ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿಯೇ ಬಿಟ್ಟ ಸಿದ್ದರಾಮಯ್ಯ
ಷಡ್ಯಂತ್ರ ನಡೆಸಿ ಸೋಲಿಸುವ ಕುತಂತ್ರ ನಡೆಸುವ ಸಂಭವವಿದೆ...
Team Udayavani, Nov 20, 2022, 7:41 PM IST
ಗಂಗಾವತಿ :ಮುಂದಿನ 2023 ರ ವಿಧಾನಸಭೆಯ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯನ್ನು ಗೆಲ್ಲಿಸುವ ಮೂಲಕ ನನಗೆ ಬಲ ನೀಡಿ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. .
ಅವರು ಭಾನುವಾರ ವಳಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ತಕರ್ತ ಅರಸಿನಕೇರಿ ಹನುಮಂತಪ್ಪ ನಿವಾಸದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನೆರೆದ ಜನರಿಗೆ ಮನವಿ ಮಾಡಿದರು.
ಬಿಜೆಪಿಯವರ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ರೋಸಿ ಹೋಗಿದ್ದು ಜೆಡಿಎಸ್- ಬಿಜೆಪಿಗೆ ನೆರವಾಗುತ್ತದೆ .ಆದ್ದರಿಂದ ಕಾಂಗ್ರೆಸ್ ಪಕ್ಷ ಜನರ ಪರವಾದ ಆಡಳಿತದ ನೀಡುವ ಪಕ್ಷವಾಗಿದ್ದು ಜನಸಾಮಾನ್ಯರು ಕೃಷಿ ಕೂಲಿಕಾರರಿಗೆ ನೆರವಾಗುತ್ತದೆ .ಮಾಜಿ ಮಂತ್ರಿ ಅನ್ಸಾರಿ ಅಭಿವೃದ್ಧಿ ಹರಿಕಾರನಾಗಿದ್ದು, ಜನಪರವಾದ ಆಡಳಿತ ನೀಡುವ ವ್ಯಕ್ತಿ. ಕೆಲವರು ಅನ್ಸಾರಿ ಬಗ್ಗೆ ಷಡ್ಯಂತ್ರ ನಡೆಸಿ ಸೋಲಿಸುವ ಕುತಂತ್ರ ನಡೆಸುವ ಸಂಭವವಿದ್ದು ಮತದಾರರು ಅನ್ಸಾರಿಯನ್ನು ಗೆಲ್ಲಿಸುವಂತೆ ಪದೇ ಪದೇ ಮನವಿ ಮಾಡಿದರು.
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ,ಭೀಮಾನಾಯಕ್, ಇಕ್ಬಾಲ್ಅನ್ಸಾರಿ, ಶಾಮೀದ್ ಮನಿಯಾರ್ ಕಾಂಗ್ರೆಸ್ ಯುವ ಮುಖಂಡ ಅರಸಿನಕೇರಿ ಹನುಮಂತಪ್ಪ ಸೇರಿ ಅನೇಕರಿದ್ದರು.
2013 ರಲ್ಲಿ ಇಕ್ಬಾಲ್ ಅನ್ಸಾರಿ ಜೆಡಿಎಸ್ ನಿಂದ ಗೆದ್ದು ಶಾಸಕರಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅವರು ಬಿಜೆಪಿಯ ಪರಣ್ಣ ಈಶ್ವರಪ್ಪ ಮುನವಳ್ಳಿ ಅವರ ವಿರುದ್ದ ಸೋಲು ಅನುಭವಿಸಿದ್ದರು. ಕಾಂಗ್ರೆಸ್ ಟಿಕೆಟ್ ಗಾಗಿ ಕೆಲ ಪ್ರಮುಖ ಮುಖಂಡರು ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.