ವಸತಿ ನಿಲಯದಲ್ಲಿ ನೀರವ ಮೌನ
•ವಿದ್ಯಾರ್ಥಿಗಳಿಗೆ 4 ದಿನಗಳ ರಜೆ•3 ಆರೋಪಿಗಳಿಗೆ ಜಾಮೀನು!•ಮನೆಗೆ ತೆರಳಿದ ಮಕ್ಕಳು
Team Udayavani, Aug 20, 2019, 1:24 PM IST
ಕೊಪ್ಪಳ: ನಗರದ ಬನ್ನಿಕಟ್ಟಿ ಏರಿಯಾದ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ವಿದ್ಯುತ್ ಅವಘಡದಿಂದ ಐವರು ವಿದ್ಯಾರ್ಥಿಗಳ ಸಾವಿನ ಪ್ರಕರಣದಿಂದಾಗಿ ವಸತಿ ನಿಲಯದಲ್ಲಿ ನೀರವ ಮೌನ ಆವರಿಸಿದೆ. ನಿಲಯದ ವಿದ್ಯಾರ್ಥಿಗಳಿಗೆ ನಾಲ್ಕು ದಿನ ರಜೆ ನೀಡಲಾಗಿದ್ದು, ಕಟ್ಟಡ ಮಾಲಿಕ ಸೇರಿ ಮೂರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಗೆ ಜಾಮೀನು ದೊರೆತಿದೆ.
ವಿದ್ಯಾರ್ಥಿಗಳು ಮೃತಪಟ್ಟ ಬೆನ್ನಲ್ಲೇ ಉಳಿದ ಮಕ್ಕಳನ್ನು ಪಾಲಕರು ಮನೆಗಳಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಮೊದಲು ವಸತಿ ನಿಲಯದ ವಾರ್ಡನ್ ಬಸವರಾಜ ಬೆಳವಾಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು ಆ ಬೆನ್ನಲ್ಲೇ ಜೆಸ್ಕಾಂ ಅಧಿಕಾರಿ ನಾಗರತ್ನ ಅವರನ್ನು ಬಂಧಿಸಲಾಗಿತ್ತು. ಆದರೆ ಈ ಆರೋಪಿಗಳಿಗೆ ರವಿವಾರ ರಾತ್ರಿ ವೇಳೆಗೆ ಕೋರ್ಟ್‌ನಿಂದ ಜಾಮೀನು ದೊರೆತಿದೆ. ಇನ್ನೂ ಕಟ್ಟಡ ಮಾಲಿಕ ಬಸವನಗೌಡ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಾಲಿಕ ಬಂಧನವಾಗುತ್ತಿದ್ದಂತೆ ಜಾಮೀನು ದೊರೆತಿದ್ದು, ಅಚ್ಚರಿ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ದೊರೆತಿದೆ. ಇನ್ನೂ ಹಾಸ್ಟೆಲ್ನಲ್ಲಿ ನಡೆದ ಅವಘಡದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು ಇಲ್ಲದೇ ಹಾಸ್ಟೆಲ್ನಲ್ಲಿ ನೀರವ ಮೌನ ಆವರಿಸಿದೆ. ಕೆಲವು ವಿದ್ಯಾರ್ಥಿಗಳಂತೂ ಐವರು ವಿದ್ಯಾರ್ಥಿಗಳ ಸಾವಿನ ಸನ್ನಿವೇಶವನ್ನು ಕಣ್ಣಾರೆ ಕಂಡು ಹಾಸ್ಟೆಲ್ಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೆದರಿಕೆಯಿಂದಲೇ ನಮಗೆ ಹಾಸ್ಟೆಲ್ಗೆ ತೆರಳಲು ಭಯವಾಗುತ್ತಿದೆ ಎನ್ನುತ್ತಿದ್ದಾರೆ. ಇಷ್ಟೆಲ್ಲ ಬೆಳವಣಿಗೆ ನಡೆದರೂ ಹಾಸ್ಟೆಲ್ ಮುಂಭಾಗದಲ್ಲಿರುವ ವಿದ್ಯುತ್ ತಂತಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕಾರ್ಯ ನಡೆಯದೇ ಇರುವುದು ಶೋಚನೀಯ ಸಂಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.