ಸಿದ್ದರಾಮಯ್ಯ ಉಡಾಫೆ ಮಾತು ನಿಲ್ಲಿಸಲಿ: ಅಶ್ವಥ
Team Udayavani, Apr 21, 2019, 4:06 PM IST
ಯಲಬುರ್ಗಾ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಉಡಾಫೆಯಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ ನಾರಾಯಣ ಹೇಳಿದರು.
ಅವರು ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಏರ್ ಸರ್ಜಿಕಲ್ ಸ್ಟ್ರೈಕ್ ಮೋದಿ ಮಾಡಿದ್ದಾರೆಯೇ ಎಂದು ಪ್ರಶ್ನಿಸುವ ಸಿದ್ದರಾಮಯ್ಯ ತಾವು ಸಿಎಂ ಆಗಿದ್ದಾಗ ಜಾರಿಗೆ ತಂದ ಯೋಜನೆಗಳಿಗೆ ತಮ್ಮ ಮನೆಯಿಂದ ಹಣ ನೀಡಿದ್ದಾರೆಯೇ. ಸೈನ್ಯಕ್ಕೆ ಕೇಂದ್ರ ಸರಕಾರ ಸ್ವಾತಂತ್ರ್ಯ ನೀಡಿದೆ. ಕೇಂದ್ರದ ಯಾವುದೇ ಸಚಿವರ ಮೇಲೆ ಭ್ರಷ್ಟಚಾರ ಆರೋಪಗಳಿಲ್ಲ. ದೇಶದ ಭದ್ರತೆಗೆ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.
ಶಾಸಕ ಹಾಲಪ್ಪ ಆಚಾರ್ ಮಾತನಾಡಿ, ನರೇಂದ್ರ ಮೋದಿ ಅವರು ಭ್ರಷ್ಟಚಾರ ರಹಿತ ಆಡಳಿತ ನೀಡಿದ್ದಾರೆ. ಕೇಂದ್ರದ 126 ಯೋಜನೆಗಳು ಜನರ ಮನಸ್ಸಿನಲ್ಲಿವೆ. ರಾಜ್ಯ ಸಮ್ಮಿಶ್ರ ಸರಕಾರಕ್ಕೆ ಕಣ್ಣು, ಕಿವಿ ಇಲ್ಲ. ಸಂಸದ ಸಂಗಣ್ಣ ಕರಡಿ ಕೊಪ್ಪಳ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಬಿಜೆಪಿ ಅಭ್ಯರ್ಥಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ಮತ್ತೂಮ್ಮೆ ಆರ್ಶೀವಾದ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.