ಕೆ ಬಂದಾಗ ತನ್ನ ಕೈಯಲ್ಲಿದ್ದ ಮರಿಯನ್ನೇ ಕೆಳಗೆ ಹಾಕಿಕೊಂಡು ತಾನು ಬದುಕುವ ಪ್ರಯತ್ನ ಮಾಡಿತಂತೆ. ಆ ರೀತಿ ಇನ್ನೊಬ್ಬರನ್ನು ತುಳಿದು ಬೆಳೆಯುವ ಜಾಯಮಾನದವರು ಎಂದರು.

ಬಿಎಸ್‌ವೈ ತಂತಿ ಮೇಲೆ ನಡಿಗೆ ಎಂದಿದ್ದಾರೆ. ನಿಜಕ್ಕೂ ಅವರ ಸ್ಥಿತಿ ನೋಡಿದರೆ ನನಗೆ ಅಯ್ಯೋ ಎಂದೆನಿಸುತ್ತದೆ. ಬಿಎಸ್‌ವೈ ಅವರನ್ನೇ ತುಳಿಯಲು ಬಿಜೆಪಿಯಲ್ಲಿ ಟಾರ್ಗೆಟ್ ನಡೆದಿದೆ. ಕಟೀಲ್, ಈಶ್ವರಪ್ಪ ಒಂದು ಹೇಳಿಕೆ ನೀಡಿದ್ರೆ, ಕತ್ತಿ, ಸವದಿ ಒಂದು ರೀತಿ ಹೇಳ್ತಿದ್ದಾರೆ. 17 ಶಾಸಕರ ರಾಜಿನಾಮೆ ಕೊಟ್ಟಾಗ ಇದ್ದ ಹುಮ್ಮಸ್ಸು ಈಗಿಲ್ಲ. ಬಿಎಸ್‌ವೈ ಹುಮ್ಮಸ್ಸು ಕುಗ್ಗಿದೆ. ಒಂದೆಡೆ ಪ್ರವಾಹದಿಂದ ಜನ ಕಣ್ಣೀರಿಡುತ್ತಿದ್ದಾರೆ. ಕೇಂದ್ರವು ಹಣ ಬಿಡುಗಡೆ ಮಾಡುತ್ತಿಲ್ಲ. ಗಂಡ ಹೆಂಡರ ಜಗಳದಲ್ಲಿ ಸಂತ್ರಸ್ಥರು ಬಡವಾಗಿದ್ದಾರೆ ಎಂದರು.

ರಾಜ್ಯ ಸರ್ಕಾರ ಸಂತ್ರಸ್ಥರಿಗೆ ಭಿಕ್ಷುಕರಿಗೆ ನೀಡಿದಂತೆ 10 ಸಾವಿರ ರೂ. ಕೊಟ್ಟು ಸುಮ್ಮನಾಗಿದೆ. 10 ಸಾವಿರದಲ್ಲಿ ಹೇಗೆ ಜೀವನ ಕಟ್ಟಿಕೊಳ್ಳಬೇಕು ? ಹಲವೆಡೆ ಕೊಟ್ಟ ಚೆಕ್‌ಗಳು ಬೌನ್ಸ್ ಆಗಿವೆ. ಇನ್ನೂ ಈಶ್ವರಪ್ಪ 10 ಸಾವಿರ ಕೊಟ್ಟಿದ್ದೆ ಹೆಚ್ಚಾಯ್ತು ಎಂದಿದ್ದಾರೆ. ರಾಜ್ಯದ 25 ಎಂಪಿಗಳು ಕೇಂದ್ರದಲ್ಲಿ ಹೋಗಿ ಹಣ ಕೇಳಲಿ. ಕೇಳಲು ಸಾಧ್ಯವಾಗದಿದ್ದರೆ ಬಳೆ ತೊಟ್ಟುಕೊಂಡು ಹಿಂದೆ ಸರಿಯಲಿ, ನಾವು ಹೋಗಿ ಕೇಂದ್ರದಲ್ಲಿ ಹಣ ಕೇಳುತ್ತೇವೆ ಎಂದರಲ್ಲದೇ ಬಿಜೆಪಿ ಓರ್ವ ಎಂಪಿ ನೆರೆ ಹಾನಿಗೆ ಕೇಂದ್ರದ ಪರಿಹಾರ ಅಗತ್ಯವಿಲ್ಲ ಎಂದು ಮಾತನಾಡಿದ್ದಾನೆ ನಿಜಕ್ಕೂ ಇದು ನಾಚಿಕೆಗೇಡಿನ ಸಂಗತಿ ಎಂದರು.

ಸಿದ್ದರಾಮಯ್ಯರೇ ವಿಪಕ್ಷ ನಾಯಕ :
ಒಂದು ಮನೆ ಎಂದಮೇಲೆ ಸಣ್ಣ ಪುಟ್ಟ ಗೊಂದಲ ಇರುವುದು ಸಹಜ. ಮನೆಯೊಳಗೆ ಎಲ್ಲ ಸರಿ ಹೋಗುತ್ತದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಸೇರಿ ಪರಮೇಶ್ವರ ಅವರು ಸಿದ್ದರಾಮಯ್ಯ ಅವರು ನಾಯಕ ಎಂದಿದ್ದಾರೆ. ಸಿದ್ದರಾಮಯ್ಯ ಅವರು ಪ್ರಶ್ನಾತೀತ ನಾಯಕ. ಅದರಲ್ಲಿ ಎರಡು ಮಾತಿಲ್ಲ. ಅವರ ಬಗ್ಗೆ ಟೀಕೆ ಮಾಡುವ ಹಕ್ಕು ಯಾರಿಗೂ ಇಲ್ಲ. ಅವರೇ ಕಾಂಗ್ರೆಸ್‌ನಿಂದ ವಿಪಕ್ಷದ ನಾಯಕರು ಆಗಲಿದ್ದಾರೆ ಎಂದರು.

ಬಿಜೆಪಿ ದ್ವೇಷದ ರಾಜಕಾರಣ :
ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಿಎಸ್‌ವೈ ಮೊದಲ ದಿನವೇ ದ್ವೇಷದ ರಾಜಕಾರಣ ಮಾಡಲ್ಲ ಎಂದಿದ್ದರು. ಆದರೆ ಪ್ರತಿಯೊಂದರಲ್ಲೂ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಅನುದಾನ ಕಡಿತ ಮಾಡಿದ್ದಾರೆ. ಈ ಹಿಂದಿನ ಪ್ರಕರಣಗಳನ್ನು ಮರು ತನಿಖೆ ಮಾಡಿಸುವ ಮಾತನ್ನಾಡಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ, ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.