ಸೋಂಕು ದೃಢಪಟ್ಟರೂ ಸೀಲ್‌ಡೌನ್ ಆಗದ ಪ್ರದೇಶ
Team Udayavani, Jun 27, 2020, 4:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿದ್ದಾಪುರ: ದೆಹಲಿಯಿಂದ ಮರಳಿದ್ದ ಕಾರಟಗಿ ಪಟ್ಟಣದ 19ನೇ ವಾರ್ಡ್ ಇಂದಿರಾನಗರದ ನಿವಾಸಿಯಾಗಿರುವ 23 ವರ್ಷದ ಯುವತಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಯುವತಿಯನ್ನು ಗುರುವಾರ ಸಂಜೆಯೇ ಕೊಪ್ಪಳದ ಕೋವಿಡ್-19 ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದರೆ ಆ ಯುವತಿ ವಾಸಿಸುತ್ತಿದ್ದ ಮನೆಯ ಸುತ್ತಮುತ್ತ ಶುಕ್ರವಾರ ಸಂಜೆವರೆಗೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಆ ಪ್ರದೇಶವನ್ನು ಸೀಲ್‌ಡೌನ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು.
ಶುಕ್ರವಾರ ಬೆಳಗ್ಗೆ ಯುವತಿ ವಾಸಿಸುತ್ತಿದ್ದ ಮನೆಗೆ ತಹಶೀಲ್ದಾರ್ ಕವಿತಾ ಆರ್., ಪುರಸಭೆ ಮುಖ್ಯಾಧಿಕಾರಿ ಎನ್. ಶಿವಲಿಂಗಪ್ಪ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಕುಂತಲಾ ಪಾಟೀಲ್, ಪಿಎಸ್‌ಐ ಅವಿನಾಶ ಕಾಂಬ್ಳೆ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಮನೆಯವರಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಕೋವಿಡ್ ಬಗ್ಗೆ ಮನೆಯವರಿಗೆ ತಿಳಿಹೇಳಿ ಮನೆಯವರೆಲ್ಲರೂ ಹೊಂ ಕ್ವಾರಂಟೈನ್‌ಲ್ಲಿರುವಂತೆ ತಿಳಿಸಿ. ಆ ವಾರ್ಡ್ ಸುತ್ತಮುತ್ತ ಸಂಚರಿಸಿ ಕೋವಿಡ್ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಬಂದಿದ್ದರು.
ತಹಶೀಲ್ದಾರ್ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿದ ಬಳಿಕವಾದರೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆ ಪ್ರದೇಶವನ್ನು ಸೀಲ್‌ಡೌನ್ ಮಾಡಬೇಕಾಗಿತ್ತು. ಆದರೆ ಶುಕ್ರವಾರ ಸಂಜೆವರೆಗೂ ಸೀಲ್ ಡೌನ್ ಮಾಡದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.